ಅಸ್ಸಾಂನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪ್ರಾಪ್ತ ಬಾಲಕಿ ಮೇಲೆ ಮೂವರು ಅತ್ಯಾಚಾರವೆಸಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ, ಧಿಂಗ್ ಪ್ರದೇಶದ ರಸ್ತೆಯೊಂದರಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿದ್ದ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಅಸ್ಸಾಂನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಅತ್ಯಾಚಾರ
Image Credit source: Telegraph India

Updated on: Aug 23, 2024 | 1:55 PM

ಅಸ್ಸಾಂನಲ್ಲಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಅರೆ ಪ್ರಜ್ಞಾವಸ್ಥೆ ಬಿದ್ದಿದ್ದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಸ್ಸಾಂನ ನಾಗಾನ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ, ಧಿಂಗ್ ಪ್ರದೇಶದ ರಸ್ತೆಯೊಂದರಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿದ್ದ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಂಘ ಇಂದು ಆ ಪ್ರದೇಶದಲ್ಲಿ ಬಂದ್‌ಗೆ ಕರೆ ನೀಡಿದೆ.ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಘಟನೆಯ ಬಗ್ಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು ಆರೋಪಿಯನ್ನು ಬಂಧಿಸಲಾಗುವುದು ಎಂದು ಹೇಳಿದರು.

ಚಂಡೀಗಢದಲ್ಲೂ ಇಂಥದ್ದೇ ಘಟನೆ ನಡೆದಿದೆ
ಅಪ್ರಾಪ್ತ ಬಾಲಕಿ ಮೇಲೆ ಶಾಲಾ ಬಸ್​ ಚಾಲಕನೊಬ್ಬ ತಿಂಗಳುಗಟ್ಟಲೆ ಅತ್ಯಾಚಾರವೆಸಗಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಂಡೀಗಢದ ಮಣಿಮಜ್ರಾದ 26 ವರ್ಷದ ಬಸ್ ಚಾಲಕ ಮೊಹಮ್ಮದ್ ರಝಾಕ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ಛತ್ತೀಸ್​ಗಢದಲ್ಲಿ ಬುಡಕಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರು ಮಂದಿ ಬಂಧನ

ಮಾರ್ಫ್​ ಮಾಡಿದ ಚಿತ್ರ ಬಳಸಿ ಆಕೆಯನ್ನು ಬೆದರಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ. ಮೇ ಹಾಗೂ ಜೂನ್ ನಡುವೆ ಇವೆಲ್ಲವೂ ಆಕೆಯ ಮನೆಯಲ್ಲೇ ನಡೆದಿದೆ ಎನ್ನಲಾಗಿದೆ. ರಝಾಕ್ ತನ್ನನ್ನು ಹಿಂಬಾಲಿಸುತ್ತಿದ್ದ ಮೊದಲು ಸ್ನೇಹ ಸಂಪಾದಿಸಲು ಪ್ರಯತ್ನಿಸುತ್ತಿದ್ದ, ಆದರೆ ಆಕೆ ನಿರಾಕರಿಸಿದಾಗ ಆಕೆಯ ಚಿತ್ರಗಳನ್ನು ಮಾರ್ಫ್​ ಮಾಡಿ ಬೆದರಿಕೆ ಹಾಕಲು ಶುರು ಮಾಡಿದ್ದ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us