ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ

2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಮ್ಯಾನೇಜರ್ ದಾಸೇಗೌಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ.

ಲಂಚಾವತಾರ: ಪ್ರತ್ಯೇಕ ಪ್ರಕರಣಗಳಲ್ಲಿ 2.50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಗಳು ಎಸಿಬಿ ಬಲೆಗೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on: Sep 21, 2021 | 9:20 PM

ಚಿಕ್ಕಬಳ್ಳಾಪುರ: ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೆಐಎಡಿಬಿ ಕಚೇರಿಯಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭಾರತ್ ಸ್ಕೌಟ್ಸ್​ ಕಟ್ಟಡದಲ್ಲಿರುವ ಕೆಐಎಡಿಬಿ ಕಚೇರಿಯಲ್ಲಿ 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸ್​ಎಲ್​ಒ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಕೆಐಎಡಿಬಿ ಮ್ಯಾನೇಜರ್ ದಾಸೇಗೌಡ ಎಸಿಬಿ ವಶವಾಗಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಲ್ಕಾಪುರದ ರೈತ ಬಾಲಕೃಷ್ಣರವರ ಜಮೀನು ಭೂಸ್ವಾಧೀನ ಹಾಗೂ 60 ಲಕ್ಷ ರೂಪಾಯಿ ಪರಿಹಾರ ಬಿಡುಗಡೆಗೆ 10.5 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಇಂದು 2 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಅಧಿಕಾರಿಗಳು ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ತೇಜಸ್ ಕುಮಾರ್​ ಹಾಗೂ ಮ್ಯಾನೇಜರ್ ದಾಸೇಗೌಡನನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ.

ಹೊರಗುತ್ತಿಗೆ ನೌಕರರ ನೇಮಕಾತಿಗೆ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ಆಯುಷ್ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ನೇಮಕಾತಿ ಹಿನ್ನೆಲೆಯಲ್ಲಿ ಡಿ ಗ್ರೂಪ್ ಹೊರಗುತ್ತಿಗೆ ನೌಕರಿ ನೇಮಕಾತಿಗಾಗಿ ಐವತ್ತು ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ದಾಳಿ ನಡೆಸಿದೆ. ಈ ವೇಳೆ, ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಸುಪರಿಂಟೆಡೆಂಟ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಮಲ್ಲಣ್ಣ ತೋಟದ ಜಿಲ್ಲಾ ಆಯುಷ್ ಅಧಿಕಾರಿ ಹಾಗೂ ಗಿರೀಶ್ ಕಂಬಳಿ ಆಯುಷ್ ಇಲಾಖೆ ಸುಪರಿಂಟೆಂಡೆಂಟ್ ಮುತ್ತಣ್ಣ ಹುಲಿಕೇರಿ ಎಂಬುವರಿಂದ ಲಂಚ ಪಡೆಯುತ್ತಿದ್ದರು. ಈ ಸಂದರ್ಭ, ಎಸಿಬಿ ಡಿವೈಎಸ್​ಪಿ ಎಮ್.ಕೆ ಗಂಗಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಇದನ್ನೂ ಓದಿ: 2 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ಟ್​ಪೆಕ್ಟರ್​ ಎಸಿಬಿ ಬಲೆಗೆ!

ಇದನ್ನೂ ಓದಿ: ಭೂಸ್ವಾಧೀನ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ; ಲಂಚ ಸ್ವೀಕರಿಸಿದ ಮೂವರು ಎಸಿಬಿ ಅಧಿಕಾರಿಗಳ ಬಲೆಗೆ