ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ.ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ.

ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ ಆರೋಪ: ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್‌ ನೌಕರ
ಡಿ ಗ್ರೂಪ್ ನೌಕರ ವೇಣು
Follow us
ರಾಮು, ಆನೇಕಲ್​
| Updated By: ಗಂಗಾಧರ​ ಬ. ಸಾಬೋಜಿ

Updated on: Sep 30, 2023 | 5:23 PM

ಆನೇಕಲ್, ಸೆಪ್ಟೆಂಬರ್​ 30: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ಪುರಸಭೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧ ಕಿರುಕುಳ (harassment) ಆರೋಪ ಕೇಳಿಬಂದಿದ್ದು, ಡಿ ಗ್ರೂಪ್‌ ನೌಕರ ಕಚೇರಿಯಲ್ಲೇ ಸಿಬ್ಬಂದಿ ಎದುರೇ ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ವೇಣು ಆತ್ಮಹತ್ಯೆಗೆ ಯತ್ನಿಸಿದ ಡಿ ಗ್ರೂಪ್ ನೌಕರ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಲಾಗಿದೆ ಎನ್ನಲಾಗುತ್ತಿದ್ದು, ಅಸ್ವಸ್ಥ ನೌಕರ ವೇಣುಗೆ ಚಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ನೌಕರ ವೇಣು ಕುಟುಂಬಸ್ಥರು ಕಿರುಕುಳ ಆರೋಪ ಮಾಡಿದ್ದಾರೆ. ಶ್ವೇತಾಬಾಯಿ ಟಾರ್ಚರ್ ಕೊಟ್ಟಿದ್ದಾರೆ ಎಂದು ವೇಣು ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಕಿರುಕುಳದ ಬಗ್ಗೆ ಮೂರು ದಿನಗಳಿಂದ ಮನೆಯಲ್ಲಿ ಹೇಳುತ್ತಿದ್ದರು. ತುಂಬಾ ಕಿರುಕುಳ ನೀಡ್ತಿದ್ದಾರೆ ವಿಷ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಇಂದೂ ಕಚೇರಿಯಲ್ಲಿ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಪುಡ್ ಕಾರ್ಪೋರೇಷನ್​​ಗೆ ನಾಮನಿರ್ದೇಶನ ಹೆಸರಲ್ಲಿ ವ್ಯಕ್ತಿಗೆ 5.60 ಲಕ್ಷ ರೂ. ವಂಚನೆ

ಡಿ ಗ್ರೂಪ್‌ ನೌಕರ ವೇಣು ಕಳೆದ 15 ವರ್ಷದಿಂದ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಚಂದಾಪುರದ ಬೆಸ್ಟ್ ಆಸ್ಪತ್ರೆ ಬಳಿ ಜನ ಜಮಾಯಿಸಿದ್ದಾರೆ.

ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ: ಎಫ್‌ಐಆರ್​ ದಾಖಲು

ಚಿಕ್ಕಬಳ್ಳಾಪುರ: ಶಾಲಾ ಶಿಕ್ಷಕಿಗೆ ಸಹೋದ್ಯೋಗಿ ಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ ಕೇಳಬಂದಿರುವಂತಹ ಘಟನೆ ಇತ್ತೇಚೆಗೆ ಜಿಲ್ಲೆಯ ಮಂಚೇನಹಳ್ಳಿಯ ಆಚಾರ್ಯ ಪ್ರೌಢಶಾಲೆಯಲ್ಲಿ ನಡೆದಿತ್ತು. ಶಿಕ್ಷಕ ರಂಗಧಾಮಯ್ಯ ವಿರುದ್ಧ ಮಂಚೇನಹಳ್ಳಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 354(A), 354(D), 504ರಡಿ ಎಫ್​ಐಆರ್​​ ದಾಖಲಿಸಲಾಗಿತ್ತು. ಮಹಿಳೆಯರ ವಿಶ್ರಾಂತಿ ಕೊಠಡಿಗೆ ಆಗಮಿಸಿ ಕಿರುಕುಳ ನೀಡಿರುವುದಾಗಿ ಆರೋಪ ಮಾಡಲಾಗಿತ್ತು.

ಇದನ್ನೂ ಓದಿ: ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ

ಶಿಕ್ಷಕಿ ಹೋದ ಕಡೆಯೆಲ್ಲಾ ಬೆನ್ನಟ್ಟಿ ಪ್ರೀತಿಸುವಂತೆ ಪೀಡಿಸಿದ್ದಾರೆ ಎನ್ನಲಾಗಿತ್ತು. ಸಹೋದ್ಯೋಗಿಯಿಂದ ನೊಂದು ಸಹ ಶಿಕ್ಷಕಿ ಪೊಲೀಸರ ಮೊರೆ ಹೋಗಿದ್ದು, ಶಿಕ್ಷಕಿ ದೂರಿನ ಮೇರೆಗೆ ಶಿಕ್ಷಕ ಆರ್‌.ರಂಗಧಾಮಯ್ಯ ವಿರುದ್ಧ ಎಫ್‌ಐಆರ್​ ದಾಖಲು ಮಾಡಲಾಗಿತ್ತು.

ಗಣೇಶೋತ್ಸವ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್​ ಮಾಡುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವಂತಹ ಘಟನೆ ರಾಯಚೂರಿನ ಜಲಾಲ್ ನಗರದಲ್ಲಿ ಸೆ.23ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತೆಲುಗು ಹಾಡಿಗೆ ಹೆಜ್ಜೆ ಹಾಕುವ ವೇಳೆ ಹೃದಯಾಘಾತವಾಗಿದೆ. ಅನಂತಮ್ಮ(56) ಮೃತ  ಮಹಿಳೆ. ಮಾರ್ಕೆಟ್ ಯಾರ್ಡ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?