Uttar Pradesh: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಆಗ್ರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

Uttar Pradesh: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Dec 28, 2022 | 10:38 PM

ಲಕ್ನೋ: 23 ವರ್ಷದ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ (Gang Rape) ಘಟನೆ ಇಂದು (ಡಿ. 23) ಉತ್ತರ ಪ್ರದೇಶದ (Uttar Pradesh) ಆಗ್ರಾದ (Agra) ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ (Yamuna Expressway) ನಡೆದಿದೆ. ಅತ್ಯಾಚಾರವೆಸಗಿದ ಜೈವೀರ್, ಟಿಟು ಮತ್ತು ಚಾಚಾ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಖಾಸಗಿ ಸುದ್ದಿ ಸಂಸ್ಥೆ ಹಿಂದುಸ್ಥಾನ ಟೈಮ್ಸ್​ ವರದಿ ಮಾಡಿದೆ.

ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ ಪ್ರಕಾರ ಮಂಗಳವಾರ (ಡಿ. 26) ರಂದು ತನ್ನುರಾದ ಕಾನ್ಪುರದ ಔರೈಯಾಗೆ ತೆರಳಬೇಕಿತ್ತು. ಈ ಹಿನ್ನೆಲೆ ಟ್ಸಾಕ್ಸಿ ಬುಕ್​ ಮಾಡಿದ್ದು, ಟ್ಸಾಕ್ಸಿ ಚಾಲಕ ಫಿರೋಜಾಬಾದ್​ವರೆಗೆ ಬಿಡುವುದಾಗಿ ಹೇಳಿದ್ದಾನೆ. ಮಹಿಳೆ ಟ್ಯಾಕ್ಸಿ ಹತ್ತಿದ್ದಾಳೆ. ಮಾರ್ಗ ಮಧ್ಯೆ ಚಾಲಕ ತನ್ನ ಇಬ್ಬರು ಸ್ನೇಹಿತರನ್ನು ಕರೆದು ಟ್ಯಾಕ್ಸಿಯಲ್ಲಿ ಹತ್ತಿಸಿಕೊಂಡಿದ್ದಾನೆ.

ಇದನ್ನೂ ಓದಿ: ಅವಿವಾಹಿತನ ಜೊತೆ ವಿವಾಹಿತೆಯ ಆಕ್ರಮ ಸಂಬಂಧ, ಕೊನೆಗೆ ಆ ವಿವಾಹಿತೆಯ ಕಾಟ ತಾಳದೆ ಹತ್ಯೆ ಮಾಡಿದ!

ನಂತರ ಮಾರ್ಗ ಮಧ್ಯೆ ಟ್ಯಾಕ್ಸಿ ನಿಲ್ಲಿಸಿ ಮೂವರೂ ಆಕೆಯನ್ನು ರಸ್ತೆಬದಿಯ ಪೊದೆಗಳಿಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ನಂತರ ಆರೋಪಿಗಳು ಸಂತ್ರಸ್ತೆಯನ್ನು ಎತ್ಮಾದ್‌ಪುರ ಬಳಿಯ ರಸ್ತೆಯಲ್ಲಿ ಬಿಟ್ಟು ಹೋಗಿದ್ದಾರೆ. ಸಂತ್ರಸ್ತೆ ಇಂದು ಬೆಳಗ್ಗೆ ಎತ್ಮಾದಪುರ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾಳೆ. ಸದ್ಯ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ 17 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು, ಲಿಫ್ಟ್​ ಕುಸಿದುಬಿದ್ದು ಕಾರ್ಮಿಕ ಸಾವು 

ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಗ್ರಾ ಪೊಲೀಸ್ ಕಮಿಷನರ್ ಪ್ರೀತೀಂದರ್ ಸಿಂಗ್ ತಿಳಿಸಿದ್ದಾರೆ. ಟೋಲ್ ಪ್ಲಾಜಾದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಟ್ಯಾಕ್ಸಿ ಚಾಲಕನನ್ನು ಗುರುತಿಸಿ, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್