Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಯ್ಯಪ್ಪ ಮಾಲೆ ಧರಿಸಿ ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪಿಗಳ ಸೆರೆ

ಅಯ್ಯಪ್ಪ ಮಾಲೆ ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ಇಬ್ಬರು ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದರು. ನಿಡ್ಲೆ ಗ್ರಾಮದ ಧನುಷ್‌ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಮುಂದೇನು ಮಾಡಿದರು? ಈ ಸ್ಟೋರಿ ಓದಿ..

ಮಂಗಳೂರು: ಅಯ್ಯಪ್ಪ ಮಾಲೆ ಧರಿಸಿ ದೇಣಿಗೆ ಸಂಗ್ರಹಿಸಿ ವಂಚಿಸುತ್ತಿದ್ದ ಆರೋಪಿಗಳ ಸೆರೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 08, 2023 | 9:05 AM

ಮಂಗಳೂರು, ಡಿಸೆಂಬರ್​ 08: ಅಯ್ಯಪ್ಪ ಮಾಲೆ (Ayyappa Male)  ಧರಿಸಿ, ಸಂಸ್ಥೆಯೊಂದರ ಹೆಸರನ್ನು ದುರುಪಯೋಗಪಡಿಸಿಕೊಂಡು ದೇಣಿಗೆ ಸಂಗ್ರಹಿಸುತ್ತಿದ್ದ ಇಬ್ಬರು ಯುವಕರನ್ನು ಹಿಡಿದು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ, ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಹೆಸರಿನಲ್ಲಿ ದೇಣಿಗೆ ಕೇಳುತ್ತಿದ್ದರು.

ಯುವಕರು ಬೆಂಗಳೂರಿನ ಸ್ವಾಮಿ ವಿವೇಕಾನಂದ ಸೋಷಿಯಲ್‌ ಸರ್ವಿಸ್‌ ಟ್ರಸ್ಟ್‌ (ರಿ) ಹೆಸರಲ್ಲಿ ನಿಡ್ಲೆ ಗ್ರಾಮದ ಧನುಷ್‌ ಎಂಬವರ ಬಳಿ ದೇಣಿಗೆ ಕೇಳಿದ್ದಾರೆ. ಅನುಮಾನಗೊಂಡ ಧನುಷ್ ಸಂಸ್ಥೆಯ ಮೊಬೈಲ್‌ ನಂಬರ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಆಗ ಸಂಸ್ಥೆಯವರು ನಾವು ಯಾರನ್ನೂ ಕಳುಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಷಯ ತಿಳಿದ ಕೂಡಲೆ ಧನುಷ್​ ಸೇರಿದಂತೆ ಸುತ್ತಮುತ್ತಲಿನ ಜನರು ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿತರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಯುವಕರಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದನು. ಸದ್ಯ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗೆ ನೋ ಎಂಟ್ರಿ ಎಂದ ಪ್ರಿನ್ಸಿಪಾಲ್​​, ಕೊನೆಗೇನಾಯ್ತು?

ಡಿಸಿ ಕೆ.ಎ ದಯಾನಂದ್ ಫೋಟೋ ದುರ್ಬಳಕೆ, ಹಣಕ್ಕೆ ಬೇಡಿಕೆ: ದೂರು ದಾಖಲು

ಬೆಂಗಳೂರಿನಲ್ಲಿ ಸೈಬರ್​ ಕ್ರೈಂ ಪ್ರರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲಂತು ವಿಐಪಿ ಮತ್ತು ವಿವಿಐಪಿ ವ್ಯಕ್ತಿಗಳ ಹೆಸರಿನಲ್ಲಿ ವಂಚಿಸುವುದು ಜಾಸ್ತಿಯಾಗಿದೆ. ಇದೀಗ ವಂಚಕರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅವರ ಹೆಸರನ್ನು ಬಳಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೇಂದ್ರ ವಿಭಾಗದ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಅವರ ಫೋಟೋ ದುರ್ಬಳಕೆ ಮಾಡಿಕೊಂಡು ವಾಟ್ಸ್ ಆ್ಯಪ್ ಸಂಖ್ಯೆ ಸೃಷ್ಟಿಸಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಪರಿಚಯಸ್ಥರಿಗೆ ತುರ್ತು ಅಗತ್ಯ ಹಣ ಬೇಕಿದೆ, ಕೂಡಲೇ ಟ್ರಾನ್ಸ್ಫರ್​ ಮಾಡಿ ಎಂದು ಸಂದೇಶ ಕಳಹುಸಿದ್ದಾರೆ. ಈ ರೀತಿ ಜಿಲ್ಲಾಡಳಿತದ ಹಲವು ಇಲಾಖೆಯ ಅಧಿಕಾರಿಗಳು ಹಾಗೂ ಇತರರಿಗೆ ಸಂದೇಶ ರವಾನಿಸಿದ್ದಾರೆ. ಅನುಮಾನಗೊಂಡ ಕೆಲ ಅಧಿಕಾರಿಗಳು ವಿಚಾರಿಸಿದಾಗ ಕೃತ್ಯ ಬಯಲಾಗಿದೆ. ಸದ್ಯ ಘಟನೆ ಸಂಬಂಧ ಜಿಲ್ಲಾಧಿಕಾರಿ ಕೆ.ಎ ದಯಾನಂದ್​ ಅವರು ಕೇಂದ್ರ ವಿಭಾಗದ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:00 am, Fri, 8 December 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ