ಗದಗ: 9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ; ಸೊಸೆ ಆರೋಪ

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಹೆರಿಗೆಯಾದ 5 ತಿಂಗಳ ಬಳಿಕ ಪುರ್ತಗೇರಿ ಗ್ರಾಮದ ನಾಗರತ್ನ ಎಂಬುವರು ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ "ಇಷ್ಟು ಬೇಗ ಮಗು ಬೇಕಿತ್ತಾ" ಅಂತ ಪ್ರಶ್ನೆ ಮಾಡಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ

ಗದಗ: 9 ತಿಂಗಳ ಮಗುವಿಗೆ ಎಲೆ, ಅಡಿಕೆ ತಿನ್ನಿಸಿ ಕೊಲೆ ಮಾಡಿದ ಅಜ್ಜಿ; ಸೊಸೆ ಆರೋಪ
ಸಾಂದರ್ಭಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Nov 25, 2023 | 8:05 AM

ಗದಗ ನ.25: ಒಂಬತ್ತು ತಿಂಗಳ ಹಸುಗೂಸಿಗೆ (Baby) ಎಲೆ, ಅಡಿಕೆ ತಿನ್ನಿಸಿ ಅಜ್ಜಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಗಜೇಂದ್ರಗಡ (Gajendragad) ತಾಲೂಕಿನ ಪುರ್ತಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ನವೆಂಬರ್ 22 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿನ ತಾಯಿ ನಾಗರತ್ನ ಅತ್ತೆ ಸರೋಜಾ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅತ್ತೆ ಸರೋಜಾನೇ ನನ್ನ ಮಗುವನ್ನು ಕೊಲೆ ಮಾಡಿದ್ದಾರೆ ಎಂದು ಸೊಸೆ ನಾಗರತ್ನ ಆರೋಪಿಸಿದ್ದಾರೆ.

ಹೆರಿಗೆಯಾದ 5 ತಿಂಗಳ ಬಳಿಕ ನಾಗರತ್ನ ಗಂಡನ ಮನೆಗೆ ಬಂದಿದ್ದರು. ಈ ವೇಳೆ ಅತ್ತೆ ಸರೋಜಾ “ಇಷ್ಟು ಬೇಗ ಮಗು ಬೇಕಿತ್ತಾ” ಅಂತ ಪ್ರಶ್ನೆ ಮಾಡಿದ್ದಾರೆ. ಇದೇ ಕೋಪದಲ್ಲಿ ಮಗುವಿಗೆ ಅಡಕೆ ಹೋಳು, ಎಲೆ ತಿನ್ನಿಸಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಪತ್ನಿ ಕೊರಳನ್ನೇ ಕತ್ತರಿಸಿ ಕೊಲೆ ಮಾಡಿದ ಪತಿ, ನ್ಯಾಯಕ್ಕಾಗಿ ಕುಟುಂಬಸ್ಥರ ಅಳಲು

ನ.22ರಂದು ಮಗುವಿನ ಅಂತ್ಯಸಂಸ್ಕಾರ ನೆರವೇರಿತ್ತು. ಈ ಬಳಿಕ ಮಗುವಿನ ತಾಯಿ ನಾಗರತ್ನ ದೂರು ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ (ನ.24) ರಂದು ಶವ ಹೊರತೆಗೆದು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಗದಗ ಎಸಿ ವೆಂಕಟೇಶ‌ ನಾಯಕ್, ಸಿಪಿಐ ಎಸ್​ಎಸ್ ಬೀಳಗಿ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಬೀದಿನಾಯಿಗಳ ದಾಳಿಯಿಂದ ಐವರಿಗೆ ಗಂಭೀರ ಗಾಯ

ಕಲಬುರಗಿ: ಬೀದಿನಾಯಿಗಳ ದಾಳಿಯಿಂದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ತಾಪುರದ ತಳಗೇರಿ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯರು, ವೃದ್ಧರು, ಮಕ್ಕಳು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿತ್ತಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ