ಉತ್ತರ ಪ್ರದೇಶ, ಡಿ.9: ಉತ್ತರ ಪ್ರದೇಶದ ಗ್ರಾಮವೊಂದರಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ಚಿಕ್ಕಪ್ಪ ಅತ್ಯಾಚಾರ ಮಾಡಿರುವ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಇದೀಗ ಈ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಬಾಲಕಿ ಕುಟುಂಬದ ಕಾರ್ಯಕ್ರಮಕ್ಕೆ ಹೋಗಿದ್ದಾಗ, ಆಕೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವನ್ನು ಕಂಡು ಕುಟುಂಬಸ್ಥರು ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ಎಲ್ಲ ವಿಚಾರವನ್ನು ತಿಳಿಸಿದ್ದಾಳೆ ಎಂದು ಸಂಗ್ರಾಮ್‌ಪುರ ಪೊಲೀಸ್ ಠಾಣೆ ಎಸ್‌ಎಚ್‌ಒ ಶ್ರೀ ರಾಮ್ ತಿಳಿಸಿದ್ದಾರೆ.
ಬಾಲಕಿಯ ಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಬಂಧನವಾದ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:52 am, Sat, 9 December 23