ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ನವೀನ್​ಗೆ ಕಿಡ್ನಿ ಸಮಸ್ಯೆ; ಆಸ್ಪತ್ರೆಗೆ ದಾಖಲು

Gauri Lankesh Murder Case: ಪೊಲೀಸರು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಳೆದ 5 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ನವೀನ್​ಗೆ ಕಿಡ್ನಿ ಸಮಸ್ಯೆ; ಆಸ್ಪತ್ರೆಗೆ ದಾಖಲು
ಪತ್ರಕರ್ತೆ ಗೌರಿ ಲಂಕೇಶ್
Edited By:

Updated on: Jul 21, 2021 | 6:14 PM

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ (Gauri Lankesh Murder Case) ಪ್ರಕರಣದ ಆರೋಪಿ ನವೀನ್ ಎಂಬಾತನಿಗೆ ಅನಾರೋಗ್ಯ ಉಂಟಾಗಿದೆ. ಈ ಮೊದಲು ಆರೋಪಿ ನವೀನ್​​ನನ್ನ ವಿಶೇಷ ತನಿಖಾ ತಂಡ ಬಂಧಿಸಿತ್ತು. ಆದರೆ, ಇದೀಗ ಸೆಂಟ್ರಲ್​ ಜೈಲಿನಲ್ಲಿರುವ ನವೀನ್​​ಗೆ ಕಿಡ್ನಿ ಸಮಸ್ಯೆ (Kidney Infection) ಉಂಟಾಗಿದೆ.

ಆರೋಪಿ ನವೀನ್​ಗೆ ಕಿಡ್ನಿ ಸಮಸ್ಯೆ ಆಗಿರುವ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಕಳೆದ 5 ದಿನಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ. ಪೊಲೀಸರ ಭದ್ರತೆಯಲ್ಲಿ ಆರೋಪಿ ನವೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಫೆಬ್ರವರಿಯಲ್ಲಿ ವಜಾಗೊಳಿಸಲಾಗಿತ್ತು. ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ 1ನೇ ಸಿಟಿ ಸಿವಿಲ್ ಕೋರ್ಟ್‌ನಿಂದ ಆದೇಶ ಹೊರಬಿದ್ದಿತ್ತು. A5 ಅಮಿತ್ ದಿಗ್ವೇಕರ್, A6 ಸುರೇಶ್.ಹೆಚ್, A8 ರಾಜೇಶ್ ಡಿ ಬಂಗೇರಾ, A13 ಸುಜೀತ್ ಹಾಗೂ A9 ಸುಧನ್ವ ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಕೋರ್ಟ್​ ವಜಾಗೊಳಿಸಿತ್ತು. ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು 2017ರಲ್ಲಿ ಹತ್ಯೆ ಮಾಡಲಾಗಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್, M.M.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ -ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ವಿರುದ್ಧ ಕೇಸ್‌ ದಾಖಲು

ಗೌರಿ ಲಂಕೇಶ್ ಡ್ರಗ್ ಅಡಿಕ್ಟ್​ ಹೌದೋ, ಅಲ್ಲವೋ ಹೇಳಲಿ: ಮುತಾಲಿಕ್

Published On - 5:43 pm, Wed, 21 July 21