ಕಾಣೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆ: ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದ ದೊಡ್ಡಪ್ಪ

ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಶವ ಐದು ದಿನಗಳ ಬಳಿಕ ಇಂದು(,03) ಕಾಲುವೆಯಲ್ಲಿ ಪತ್ತೆಯಾಗಿದೆ. ಇನ್ನು ಈ ಸಾವಿನ ಬಗ್ಗೆ ಹಲವರು ಹಲವು ರೀತಿಯ;ಲ್ಲಿ ಅನುಮಾನದಿಂದ ನೋಡುವಂತಿದೆ.

ಕಾಣೆಯಾಗಿದ್ದ ಚಂದ್ರಶೇಖರ್ ಶವವಾಗಿ ಪತ್ತೆ: ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದ ದೊಡ್ಡಪ್ಪ
Chandrashekar
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 03, 2022 | 8:19 PM

ದಾವಣಗೆರೆ: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಇಂದು(,03) ಶವ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರಿನ ಸಹಿತ ಚಂದ್ರಶೇಖರ್​ನ ಮೃತದೇಹ ಸಿಕ್ಕಿದೆ. ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು ಎಂದು ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ ಸ್ಫೋಟಕ ಆರೋಪ ಮಾಡಿದ್ದಾರೆ.

ಟಿವಿ9ಗೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್ ದೊಡ್ಡಪ್ಪ ವಿಶ್ವರಾಧ್ಯ, ಇದೊಂದು ಕೊಲೆ, ನಮಗೆ ಆರಂಭದಿಂದಲೂ ಅನುಮಾನವಿತ್ತು. ರೇಣುಕಾಚಾರ್ಯರ ಮೇಲಿನ ರಾಜಕೀಯ ದ್ವೇಷದಿಂದ ಕೊಲೆ ಮಾಡಲಾಗಿದೆ. ಚಂದ್ರಶೇಖರ್ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಲಿ ಎಂದು ಒತ್ತಾಯಿಸಿದರು.

ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್‌ ಶವ ಕಾರು ಸಹಿತ ಕಾಲುವೆಯಲ್ಲಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ನಾಪತ್ತೆಯಾದ ಬಳಿಕ ಚಂದ್ರಶೇಖರ್ ಶವ ಪತ್ತೆಯಾಗಿದೆ. ಅದರಲ್ಲೂ ಚಂದ್ರಶೇಖರ್ ಶವ ಹಿಂದಿನ ಸೀಟ್​ಲ್ಲಿ ಪತ್ತೆಯಾಗಿದೆ. ಹೀಗಾಗಿ ಇದೊಂದು ಕೊಲೆ. ಮರಣೋತ್ತರ ಪರೀಕ್ಷಯಿಂದ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದರು.

ಅಕ್ಟೋಬರ್ 30ರಂದು ನಾಪತ್ತೆಯಾಗಿದ್ದ ಚಂದ್ರು

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಎಂ.ಪಿ.ರಮೇಶ್ ಪುತ್ರ ಚಂದ್ರಶೇಖರ್ ಭಾನುವಾರ (ಅಕ್ಟೋಬರ್ 30) ರಾತ್ರಿ 11.30 ರಿಂದ ನಾಪತ್ತೆಯಾಗಿದ್ದರು. ಭಾನುವಾರ ಸಂಜೆ ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ದೆಗೆ ಹೋಗಿ ವಿನಯ್ ಗುರೂಜಿ ಆಶೀರ್ವಾದ ಪಡೆದಿದ್ದ ಚಂದ್ರು ರಾತ್ರಿ ಊರಿಗೆ ವಾಪಸ್ ಆಗಿದ್ದ. ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಸ್ನೇಹಿತರ ಜೊತೆ ಕೊನೆಯದಾಗಿ ಮಾತಾಡಿದ್ದಾನೆ‌. 11.30 ಕ್ಕೆ ಹೊನ್ನಾಳಿ ಪಟ್ಟಣದಲ್ಲಿ ಮೊಬೈಲ್ ಸ್ವಿಚ್ ಆಫ್ ಆಗಿದೆ. ಅಲ್ಲಿಂದ ಇಲ್ಲಿಯವರೆಗೆ ಸಿಗ್ನಲ್ ಟ್ರೇಸ್ ಆಗಿಲ್ಲ. ಅಲ್ಲದೆ ಶಿವಮೊಗ್ಗ ದಿಂದ ನ್ಯಾಮತಿ ತಾಲ್ಲೂಕಿನ ಸುರಹೊನ್ನೆಗೆ ಬಂದ ಸಿಸಿ ಕ್ಯಾಮರಾ ಪುಟೇಜ್ ಮಾತ್ರ ಸಿಕ್ಕಿತ್ತು.. ಆದರೆ ಸುರಹೊನ್ನೆಯಿಂದ ಹೊನ್ನಾಳಿ ಗೆ ಬಂದ ಮಾಹಿತಿ ಸಿಕ್ಕಿರಲಿಲ್ಲ.. ಆದರೆ ಚಂದ್ರಶೇಖರ್ ಮೊಬೈಲ್ ಮಾತ್ರ ಹೊನ್ನಾಳಿ ಪಟ್ಟಣದ ಸರ್ಕಲ್ ನಲ್ಲಿ ಸ್ವಿಚ್ ಆಫ್ ಆಗಿತ್ತು.

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ