ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು

ಕತ್ತಿಯಿಂದ ಹೊಡೆದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ, ಚೆಲ್ಲಾಪಿಲ್ಲಿಯಾಗಿ ಬಿದ್ದ ಶವಗಳು
ಸಾಂದರ್ಭಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on:Feb 24, 2023 | 8:06 PM

ಕಾರವಾರ: ಉತ್ತರ ಕನ್ನಡ(Uttara Kannada) ಜಿಲ್ಲೆ ಭಟ್ಕಳ ತಾಲೂಕಿನ ಹಾಡವಳ್ಳಿ(hadavalli Village) ಬಳಿ ಇಂದು(ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ(murder) ಮಾಡಲಾಗಿದೆ. ಪತಿ ಶಂಭು ಭಟ್(65) ಪತ್ನಿ ಮಾದೇವಿ ಭಟ್(40) ಮಗ ರಾಜೀವ್ ಭಟ್(34) ಸೊಸೆ ಕುಸುಮಾ ಭಟ್(30) ಎನ್ನುವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಅದೃಷ್ಟವಶಾತ್ ಕುಸುಮಾ ದಂಪತಿಯ ಮಗು ಬಚಾವ್ ಆಗಿದೆ.

ಇದನ್ನೂ ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಲ್ಲಿ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.  ಹಿರಿಯ ಮಗನ ಪತ್ನಿ & ಆಕೆಯ ಕುಟುಂಬಸ್ಥರು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಶಂಭು ಭಟ್ ಹಿರಿಯ ಮಗ ಕಿಡ್ನಿ ವೈಫಲ್ಯದಿಂದ ಮೃತಪಟ್ಟಿದ್ದರು. ಪತಿ ಸಾವಿನ ಬಳಿಕ ವಿದ್ಯಾ ಭಟ್ ತವರು ಮನೆ ಸೇರಿದ್ದಳು. ಬಳಿಕ ಜೀವನಾಂಶ ಹಾಗೂ ಆಸ್ತಿ ವಿಚಾರದಲ್ಲಿ ಶಂಭು ಭಟ್ ಹಾಗೂ ವಿದ್ಯಾ ಭಟ್ ತವರು ಮನೆಯವರ ನಡುವೆ ಗಲಾಟೆ ನಡೆದಿತ್ತು. ಜೀವನಾಂಶ ಕೊಡಲು ನಿರಾಕರಿಸಿದ್ದರಿಂದ ಕೊಲೆ ಮಾಡಲಾಗಿದೆ. ಸದ್ಯ ಶ್ರೀಧರ್ ಭಟ್​ನನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಟ್ಟೆ ವ್ಯಾಪಾರಿ ಆತ್ಮಹತ್ಯೆಗೆ ಶರಣು

ಕೊಡಗು: ಮಡಿಕೇರಿ ತಾಲೂಕಿನ ನಾಪೋಕ್ಲು ಪಟ್ಟಣದಲ್ಲಿ ಬಟ್ಟೆ ವ್ಯಾಪಾರಿ ಹೆಚ್.ಕೆ.ಸಂದೀಪ್(40) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಲತಃ ಸಕಲೇಶಪುರ ತಾಲೂಕಿನ ಹಡ್ಲಹಳ್ಳಿ ನಿವಾಸಿಯಾಗಿರುವ ಸಂದೀಪ್; ಕಳೆದ 20 ವರ್ಷಗಳಿಂದ ನಾಪೋಕ್ಲುವಿನಲ್ಲಿ ಆರ್​​ಹೆಚ್​ ಬಟ್ಟೆಮಳಿಗೆ ನಡೆಸುತ್ತಿದ್ದ. ಆದ್ರೆ, ವ್ಯಾಪಾರದಲ್ಲಿ ನಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 6:43 pm, Fri, 24 February 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್