ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಪಬ್- ಸಾಂದರ್ಭಿಕ ಚಿತ್ರ
Image Credit source: Zomato

Updated on: Aug 10, 2023 | 12:52 PM

ಆರೋಗ್ಯ ಸರಿ ಇಲ್ಲ ಎಂದು ರಜೆ ಪಡೆದು, ಪಬ್​ಗೆ ಹೋಗಿ ಕಂಠಪೂರ್ತಿ ಕುಡಿದು, ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದಲ್ಲಿ ನಡೆದಿದೆ. ಬಾಗಾ ಪಟ್ಟಣದ ಪಬ್​ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಕುಡಿದ ಅಮಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ಎ ಕೋನ್ ಎಂದು ಗುರುತಿಸಲ್ಪಟ್ಟ ಡಿಐಜಿ ಈ ಹಿಂದೆ ದೆಹಲಿ ಪೊಲೀಸ್ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿದ್ದರು. ಸೋಮವಾರ ರಾತ್ರಿ ಈ ಘಟನೆ ನಡೆದಿದೆ.

ಮೂಲಗಳ ಪ್ರಕಾರ, ಘಟನೆಯ ಸಮಯದಲ್ಲಿ ಕೋನ್ ಮದ್ಯದ ಅಮಲಿನಲ್ಲಿದ್ದರು. ಅವರು ರಾಜ್ಯದ ಪ್ರಮುಖ ರಾಜಕಾರಣಿಯೊಂದಿಗೆ ಸಂಬಂಧ ಹೊಂದಿದ್ದ ಕ್ಲಬ್‌ನಲ್ಲಿ ಮಹಿಳೆಯೊಂದಿಗೆ ಜಗಳವಾಡಿದರು ಮತ್ತು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದರು ಎಂದು ವರದಿಯಾಗಿದೆ.

ಘಟನೆಯ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮತ್ತು ಮಹಿಳೆ ಜತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದನ್ನು ಕಾಣಬಹುದು. ಮಹಿಳೆ ಪೊಲೀಸರಿಗೆ ಕಪಾಳಮೋಕ್ಷ ಮಾಡಿದ ಬಳಿಕ ಗಲಾಟೆ ನಡೆದಿದೆ. ಪ್ರಕರಣದ ತನಿಖೆಯಿಂದ ಡಿಐಜಿ ಅವರು ಘಟನೆಯ ಸಮಯದಲ್ಲಿ ವೈದ್ಯಕೀಯ ರಜೆಯಲ್ಲಿದ್ದರು ಎಂದು ತಿಳಿದುಬಂದಿದೆ.

ಮತ್ತಷ್ಟು ಓದಿ: ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಗೋವಾ ವಿಧಾನಸಭೆಯಲ್ಲೂ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂಬ ಬೇಡಿಕೆಯನ್ನು ಇಡಲಾಗಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us