AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ

ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ.

ಮಂಡ್ಯ: 17 ವರ್ಷದ ಅಪ್ರಾಪ್ತೆ ಮೇಲೆ ಮೂವರಿಂದ ಅತ್ಯಾಚಾರ
ಮದ್ದೂರು ಪೊಲೀಸ್​ ಠಾಣೆ
ಪ್ರಶಾಂತ್​ ಬಿ.
| Edited By: |

Updated on: Nov 10, 2023 | 12:53 PM

Share

ಮಂಡ್ಯ ನ.10: ಮದ್ದೂರು (Madduru) ಪಟ್ಟಣ ಪೊಲೀಸ್ (Police) ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ (17) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಅತ್ಯಾಚಾರವೆಸಗಿದ ಮೂವರು ಕೂಡ ಬಾಲಕರಾಗಿದ್ದಾರೆ. ಮೂವರು ಸಂತ್ರಸ್ತೆಯನ್ನು ಪುಸಲಾಯಿಸಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇನ್ನು ಕಿರಾತಕರು ಅತ್ಯಾಚಾರವೆಸಗಿದನ್ನು ವಿಡಿಯೋ ಮಾಡಿಕೊಂಡು ವೈರಲ್​​ ಮಾಡಿದ್ದಾರೆ. ವಿಡಿಯೋ ವೈರಲ್​​ ಆಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ತಂದೆ ದೂರಿನ ಆಧಾರದ ಮೇಲೆ ಪೊಲೀಸರು ಮೂವರನ್ನು ಬಂಧಸಿದ್ದಾರೆ. ಮೂವರು ಬಾಲಕರಾಗಿದ್ದು, ಮದ್ದೂರು ಮೂಲದವರು ಎಂದು ತಿಳಿದುಬಂದಿದೆ.

ಮೈಸೂರಿನ ಯುವ ದಸರಾದಲ್ಲಿ ಪರಿಚಯವಾಗಿದ್ದ ಸಂತ್ರಸ್ತೆ

ಅತ್ಯಾಚಾರವೆಸಗಿದ ಮೂವರಲ್ಲಿ ಓರ್ವ, ಸಂತ್ರಸ್ತೆಯನ್ನು ಮೈಸೂರಿನ ಯುವ ದಸರಾದಲ್ಲಿ ಪರಿಚಯಸಿಕೊಂಡಿದ್ದನು. ಬಳಿಕ ಬಾಲಕ, ಸಂಸತ್ರಸ್ತೆಯೊಂದಿಗೆ ಸಲುಗೆಯಿಂದ ವರ್ತಿಸಲು ಆರಂಭಿಸಿದನು. ಅಲ್ಲದೆ ಪ್ರೀತಿಸುತ್ತಿರುವುದಾಗಿ ನಂಬಿಸಿದನು. ಆನಂತರ ನವೆಂಬರ್ 4 ರಂದು ಮದ್ದೂರಿನ ಲಾಡ್ಜ್ ಕರೆದುಕೊಂಡು ಹೋಗಿ ಬಾಲಕ ಮತ್ತು ಆತನ ಸ್ನೇಹಿತರು ಸಾಮೂಹಿಕ ಆತ್ಯಾಚಾರವೆಸಗಿದ್ದಾರೆ.

ಇದನ್ನೂ ಓದಿ: ಮಹಿಳೆಯ ಮನೆಯ ದರೋಡೆ ಮಾಡಿ, ಕೆಲಸದಾಕೆ ಮೇಲೆ ಸಾಮೂಹಿಕ ಅತ್ಯಾಚಾರ, ಐವರು ಸೆಕ್ಯುರಿಟಿ ಗಾರ್ಡ್​ಗಳ ಬಂಧನ

ಈ ವೇಳೆ ಆರೋಪಿಗಳು ಆತ್ಯಾಚಾರದ ದೃಶ್ಯವನ್ನು ಮೊಬೈಲ್​ನಲ್ಲಿ ಸರೆಹಿಡಿದಿದ್ದಾರೆ. ಬಳಿಕ ಅಪ್ರಾಪ್ತೆ ಮೊಬೈಲ್​ಗೆ ವಿಡಿಯೋ ಕಳುಹಿಸಿ ಕರೆದಾಗೆಲ್ಲ ಬರುವಂತೆ ಬ್ಯ್ಲಾಕ್​ಮೇಲ್​ ಮಾಡಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೋಷಕರು ಮದ್ದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆತ್ಯಾಚಾರ, ಪೋಕ್ಸೊ, ಆಟ್ರಾಸಿಟಿ ಸೆಕ್ಷನ್ ಅಡಿ‌ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್