AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ

5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಹಣಕ್ಕಾಗಿ ವ್ಯಕ್ತಿಯನ್ನ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಬಿಂಬಿಸಿದ್ದ ಗ್ಯಾಂಗ್​ ಅಂದರ್​ ಆಗಿದೆ. ಓರ್ವ ಮಹಿಳೆ ಸೇರಿ 6 ಜನ ಆರೋಪಿಗಳನ್ನ ಹೊಸಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದು, ಆರೋಪಿಗಳ ಪ್ಲ್ಯಾನ್​ ಎಂತವರ ಎದೆಯನ್ನೂ ಒಮ್ಮೆ ನಡುಗಿಸುವಂತಿದೆ.

5 ಕೋಟಿ ವಿಮೆ ಹಣಕ್ಕಾಗಿ ಓರ್ವನ ಮರ್ಡರ್​: ಖತರ್ನಾಕ್​ ಜಾಲ ಭೇದಿಸಿದ ಖಾಕಿ
ಆರೋಪಿಗಳ ಬಂಧನ
ವಿನಾಯಕ ಬಡಿಗೇರ್​
| Edited By: |

Updated on:Oct 03, 2025 | 4:46 PM

Share

ಬಳ್ಳಾರಿ, ಅಕ್ಟೋಬರ್​ 03: ಅನಾಥರು ಮತ್ತು ತೀವ್ರ ಅನಾರೋಗ್ಯ ಪೀಡಿತರ ಹೆಸರಲ್ಲಿ ಕೋಟ್ಯಂತ ರೂಪಾಯಿ ವಿಮೆ ಮಾಡಿಸಿ, ವಿಮೆ ಹಣಕ್ಕಾಗಿ ಸಿನಿಮಾ ಸ್ಟೈಲ್​ನಲ್ಲಿ ಕೊಲೆ ಮಾಡುತ್ತಿದ್ದ ಜಾಲವೊಂದನ್ನ ಹೊಸಪೇಟೆ (Hospet) ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇನ್ಶುರೆನ್ಸ್​ ಹಣಕ್ಕಾಗಿ ಕೊಲೆ ಮಾಡಿ, ಅದನ್ನ ಅಪಘಾತ ಎಂದು ಈ ಗ್ಯಾಂಗ್​ ಬಿಂಬಿಸುತ್ತಿತ್ತು ಎಂಬ ಆಘಾತಕಾರಿ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದ್ದು, ಓರ್ವ ಮಹಿಳೆ ಸೇರಿ 6 ಜನರನ್ನ ಅರೆಸ್ಟ್​ ಮಾಡಲಾಗಿದೆ.

ಕಳೆದ ತಿಂಗಳ ಸೆಪ್ಟೆಂಬರ್​ 28ರಂದು ಸಂಜೆ 6 ಗಂಟೆ ಸುಮಾರಿಗೆ ಸಂಡೂರು ರಸ್ತೆಯ ಎಚ್‌ಎಲ್‌ಸಿ ಕೆನಾಲ್ ಬಳಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಕೌಲ್‌ಪೇಟೆ ನಿವಾಸಿ ಗಂಗಾಧರ ಕೆ. ಎಂಬುವವರು ಮೃತಪಟ್ಟಿದ್ದರು. ಮಾಹಿತಿ ಆಧರಿಸಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂಚಾರಿ ಠಾಣೆ ಪೊಲೀಸರು, ಮೋಟರ್​ ಸೈಕಲ್​ ಬಿದ್ದಿದ್ದು ಸೇರಿ ಹಲವು ಅಂಶಗಳನ್ನ ಗಮನಿಸಿ ಇದು ಕೊಲೆಯಾಗಿರಬಹುದು ಎಂದು ಅನುಮಾನಿಸಿದ್ದರು. ಮೃತನ ಗುರುತು ಪತ್ತೆಯಾಗುತ್ತಿದ್ದಂತೆ ಆತನ ಪತ್ನಿ ಶಾರದಾಳನ್ನ ಕರೆಸಿ ಈ ಬಗ್ಗೆ ವಿಚಾರಣೆ ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಮಾಹಿತಿ ನೀಡಿದ ಶಾರದಾ, ಗಂಗಾಧರ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ರೋಗಿಯಾಗಿದ್ದರು. ನಡೆದಾಡಲೂ ಕಷ್ಟ ಎಂಬ ಸ್ಥಿತಿಯಲ್ಲಿದ್ದ ಅವರು, ಮೋಟರ್​ ಸೈಕಲ್ ಓಡಿಸುವುದಾದರೂ ಹೇಗೆ? ಅವರ ಬಳಿ ದ್ವಿಚಕ್ರ ವಾಹನವೇ ಇಲ್ಲ ಎಂಬ ವಿಷಯ ತಿಳಿಸಿದ್ದಾರೆ. ಈ ವೇಳೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ಮಗಳನ್ನು ಕೊಂದು ತಾನೂ ನೇಣಿಗೆ ಶರಣಾದ ಮಹಿಳೆ

ಖತರ್ನಾಕ್​ ಪ್ಲ್ಯಾನ್​

ಇದೊಂದು ಕೊಲೆ ಎಂದು ಗೊತ್ತಾಗುತ್ತಿದ್ದಂತೆ ಪ್ರಕರಣದ ಬೆನ್ನತ್ತಿದ ಪೊಲೀಸರು 6 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿ ಕೃಷ್ಣಪ್ಪ, ಹೊಸಲಿಂಗಾಪುರದ ರವಿ ಗೋಸಂಗಿ, ವಿಜಯನಗರ ಜಿಲ್ಲೆಯ ಹೊಸಪೇಟೆ ನಿವಾಸಿಗಳಾದ ಅಜಯ್, ರಿಯಾಜ್, ಯೋಗರಾಜ್ ಸಿಂಗ್, ಹಾಗೂ ಹುಲಿಗೆಮ್ಮ ಬಂಧಿತ ಆರೋಪಿಗಳಾಗಿದ್ದಾರೆ. ಗಂಗಾಧರ್​ ಗೆ 5 ಕೋಟಿ 25 ಲಕ್ಷ ರೂಪಾಯಿಗಳ ವಿಮೆ ಮಾಡಿಸಿದ್ದ ಗ್ಯಾಂಗ್​, ನಾಮಿನ ಹಣ ಪಡೆಯಲು ರಿಜಿಸ್ಟರ್​ ಮ್ಯಾರೇಜ್​ ನ ನಕಲಿ ದಾಖಲೆಯನ್ನೂ ಸೃಷ್ಟಿ ಮಾಡಿತ್ತು ಎಂಬುದು ತನಿಖೆ ವೇಳೆ ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:46 pm, Fri, 3 October 25

ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ದೇವಾಲಯಗಳ ಮೇಲೆ ನಿಧಿಗಳ್ಳರ ಕಣ್ಣು
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಡಿಕೆಶಿ ಬಳಿ ದೆಹಲಿಗೆ ಬನ್ನಿ ಎಂದಿದ್ದರೂ ರಾಹುಲ್ ಗಾಂಧಿ ಸಿಗೋದು ಅನುಮಾನ!
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಗವಿ ಗಂಗಾಧರೇಶ್ವರನಿಗೆ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು ಗೊತ್ತೇ?
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಎಂಟ್ರಿ ಕೊಟ್ಟಿದ್ದು ವಧು, ಆದ್ರೆ ಎಲ್ಲರೂ ನೋಡಿದ್ದು ಫೋಟೊಗ್ರಾಫರ್​ನ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಮೋದಿ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಬಿಗ್​​ಬಾಸ್ ಮನೆಗೆ ಸಂಕ್ರಾಂತಿ ಅತಿಥಿಗಳು: ಪುಟ್ಟಿ ಹಾಡಿಗೆ ಅಶ್ವಿನಿ ಫಿದಾ
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಏನೂ ಮಾಡ್ಬೇಡಿ... ವಿರಾಟ್ ಕೊಹ್ಲಿಯ ಕಾಳಜಿ ವಿಡಿಯೋ ವೈರಲ್
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಬಾವಿ ಕಟ್ಟೆ ಹತ್ತಿ ಎರಡೂ ಕೈಗಳಲ್ಲೂ ಮಕ್ಕಳನ್ನು ಹಿಡಿದು ಮಹಿಳೆಯ ನೃತ್ಯ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ಸಂಕ್ರಾಂತಿಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಚೈತ್ರಾ ಕುಂದಾಪುರ
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!
ನಾನಾ... ಹೌದು ನೀನೇ... ಅರ್ಧಶತಕ ಪೂರೈಸಲು ಬಿಡದ ಅಭಿಷೇಕ್ ನಾಯರ್!