ಲೈಂಗಿಕ ಕಿರುಕುಳ ಆರೋಪ: ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ

|

Updated on: Mar 03, 2020 | 2:19 PM

ಬೆಳಗಾವಿ: ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಿತ್ತೂರು ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ. ದೇವಗಾಂವ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ದೊಡಮನಿಯನ್ನು ಹತ್ಯೆಗೀಡಾಗಿದ್ದಾರೆ. ತಡರಾತ್ರಿ ಅತ್ತೆ, ಸೊಸೆ ಇದ್ದ ಮನೆಗೆ ಬಸವರಾಜ ದೊಡಮನಿ ನುಗ್ಗಿ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜನ ಕಣ್ಣಿಗೆ ಖಾರದ ಪುಡಿ ಎರಚಿ ಅತ್ತೆ-ಸೊಸೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಸರಕೋಡ ಗ್ರಾಮದ ನಿವಾಸಿ […]

ಲೈಂಗಿಕ ಕಿರುಕುಳ ಆರೋಪ: ಕಣ್ಣಿಗೆ ಖಾರದ ಪುಡಿ ಎರಚಿ ಗ್ರಾ.ಪಂ ಸದಸ್ಯನ ಬರ್ಬರ ಹತ್ಯೆ
Follow us on

ಬೆಳಗಾವಿ: ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಿತ್ತೂರು ತಾಲೂಕಿನ ಬಸರಕೋಡ ಗ್ರಾಮದಲ್ಲಿ ನಡೆದಿದೆ. ದೇವಗಾಂವ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜ ದೊಡಮನಿಯನ್ನು ಹತ್ಯೆಗೀಡಾಗಿದ್ದಾರೆ.

ತಡರಾತ್ರಿ ಅತ್ತೆ, ಸೊಸೆ ಇದ್ದ ಮನೆಗೆ ಬಸವರಾಜ ದೊಡಮನಿ ನುಗ್ಗಿ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ ಎನ್ನಲಾಗಿದೆ. ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯ ಬಸವರಾಜನ ಕಣ್ಣಿಗೆ ಖಾರದ ಪುಡಿ ಎರಚಿ ಅತ್ತೆ-ಸೊಸೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಬಸರಕೋಡ ಗ್ರಾಮದ ನಿವಾಸಿ ಬಸವರಾಜನನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಾಗಿಸಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾನೆ. ಈ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.