ಶಾಲಾ ಬಸ್​ನಲ್ಲಿ 6 ವರ್ಷದ ಬಾಲಕಿ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ

|

Updated on: Sep 03, 2023 | 8:47 AM

ಶಾಲಾ ಬಸ್​ವೊಂದರಲ್ಲಿ ವಿದ್ಯಾರ್ಥಿಯೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಕ್ಕೂ ಮುನ್ನ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ಖಾಸಗಿ ಶಾಲಾ ಬಸ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ರೋಹಿಣಿ ಉಪ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿತ್ತು.

ಶಾಲಾ ಬಸ್​ನಲ್ಲಿ 6 ವರ್ಷದ ಬಾಲಕಿ ಮೇಲೆ ಹಿರಿಯ ವಿದ್ಯಾರ್ಥಿಯಿಂದ ಲೈಂಗಿಕ ಕಿರುಕುಳ
ಪೊಲೀಸ್
Image Credit source: NDTV
Follow us on

ಶಾಲಾ ಬಸ್​ವೊಂದರಲ್ಲಿ ವಿದ್ಯಾರ್ಥಿಯೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದಕ್ಕೂ ಮುನ್ನ ದೆಹಲಿ ಮಹಿಳಾ ಆಯೋಗವು (ಡಿಸಿಡಬ್ಲ್ಯು) ಖಾಸಗಿ ಶಾಲಾ ಬಸ್‌ನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ರೋಹಿಣಿ ಉಪ ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡಿತ್ತು.

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಬುಧವಾರ ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾಲಕಿಯ ತಂದೆ, ತನ್ನ ಲಿಖಿತ ದೂರಿನಲ್ಲಿ, ತನ್ನ ಮಗಳಿಗೆ ಶಾಲಾ ಬಸ್‌ನಲ್ಲಿ ಹುಡುಗನೊಬ್ಬ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾರೆ ಎಂದು ಅಧಿಕಾರಿ ಹೇಳಿದರು.

ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಐಪಿಸಿಯ ಸೆಕ್ಷನ್ 354 ಮತ್ತು 228A ಮತ್ತು POCSO ಕಾಯಿದೆಯ 10/21 ರ ಅಡಿಯಲ್ಲಿ ಪ್ರಕರಣವನ್ನು ಬೇಗಂಪುರ ಪೊಲೀಸ್‌ನಲ್ಲಿ ದಾಖಲಿಸಲಾಗಿದೆ.

ಬಾಲಕಿಯು ದೆಹಲಿಯ ಬೇಗಂಪುರ ಪ್ರದೇಶದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ. ಆಗಸ್ಟ್ 23 ರಂದು ಮಗಳನ್ನು ಎಂದಿನಂತೆ ಬಸ್​ನಿಂದ ತಾಯಿ ಕೆಳಗಿಳಿಸಿಕೊಂಡಿದ್ದರು. ಮೂತ್ರ ವಿಸರ್ಜನೆಯಿಂದ ಬಟ್ಟೆ ಹಾಗೂ ಬ್ಯಾಗ್ ಎಲ್ಲಾ ಒದ್ದೆಯಾಗಿತ್ತು. ವಿಚಾರಣೆ ವೇಳೆ ಹಿರಿಯ ವಿದ್ಯಾರ್ಥಿಯೊಬ್ಬ ಬಸ್​ನಲ್ಲಿ ಕಿರುಕುಳ ನೀಡಿರುವುದಾಗಿ ತಿಳಿಸಿದ್ದಾಳೆ.

ಮತ್ತಷ್ಟು ಓದಿ: ಹಾಸನ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮುಖ್ಯ ಶಿಕ್ಷಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಡಿಸಿಡಬ್ಲ್ಯೂ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಮಾತನಾಡಿ, ದೆಹಲಿಯಲ್ಲಿ ಖಾಸಗಿ ಶಾಲಾ ಬಸ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಶಾಲೆಯು ದೂರನ್ನು ಹಿಂಪಡೆಯುವಂತೆ ಒತ್ತಡ ಹೇರುತ್ತಿದೆ ಎಂದು ಬಾಲಕಿಯ ತಾಯಿ ನಮಗೆ ತಿಳಿಸಿದ್ದಾರೆ. ಶಾಲೆಯ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ ಎಂದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ