ಮಂಗಳೂರು: ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳಿಸಿದ ಆರೋಪ ಹಿನ್ನೆಲೆಯಲ್ಲಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಬಳಿ ನಡೆದಿದೆ.
ಯುವತಿಯರಿಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ ಎಂದು ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ, ಕನ್ಯಾನ ನಿವಾಸಿ ದಿನೇಶ್ ಮತ್ತು ಮೂವರು ಸ್ನೇಹಿತರು ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಮತ್ತೆ ಈ ರೀತಿಯ ಕೆಲಸ ಮಾಡಬೇಡ ಎಂದು ಅವಾಚ್ಯ ಶಬ್ದಗಳಿಂದ ವಾರ್ನ್ ಮಾಡಿದ್ದಾರೆ. ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 8:27 am, Thu, 28 May 20