ಮಧ್ಯಪ್ರದೇಶ: ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

|

Updated on: Feb 01, 2024 | 9:19 AM

ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಪೋಷಕರ ಹಣೆಗೆ ಗನ್​ ಇಟ್ಟು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಭನ್ವಾರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದರೆ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಮಧ್ಯಪ್ರದೇಶ: ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
Follow us on

ಪೋಷಕರ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.
ಪೋಷಕರ ಹಣೆಗೆ ಗನ್​ ಇಟ್ಟು, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಸೋಮವಾರ ರಾತ್ರಿ ಭನ್ವಾರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಆದರೆ ಎರಡು ದಿನಗಳ ನಂತರ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ರಿಷಿಕೇಶ್ ಮೀನಾ ತಿಳಿಸಿದ್ದಾರೆ. ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಬಾಲಕಿಯ ಕುಟುಂಬವು ಒಂದು ತಿಂಗಳ ಹಿಂದೆಯಷ್ಟೇ ಆ ಪ್ರದೇಶಕ್ಕೆ ತೆರಳಿತ್ತು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಪೊಲೀಸ್ ಹಾಗೂ ಅವರ ಸಹೋದರನ ವಿರುದ್ಧ ಪ್ರಕರಣ ದಾಖಲು

ಮತ್ತೊಂದು ಘಟನೆ
ಹಣೆಗೆ ಬಂದೂಕಿಟ್ಟು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಹಣೆಗೆ ಬಂದೂಕಿಟ್ಟು ಅತ್ಯಾಚಾರ ಮಾಡಿರುವ ಘಟನೆ ಸಹರಾನ್​ಪುರದಲ್ಲಿ ನಡೆದಿತ್ತು. ಮದುವೆಯ ನೆಪದಲ್ಲಿ ಕರೆದೊಯ್ದು ಮಹಿಳೆಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಪೇದೆ ಮತ್ತು ಅವರ ಸಹೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ತನ್ನನ್ನು ಬೇರೆ ಬೇರೆ ಹೋಟೆಲ್‌ಗಳಿಗೆ ಕರೆದೊಯ್ದು ತನ್ನ ಮೇಲೆ ಅತ್ಯಾಚಾರ ಎಸಗಿದ ನಂತರ ಗರ್ಭಿಣಿಯಾಗಿದ್ದಳು ಎಂದು ಅವರು ಆರೋಪಿಸಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ ಎಂದು ಮಹಿಳೆ ಆರೋಪಿಸಿದ್ದಾರೆ.

ಆರೋಪಿ ಮತ್ತು ಆತನ ಸಹೋದರ ಇಬ್ಬರೂ ಬಂದೂಕು ತೋರಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ