AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಸಚಿವರ ಪುತ್ರನ ಕೈವಾಡವಿದೆ ಎಂದು ಕಾಂಗ್ರೆಸ್

16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಸಚಿವರ ಪುತ್ರನ ಕೈವಾಡವಿದೆ ಎಂದು ಕಾಂಗ್ರೆಸ್
ಸಾಂದರ್ಭಿಕ ಚಿತ್ರ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Oct 24, 2022 | 11:59 AM

Share

ಅಗರ್ತಲಾ: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ತ್ರಿಪುರಾದ ಉನಕೋಟಿ ಜಿಲ್ಲೆಯಲ್ಲಿ ನಡೆದಿದೆ. ಪ್ರತಿಪಕ್ಷ ಕಾಂಗ್ರೆಸ್ ಮತ್ತು ಸಿಪಿಐ, ಘಟನೆಯಲ್ಲಿ ರಾಜ್ಯ ಸಚಿವರ ಪುತ್ರನ ಕೈವಾಡವಿದೆ ತಕ್ಷಣ ಅವರನ್ನು ಬಂಧಿಸುವಂತೆ ಒತ್ತಾಯಿಸಿದರೆ. ಆದೆರೆ ಈ ಆರೋಪವನ್ನು ಬಿಜೆಪಿ ತಳ್ಳಿಹಾಕಿದೆ. ಅಕ್ಟೋಬರ್ 19ರಂದು ಕುಮಾರ್‌ಘಾಟ್‌ದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಈ ಆಧಾರದ ಮೇಲೆ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಆದರೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದಾರೆ ಎಂದು ಕುಮಾರ್‌ಘಾಟ್ ಉಪವಿಭಾಗದ ಪೊಲೀಸ್ ಅಧಿಕಾರಿ ಬಿಪ್ಲಬ್ ದೆಬ್ಬರ್ಮಾ ಭಾನುವಾರ ಪಿಟಿಐಗೆ ತಿಳಿಸಿದ್ದಾರೆ.

ನೆರೆಹೊರೆಯ ಮಹಿಳೆಯೊಬ್ಬರು ಬಾಲಕಿಯನ್ನು ಕುಮಾರ್‌ಘಾಟ್‌ನಲ್ಲಿರುವ ಕಟ್ಟಡಕ್ಕೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಪೊಲೀಸ್ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಇದನ್ನು ಓದಿ: Crime News: ಮೊಬೈಲ್​ನಲ್ಲಿ ಚಾಟ್ ಮಾಡಿದ್ದಕ್ಕೆ ಬೈದ ತಾಯಿ; ಮನನೊಂದು 16 ವರ್ಷದ ಬಾಲಕಿ ಆತ್ಮಹತ್ಯೆ

ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿದೆ. ಆದ್ದರಿಂದ, ನಾವು ಈ ವಿಷಯದ ಬಗ್ಗೆ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಆದೇಶವನ್ನು ಕೂಡ ಪಡೆಯಬೇಕಿದೆ ಎಂದು ಹೇಳಿದ್ದಾರೆ. ಎಲ್ಲಾ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಎಂದು ಕಾಂಗ್ರೆಸ್ ಮಾಜಿ ಶಾಸಕ ಆಶಿಶ್ ಸಹಾ ಸುದ್ದಿಗಾರರಿಗೆ ತಿಳಿಸಿದರು.

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಮಾತನಾಡಿ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿರುವುದು ಬೇಸರ ತಂದಿದೆ. ಸಚಿವರ ಮಗನ ಪಾತ್ರವನ್ನು ಕಂಡುಹಿಡಿಯಲು ಹೆಚ್ಚಿನ ತನಿಖೆ ಮಾಡಬೇಕು ಎಂದು ನಾವು ಒತ್ತಾಯಿಸುತ್ತೇವೆ. ಈ ಪ್ರಕರಣದಲ್ಲಿ ಅವರು ಆರೋಪಿಯಾಗಿದ್ದರೆ, ಅವರನ್ನು ತಕ್ಷಣ ಬಂಧನ ಮಾಡಬೇಕು ಎಂದು ಚೌಧರಿ ಹೇಳಿದರು.

ಆದರೆ, ಬಿಜೆಪಿ ಈ ಆರೋಪವನ್ನು ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದೆ. ಅಕ್ಟೋಬರ್ 19 ರಂದು ಕುಮಾರ್‌ಘಾಟ್‌ನಲ್ಲಿ ಘಟನೆ ನಡೆದಾಗ ಸಚಿವರ ಪುತ್ರ ಊರಿನಲ್ಲಿ ಇರಲಿಲ್ಲ ಹಾಗಾಗಿ ಈ ಆರೋಪಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ರಾಜಕೀಯ ಪ್ರೇರಿತವಾಗಿದೆ. ನಾವು ಕೂಡ ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸಿಬೇಕು ಎಂದು ನಾನು ಒತ್ತಾಯ ಮಾಡುತ್ತೇವೆ ಎಂದು ಬಿಜೆಪಿಯ ಉನಕೋಟಿ ಜಿಲ್ಲಾಧ್ಯಕ್ಷ ಪಬಿತ್ರಾ ಚಂದ್ರ ದೇಬನಾಥ್ ಹೇಳಿದ್ದಾರೆ.

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?