ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ

ಬೆಂಗಳೂರಿನ ವೈದ್ಯ ದಂಪತಿ ಮನೆಯಲ್ಲಿ ಚಿನ್ನಾಭರಣ ಕಳುವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಅಮ್ಮುವನ್ನು ಬಂಧಿಸಲಾಗಿದೆ.

ಮಡಿವಾಳ: ವೈದ್ಯ ದಂಪತಿ ಮನೆಯಲ್ಲಿ ಕೆಲಸ ಮಾಡುವವರಿಂದಲೇ ಚಿನ್ನಾಭರಣ ಕಳ್ಳತನ; ಆರೋಪಿ ಅಮ್ಮು ಬಂಧನ
ವಶಪಡಿಸಿಕೊಂಡ ಚಿನ್ನಾಭರಣ ಮತ್ತು ಆರೋಪಿಯೊಂದಿಗೆ ಮಡಿವಾಳ ಪೊಲೀಸ್ ಠಾಣೆ ಸಿಬ್ಬಂದಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 01, 2021 | 10:22 AM

ಮನೆಯಲ್ಲಿ ಕೆಲಸ ಮಾಡುವವರೇ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣವೊಂದು ದಾಖಲಾಗಿದೆ. ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೈದ್ಯ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮ್ಮು ಎಂಬುವವರನ್ನು ಬಂಧಿಸಲಾಗಿದೆ. ಬಂಧಿತ ಅಮ್ಮುಳಿಂದ 235 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಪ್ರಕರಣವೇನು?

ವೈದ್ಯ ದಂಪತಿಗಳು ವರಮಹಾಲಕ್ಷ್ಮಿ ಪೂಜೆಯ ಸಂದರ್ಭದಲ್ಲಿ ಚಿನ್ನ ಇಡಲು ಹೋದಾಗ ಚಿನ್ನ ಕಳ್ಳತನವಾಗಿದ್ದರ ಕೃತ್ಯ ಬಯಲಾಗಿದೆ. ಆಗ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಕಷ್ಟು ಭದ್ರತೆ ಇರುವ ಸ್ಥಳದಲ್ಲಿ ವೈದ್ಯ ದಂಪತಿಗಳು ವಾಸವಿದ್ದುದರಿಂದ ಮನೆಯ ಕೆಲಸದವರ ಮೇಲೆ ಅನುಮಾನ ಹೆಚ್ಚಾಗಿದೆ. ತನಿಖೆ ಕೈಗೊಂಡ ನಂತರ ಅಮ್ಮು ಕೃತ್ಯ ಬಯಲಾಗಿದೆ.

ವೈದ್ಯರ ಮನೆಯಲ್ಲಿ ಕ್ಲೀನಿಂಗ್ ಕೆಲಸ ಮಾಡಿಕೊಂಡಿದ್ದ ಅಮ್ಮು, ಮನೆಯಲ್ಲಿದ್ದ ಚಿನ್ನವನ್ನು ಹಂತಹಂತವಾಗಿ ಕದ್ದೊಯ್ದಿದ್ದಳು. ಮನೆಯಲ್ಲಿ ನಾಲ್ವರು ಕೆಲಸಗಾರರಿದ್ದುದರಿಂದ ಅನುಮಾನ ಬಾರದಂತೆ ಕೃತ್ಯ ಎಸಗಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತಳಿಂದ ಸುಮಾರು 12 ಲಕ್ಷ ರೂ ಮೌಲ್ಯದ 235 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗದಲ್ಲಿ ಬಸ್​ಗಳಿಂದ ಡೀಸೆಲ್ ಕಳ್ಳತನ:

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್​ಗಳಿಂದ ಸುಮಾರು 580 ಲೀಟರ್​ ಡೀಸೆಲ್ ಕಳುವಾಗಿದೆ. ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್​ಗಳಿಂದ ಡೀಸೆಲ್​ ಕದಿಯಲಾಗಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್​ಗಳಿಂದ ತಡರಾತ್ರಿ ವೇಳೆ ಡೀಸೆಲ್​ ಕದಿಯಲಾಗಿದೆ.

ಇದನ್ನೂ ಓದಿ:

ಕಳಪೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಅನಾಹುತ, ರಸ್ತೆಯೊಳಕ್ಕೆ ಇಳಿಯಿತು ಲಾರಿ ಚಕ್ರ

ಮೋಸ ಮಾಡೋಕ್ಕೆ ತೂಕದ ಅಡ್ಜೆಸ್ಟ್​​ಮೆಂಟ್! 7 ಅಂಗಡಿಗಳಿಗೆ ನೋಟಿಸ್, ಮೂವರು ಅರೆಸ್ಟ್

(Gold theft by cleaning worker of the same house accused Ammu is arrested in Bengaluru)

Published On - 10:10 am, Wed, 1 September 21

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ