Athani: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಅನ್ಯಕೋಮಿನ ಯುವಕ: ಮನನೊಂದು ಆತ್ಮಹತ್ಯೆಗೆ ಶರಣಾದ ಯುವತಿ
ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ಪ್ರೀತಿಸಿ ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಹಿನ್ನೆಲೆ ಯುವತಿ ಆತ್ಮಹತ್ಯೆ (suicide) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆ ಅಥಣಿ ತಾಲೂಕಿನ ತಾವಂಶಿ ಗ್ರಾಮದಲ್ಲಿ ನಡೆದಿದೆ. ತೇಜಸ್ವಿನಿ ಗಂಗಪ್ಪ ಗುಜ್ಜರ್ (21) ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿ. ಆಶೀಫ್ ದೇಸಾಯಿ ಎಂಬುವವನು ಪ್ರೀತಿಸಿ ಕೈಕೊಟ್ಟಿರವ ಯುವಕ. ಕಳೆದ ಎರಡು ವರ್ಷದಿಂದ ಪ್ರೀತಿಯ ನಾಟಕವಾಡುತ್ತಿದ್ದ ಆಶೀಫ್, ಕೊನೆಗೆ ಮದುವೆ ಆಗುವುದಿಲ್ಲ ಎಂದು ನಿರಾಕರಿಸಿದ್ದ. ಈ ಹಿನ್ನೆಲೆ ಮನನೊಂದಿದ್ದ ಯುವತಿ ಕಳೆದ ಮೂರು ದಿನಗಳ ಹಿಂದೆ ಕೀಟನಾಶಕ ಸೇವಿಸಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಸಾವಿಗೆ ಆಶೀಫ್ ಕಾರಣ ಅಂತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಹಿಂದೆಯೂ ಹಾಪ್ ಮರ್ಡರ್ ಕೇಸ್ನಲ್ಲಿ ಆಶೀಫ್ ಜೈಲಿಗೆ ಹೋಗಿ ಬಂದಿದ್ದ. ಆಶೀಫ್‌ಗೆ ತಕ್ಕ ಶಿಕ್ಷೆಯಾಗಬೇಕು ಅಂತಾ ಯುವತಿ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆರೋಪಿ ಆಶೀಪ್ ವಿರುದ್ಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿದ್ಯಾರ್ಥಿಗಳಿಬ್ಬರಿಗೆ ಬಾಸುಂಡೆ ಬರುವ ಹಾಗೆ ಥಳಿಸಿದ ಶಿಕ್ಷಕಿ
ಕೊಪ್ಪಳ: 7ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಿಗೆ ಬಾಸುಂಡೆ ಬರುವ ಹಾಗೆ ಶಿಕ್ಷಕಿಯಿಂದ ಹಲ್ಲೆ ಆರೋಪ ಮಾಡಿರುವಂತಹ ಘಟನೆ ಜಿಲ್ಲೆ ಕನಕಗಿರಿ ತಾಲೂಕಿನ ಚಿಕ್ಕಡಂಕನಕಲ್ ಶಾಲೆಯಲ್ಲಿ ನಡೆದಿದೆ. ಚಿಕ್ಕಡಂಕನಕಲ್ ಪ್ರಾಥಮಿಕ ಶಾಲೆ ಶಿಕ್ಷಕಿ ರೂಪಾ ವಿರುದ್ಧ ಆರೋಪ ಮಾಡಲಾಗಿದೆ. ಶಿಕ್ಷಕಿ ವಿರುದ್ದ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ರೂಪಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಧಾರವಾಡ: ಸುತ್ತಿಗೆಯಿಂದ ಹೊಡೆದು ಮಕ್ಕಳ ಬರ್ಬರ ಕೊಲೆ, ಹೆಂಡತಿ ಗಂಭೀರ, ಆರೋಪಿ ಪತಿ ಆತ್ಮಹತ್ಯೆ
ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ
ನೆಲಮಂಗಲ: ತಲೆ ಮೇಲೆ ಹಾಲೋ ಬ್ಲಾಕ್ ಎತ್ತು ಹಾಕಿ ವ್ಯಕ್ತಿಯ ಕೊಲೆ ನಡೆದಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕು ಗುಣಿ ಅಗ್ರಹಾರದಲ್ಲಿ ನಡೆದಿದೆ. ರಾಜಸ್ಥಾನ ಮೂಲದ ದೀಪಕ್ (40) ಮೃತ ದುರ್ದೈವಿ. ಬೆಂಗಳೂರಿನಲ್ಲಿ ಹದಿನೈದು ವರ್ಷದಿಂದ ಮೃತ ದೀಪಕ್ ಟೈಲ್ಸ್ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ಗೆಳೆಯರೊಂದಿಗೆ ಕುಡಿದು ಗಲಾಟೆ ನಡೆದಿದ್ದು, ಈ ಹಿನ್ನೆಲೆ ದೀಪಕ್ ಕೊಲೆ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಸೋಲದೇವನಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು: ವಿಡಿಯೋ ಕಾಲ್ ಮಾಡಿ ಪತ್ನಿಯನ್ನು ತೋರಿಸಲಿಲ್ಲ ಎಂದು ಸಹೋದ್ಯೋಗಿ ಹೊಟ್ಟೆಗೆ ಇರಿದು ಕೊಲೆ
ತುಮಕೂರು ಬಳಿ ಅಪಘಾತ; ಐವರಿಗೆ ಗಾಯ
ತುಮಕೂರು: ಗೂಳೂರು ಸಮೀಪದ ಶೂಲದ ಆಂಜನೇಯ ದೇವಸ್ಥಾನ ಬಳಿ ಕಾರು ಮತ್ತು ಕ್ಯಾಂಟರ್ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು ಡ್ರೈವಿಂಗ್ ಸ್ಕೂಲ್ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿವೆ. ಕುಣಿಗಲ್ ಕಡೆಯಿಂದ ಬರುತ್ತಿದ್ದ ಹಾಲಿನ ಕ್ಯಾಂಟರ್ ವಾಹನ ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುತ್ತಿದ್ದ ಡ್ರೈವಿಂಗ್ ತರಬೇತಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹೋಂಡಾ ಆಕ್ಟಿವಾ ಅಡ್ಡ ಬಂದ ಕಾರಣ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಡ್ರೈವಿಂಗ್ ತರಬೇತಿ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:52 pm, Thu, 2 February 23