AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ

ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಗೆ ನುಗ್ಗಿದ ಖದೀಮರಿಂದ ನಗದು, ಮೊಬೈಲ್ ಕಳ್ಳತನ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Oct 07, 2022 | 1:06 PM

Share

ಗದಗ: ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ನೆಮ್ಮದಿ ಮತ್ತು ಸೂಕ್ತ ರಕ್ಷಣೆ ಇಲ್ಲ ಎಂಬುದು ಕಳ್ಳತನ ಪ್ರಕರಣದಿಂದ ಬೆಳಕಿಗೆ ಬಂದಿದೆ.​​ ಆಸ್ಪತ್ರೆಯ ಹೆರಿಗೆ, ಮಕ್ಕಳ ವಿಭಾಗಕ್ಕೂ ನುಗ್ಗಿ ಕಳವು ಮಾಡಲಾಗಿದೆ. ಇದರೊಂದಿಗೆ ಮಕ್ಕಳ ಕಳ್ಳರ ಹಾವಳಿಯೊಂದಿಗೆ ಆಸ್ಪತ್ರೆಯಲ್ಲಿ ಕಳ್ಳರ ಹಾವಳಿಯ ಭೀತಿ ಎದುರಾಗಿದೆ. ರಾತ್ರಿ ಬಾಣಂತಿಯರು ನಿದ್ರೆಯಲ್ಲಿದ್ದಾಗ ನಗದು ಮೊಬೈಲ್ ಕಳ್ಳತನ ಮಾಡಲಾಗಿದ್ದು, ಮಕ್ಕಳ ಕಳವು ಆತಂಕವೂ ಎದುರಾಗಿದೆ. ಆಸ್ಪತ್ರೆಯಲ್ಲಿ ಸಿಸಿಕ್ಯಾಮರಾ ಇದ್ದೂ ಇಲ್ಲದಂತಾಗಿದೆ ಎಂದು ರೋಗಿಗಳು ಅಸಮಧಾನ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಆತಂಕದ ನಡುವೆ ರೋಗಿಗಳು ಆಸ್ಪತ್ರೆಯಲ್ಲಿ ದಿನ ಕಳೆಯುತ್ತಿದ್ದರೂ ಜಿಮ್ಸ್​ ಆಸ್ಪತ್ರೆ ಆಡಳಿತ ಕ್ಯಾರೇ ಅನ್ನುತ್ತಿಲ್ಲ ಎಂದು ರೋಗಿಗಳು ಹೇಳುತ್ತಿದ್ದಾರೆ. ಸಿಸಿ ಟಿವಿ ಪರಿಶೀಲನೆ ನಡೆಸುವಂತೆ ಕೇಳಿಕೊಂಡರೂ ಕಳ್ಳರ ಚಲನವಲನ ಪರಿಶೀಲನೆ ಮಾಡದೇ ವೈದ್ಯರ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.

ಸುಲಿಗೆ ಪ್ರಕರಣದಲ್ಲಿ ಮೂವರ ಬಂಧನ

ಬೆಂಗಳೂರು: ನಗರದ ವಿದ್ಯಾರಣ್ಯಪುರ ಹಾಗೂ ಚಿಕ್ಕಜಾಲ ಪೊಲೀಸರು ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೊಬೈಲ್ ಸುಲಿಗೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆಕೋರರಿಂದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವವರನ್ನೇ ಟಾರ್ಗೆಟ್ ಮಾಡುತ್ತಿದ್ದ ಖದೀಮರು ಅವರನ್ನು ಅಡ್ಡಗಟ್ಟಿ ಮೊಬೈಲ್​ಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಪ್ರಕರಣ ಸಂಬಂಧ ಚಿಕ್ಕಜಾಲ ಪೊಲೀಸರು ನಾಗೇಶ ಎಂಬ ಆರೋಪಿಯನ್ನು ಬಂಧಿಸಿದರೆ, ವಿದ್ಯಾರಣ್ಯಪುರ ಪೊಲೀಸರಿಂದ ಸಮಾದ್ ಹಾಗೂ ಶಿವಕುಮಾರ್ ಎಂಬವರ ಬಂಧನವಾಗಿದೆ.

ಕೆಲಸ ಕೊಡಿಸುವ ನೆಪದಲ್ಲಿ ಕೋಟಿ ಕೋಟಿ ವಂಚನೆ

ಬೆಂಗಳೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಅಭ್ಯರ್ಥಿಗಳಿಗೆ ಪೊಲೀಸರು ಕೋಟಿ ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣ ನಗರದಲ್ಲಿ ಬೆಳಕಿಗೆ ಬಂದಿದ್ದು, ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿಯನ್ನ ವಶಕ್ಕೆ ಪಡೆದ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. BWSSB ನಲ್ಲಿ ಕೆಲಸ ಕೊಡಿಸೂದಾಗಿ‌ ಹೇಳಿ ಚಿಕ್ಕಜಾಲ ಠಾಣೆಯ ಎಸ್​ಬಿ ಕಾನ್​ಸ್ಟೇಬಲ್ ರವಿ ಮತ್ತು ಇನ್​ಸ್ಪೆಕ್ಟರ್ ಪ್ರವೀಣ್ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ. ಸದ್ಯ ರವಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:06 pm, Fri, 7 October 22

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ