ಚಿಕ್ಕಬಳ್ಳಾಪುರ: ಶಾಲೆಯಲ್ಲೇ ಶಿಕ್ಷಕನಿಂದ ಅತ್ಯಾಚಾರ, 7ನೇ ಕ್ಲಾಸ್ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ

ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಕನಿಂದ ಅತ್ಯಾಚಾರಕ್ಕೊಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪೋಷಕರು ದೂರು ನೀಡಿದ್ದು, ಇದೀಗ ಪೊಲೀಸರು, ಪೋಕ್ಸೋ ಪ್ರಕರಣದಡಿಯಲ್ಲಿ ಶಿಕ್ಷಕನನ್ನು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ: ಶಾಲೆಯಲ್ಲೇ ಶಿಕ್ಷಕನಿಂದ ಅತ್ಯಾಚಾರ, 7ನೇ ಕ್ಲಾಸ್ ವಿದ್ಯಾರ್ಥಿನಿ 3 ತಿಂಗಳ ಗರ್ಭಿಣಿ
ಮುಖ್ಯ ಶಿಕ್ಷಕ ವೆಂಕಟೇಶ್
Updated By: ರಮೇಶ್ ಬಿ. ಜವಳಗೇರಾ

Updated on: May 28, 2024 | 4:25 PM

ಚಿಕ್ಕಬಳ್ಳಾಪುರ, (ಮೇ 28): ಸರ್ಕಾರಿ ಶಾಲೆ ಮುಖ್ಯ ಶಿಕ್ಷಕಕನಿಂದ (Head Master Rape) ಅತ್ಯಾಚಾರಕ್ಕೊಳಗಾಗಿದ್ದ 7ನೇ ತರಗತಿ ವಿದ್ಯಾರ್ಥಿನಿ ಇದೀಗ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆ ಶಿಡ್ಲಘಟ್ಟ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದೀಗ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿಯ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಇದೀಗ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದಾಳೆ. ಇನ್ನು  ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿರುವ ವಿದ್ಯಾರ್ಥಿನಿಯನ್ನು ಮಹಿಳಾ ಅಧಿಕಾರಿಗಳು ರಕ್ಷಿಸಿ ಆಪ್ತ ಸಮಾಲೋಚನೆ ನಡೆಸಿದ್ದಾರೆ.

ಕಳೆದ 5 ತಿಂಗಳುಗಳಿಂದ ವಿದ್ಯಾರ್ಥಿನಿ ಪಿರಿಯಡ್ ಆಗದ ಕಾರಣ ಪೋಷಕರು ವೈದ್ಯರ ಬಳಿ ಚೆಕಪ್​ಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವಿದ್ಯಾರ್ಥಿನಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪೋಷಕರು ವಿದ್ಯಾರ್ಥಿಯನ್ನು ಪ್ರಶ್ನಿಸಿದಾಗ ಶಾಲೆ ಮುಖ್ಯ ಶಿಕ್ಷಕ ವೆಂಕಟೇಶ್ ಅತ್ಯಾಚಾರ ಎಸಗಿರುವುದನ್ನು ಹೇಳಿದ್ದಾಳೆ.

ಇದನ್ನೂ ಓದಿ: ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮೈದುನನ ಬರ್ಬರ ಹತ್ಯೆ

ಶಾಲೆಯ ಮುಖ್ಯ ಶಿಕ್ಷಕ ಜಿ.ವೆಂಕಟೇಶ ಕಳೆದ ಆರು ತಿಂಗಳುಗಳಿಂದ ಅತ್ಯಾಚಾರ ಎಸಗಿದ್ದಾರೆ. ಶಾಲೆಯ ಕಚೇರಿ ಕೊಠಡಿಯಲ್ಲಿ ಅತ್ಯಾಚಾರ ಮಾಡಿದ್ದಾರೆ. ಬೇಡವೆಂದು ವಿರೋಧ ಮಾಡಿದರೂ ಸಹ ಉದ್ರೇಕಗೋಳಿಸಿ ಅತ್ಯಾಚಾರ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿಕೆ ನೀಡಿದ್ದಾಳೆ. ಈ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಶಿಕ್ಷಕನ ವಿರುದ್ದ ಪೊಕ್ಸೊ , 376 ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಇದೀಗ ಪೊಲೀಸರು ಆರೋಪಿ ಶಿಕ್ಷಕ ವೆಂಕಟೇಶ್​ನನ್ನು ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ