AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡೆತ್​ನೋಟು ಬರೆದಿಟ್ಟು ಸರ್ಕಾರಿ ಆಸ್ಪತ್ರೆಯ ವೈದ್ಯ ನೇಣಿಗೆ ಶರಣು; ಕಾರಣ ಇಲ್ಲಿದೆ

ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೊಂದೆಡೆ, ದಾವಣಗೆರೆಯ ತುಂಗಭದ್ರಾ ನದಿಯಲ್ಲಿ ಮೂವರು ಯುವಕರು ನೀರುಪಾಲಾದ ಘಟನೆ ನಡೆದಿದೆ.

ಬೆಂಗಳೂರು: ಡೆತ್​ನೋಟು ಬರೆದಿಟ್ಟು ಸರ್ಕಾರಿ ಆಸ್ಪತ್ರೆಯ ವೈದ್ಯ ನೇಣಿಗೆ ಶರಣು; ಕಾರಣ ಇಲ್ಲಿದೆ
ಆತ್ಮಹತ್ಯೆ ಮಾಡಿಕೊಂಡ ವೈದ್ಯ ರೇಣುಕಾನಂದ (ಎಡಚಿತ್ರ) ಮತ್ತು ದಾವಣಗೆರೆಯಲ್ಲಿ ನೀರುಪಾಲಾದ ಯುವಕರ ಶೋಧಕಾರ್ಯಾಚರಣೆ (ಬಲಚಿತ್ರ)
Rakesh Nayak Manchi
|

Updated on:Apr 23, 2023 | 10:17 PM

Share

ಬೆಂಗಳೂರು: ಸರ್ಕಾರಿ ವೈದ್ಯರೊಬ್ಬರು ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ನಗರ ತಿಲಕ್​ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಜಯನಗರ (Jayanagar) ಸಾರ್ವಜನಿಕ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದ ರೇಣುಕಾನಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತ ಅವರು ಆಸ್ಪತ್ರೆಯ ಡ್ಯೂಟಿ ರೂಮ್​ನಲ್ಲೇ ಇಂದು (ಏಪ್ರಿಲ್ 23) ಮಧ್ಯಾಹ್ನ 3 ಗಂಟೆ ಸುಮಾರಿಗೆ ತಾಯಿ ಸೀರೆಯಿಂದ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೈದ್ಯರು ನೇಣಿಗೆ ಶರಣಾಗಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿ ತಿಲಕ್​ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಅನ್ವಯ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ರೇಣುಕಾನಂದ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದ್ದು, ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಮೂವರು ಸಹೋದರರು ನೀರುಪಾಲು

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ಮೂವರು ಸಹೋದರರು ನೀರುಪಾಲಾದ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಿರೇಗೋಣಿಗೆರೆ ಬಳಿ ನಡೆದಿದೆ. ಹಿರೇಗೋಣಿಗೆರೆ ಗ್ರಾಮದ ಕಿರಣ್‌ (14), ವರುಣ್‌ (15), ಪವನ್ (16) ಮೃತಪಟ್ಟ ಸಹೋದರರು. ಸ್ನಾನ ಮಾಡಲೆಂದು ನದಿಗೆ ಇಳಿದ ಮೂವರು ನೀರುಪಾಲಾಗಿದ್ದು, ಮಾಹಿತಿ ತಿಳಿದ ಅಗ್ನಿಶಾಮಕದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಜೋಧ್​ಪುರದಲ್ಲಿ 11 ಮಂದಿ ಪಾಕಿಸ್ತಾನಿ ವಲಸಿಗರ ಸಾಮೂಹಿಕ ಆತ್ಮಹತ್ಯೆ ಪ್ರಕರಣ, 3 ವರ್ಷದ ಬಳಿಕ ಅಂತೂ ಕಾರಣ ಬಹಿರಂಗವಾಯ್ತು

ಸದ್ಯ ನೀರುಪಾಲಾದ ಮೂವರ ಪೈಕಿ ವರುಣ್‌ ಮೃತದೇಹ ಪತ್ತೆಯಾಗಿದ್ದು, ಉಳಿದ ಇಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಎಂಪಿ ರೇಣುಕಾಚಾರ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಚಾಮರಾಜನಗರದಲ್ಲಿ ಸಿಡಿಲು ಬಡಿದು 8 ಹಸು, 2 ಕುರಿಗಳು ಬಲಿ

ಚಾಮರಾಜನಗರ: ಸಿಡಿಲು ಬಡಿದು 8 ಹಸುಗಳು ಮತ್ತು 2 ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ರಾಜಪ್ಪ ಎಂಬುವವರು ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುವ ಸಂದರ್ಭದಲ್ಲಿ ಸಿಡಿಲು ಬಡಿದು ದುರ್ಘಟನೆ ಸಂಭವಿಸಿದೆ. ಸದ್ಯ ಜಾನುವಾರುಗಳನ್ನೇ ನಂಬಿ ಜೀವನ ನಡೆಸುತ್ತಿದ್ದ ರೈತ ರಾಜಪ್ಪ ಸರ್ಕಾರದಿಂದ ಪರಿಹಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:17 pm, Sun, 23 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ