AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ, ಗೃಹಲಕ್ಷ್ಮೀ ಹೆಸರಲ್ಲಿ ಮಹಾಮೋಸ; ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ

ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೆ ಗೃಹಜ್ಯೋತಿ ಹಾಗೂ ಗೃಹಲಕ್ಷ್ಮೀ ಯೋಜನೆ ಹೆಸರಿನಲ್ಲಿ ಮಹಿಳೆಯರಿಗೆ ವಂಚನೆ ಎಸಗುವ ವಂಚಕರು ಅಖಾಡಕ್ಕೆ ಇಳಿದಿದ್ದಾರೆ. ಬಳ್ಳಾರಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.

ಗೃಹಜ್ಯೋತಿ, ಗೃಹಲಕ್ಷ್ಮೀ ಹೆಸರಲ್ಲಿ ಮಹಾಮೋಸ; ಅರ್ಜಿ ಸಲ್ಲಿಸುವ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ
ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ನೆಪದಲ್ಲಿ ಬಳ್ಳಾರಿಯಲ್ಲಿ ಮಹಿಳೆಯರಿಂದ ಹಣ ವಸೂಲಿ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:Jun 29, 2023 | 10:02 AM

Share

ಬಳ್ಳಾರಿ: ಆನಲೈನ್​ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದ ಬೆನ್ನಲ್ಲೇ ಗೃಹಜ್ಯೋತಿ (Gruha Jyothi Scheme) ಮತ್ತು ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಹೆಸರಿನಲ್ಲಿ ಜನರಿಗೆ ವಂಚನೆ ಎಸಗಲು ವಂಚಕರು ಅಖಾಡಕ್ಕಿಳಿದಿದ್ದಾರೆ. ಗ್ಯಾರಂಟಿ ಯೋಜನೆಗಳ ಲಾಭ ಕೊಡಿಸುವ ಹೆಸರಿನಲ್ಲಿ ಜನರ ಬಳಿ ಬಂದು ಅರ್ಜಿ ಸಲ್ಲಿಕೆ ನೆಪದಲ್ಲಿ ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್ ತಜ್ಞನೊಬ್ಬನನ್ನು ಸಾರ್ವಜನಿಕರು ಹಿಡಿದ ಪೊಲೀಸರಿಗೆ ಒಪ್ಪಿಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ನಬೀರ್ ಹುಸೇನ್ ಎಂಬಾತ ಬಳ್ಳಾರಿಯ ಅಹಂಭಾವಿಯಲ್ಲಿ ಮನೆ ಮನೆಗೆ ಹೋಗಿ ಆನಲೈನ್​ನಲ್ಲಿ ಅರ್ಜಿ ಅಪಲೋಡ್ ಮಾಡುವ ಭರವಸೆ ನೀಡಿ ಮಹಿಳೆಯರಿಂದ 150 ರೂಪಾಯಿಂದ 200 ರೂಪಾಯಿ ವರೆಗೆ ಹಣ ವಸೂಲಿ ಮಾಡುತ್ತಿದ್ದ. ಅಲ್ಲದೆ, ದಿಶಾ ಒನ್ ಹೆಸರಿನಲ್ಲಿ ಬಿಲ್ ನೀಡುತ್ತಿದ್ದನು. ಅನುಮಾನಗೊಂಡ ಸ್ಥಳೀಯರು ನಬೀರ್​ನನ್ನು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಳ್ಳಾರಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಇದನ್ನೂ ಓದಿ: Gruha Lakshmi Scheme: ಎಚ್ಚರ ಎಚ್ಚರ…ಗೃಹಲಕ್ಷ್ಮಿ ಯೋಜನೆ ಹೆಸರಿಲ್ಲಿ ಬಂದಿವೆ ಮೂರು ನಕಲಿ ಆ್ಯಪ್​

ನಾನು ಜನರಿಗೆ ಮೋಸ ಮಾಡುತ್ತಿಲ್ಲ ಎನ್ನುತ್ತಿರುವ ನಬೀರ್

ನಾನು ಜನರಿಗೆ ಮೋಸ ಮಾಡುತ್ತಿಲ್ಲ. ಜನರ ಬಳಿಗೆ ಬಂದೂ ಅರ್ಜಿ ಅಪಲೋಡ್ ಮಾಡುತ್ತಿದ್ದೇನೆ ಎಂದು ನಬೀರ್ ಹೇಳುತ್ತಿದ್ದಾನೆ. ಸರ್ಕಾರದ ಗ್ಯಾರಂಟಿ ಯೋಜನೆಗಳನ್ನ ಮನೆ ಮನೆಗೆ ತಲುಪಿಸಲು ಅರ್ಜಿಗಳನ್ನ ಅಪಲೋಡ್ ಮಾಡುತ್ತಿದ್ದೇನೆ. ಎಲ್ಲರಿಗೂ ಸೈಬರ್ ಸೆಂಟರ್​ಗೆ ಬಂದು ಅರ್ಜಿ ಸಲ್ಲಿಸಲು ಆಗಲ್ಲ. ಹಾಗಾಗಿ ನಾನೇ ಮನೆ ಮನೆಗೆ ತೆರಳಿ ಅರ್ಜಿ ಅಪಲೋಡ್ ಮಾಡುತ್ತಿದ್ದೇನೆ ಎಂದು ಹೇಳಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Thu, 29 June 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ