AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಬೇಟಿ ಬಚಾವೋ, ಬೇಟಿ ಪಢಾವೋ ಬಗ್ಗೆ ಅದ್ಭುತ ಭಾಷಣ, ಕೆಲವೇ ದಿನಗಳಲ್ಲಿ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ

ಶಿಕ್ಷಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಆಕೆ ಹತ್ತನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಓದುವುದರಲ್ಲಿ ತುಂಬಾ ಬುದ್ಧಿವಂತಳು, ಭಾಷಣ, ಕ್ರೀಡೆ ಎಲ್ಲದರಲ್ಲೂ ಮುಂದು. ಬೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯ ಬಗ್ಗೆ ಶಾಲೆಯಲ್ಲಿ ನಿಗರ್ಗಳವಾಗಿ ಮಾತನಾಡಿದ್ದಳು, ಎಲ್ಲರೂ ಆಕೆಯ ಭಾಷಣವನ್ನು ಮೆಚ್ಚಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಆಕೆಯ ಮೇಲೆ ಶಿಕ್ಷಕ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ.

ಗುಜರಾತ್: ಬೇಟಿ ಬಚಾವೋ, ಬೇಟಿ ಪಢಾವೋ ಬಗ್ಗೆ ಅದ್ಭುತ ಭಾಷಣ, ಕೆಲವೇ ದಿನಗಳಲ್ಲಿ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ
ಕ್ರೈಂ-ಸಾಂದರ್ಭಿಕ ಚಿತ್ರImage Credit source: India TV
ನಯನಾ ರಾಜೀವ್
|

Updated on: Feb 19, 2025 | 9:18 AM

Share

ಬೇಟಿ ಬಚಾವೋ, ಬೇಟಿ ಪಢಾವೋ ಬಗ್ಗೆ ಹತ್ತನೇ ತರಗತಿ ವಿದ್ಯಾರ್ಥಿನಿ ಅದ್ಭುತ ಭಾಷಣ ಮಾಡಿದ್ದಳು, ಶಾಲೆಯಲ್ಲಿ ನೆರೆದಿದ್ದ ಎಲ್ಲರೂ ಆಕೆಯ ಭಾಷಣ ಕೇಳಿ ಬೆರಗಾಗಿ ಚಪ್ಪಾಳೆ ತಟ್ಟಿದ್ದರು. ಇದಾದ ಕೆಲವೇ ದಿನಗಳಲ್ಲಿ ಶಿಕ್ಷಕನೊಬ್ಬ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನಲ್ಲಿ ವರದಿಯಾಗಿದೆ.

ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಘಟನೆ ಗುಜರಾತ್​ನ ಸಬರ್ಕಾಂತ ಜಿಲ್ಲೆಯಲ್ಲಿ ನಡೆದಿದೆ. ಹತ್ತನೇ ತರಗತಿ ವಿದ್ಯಾರ್ಥಿನಿ ಭೇಟಿ ಬಚಾವೋ, ಬೇಟಿ ಪಢಾವೋ ಯೋಜನೆಯ ಕುರಿತು ಭಾಷಣ ಮಾಡಿದ್ದಳು. ಫೆಬ್ರವರಿ 7 ರಂದು ಆರೋಪಿ ಶಿಕ್ಷಕ ಆಕೆಯನ್ನು ಹುಟ್ಟುಹಬ್ಬದ ಪ್ರಯುಕ್ತ ಹೋಟೆಲ್​ಗೆ ಕರೆದೊಯ್ದಿದ್ದ. ಆ ಹೋಟೆಲ್​ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಆಕೆಯ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಆದರೆ ಬಾಲಕಿ ಧೈರ್ಯಗುಂದಲಿಲ್ಲ, ಆಕೆಯ ಶಾಲಾ ಪರೀಕ್ಷೆಗಳು ಫೆಬ್ರವರಿ ಅಂತ್ಯದಲ್ಲಿವೆ. ಬಾಲಕಿ ಪ್ರಸ್ತುತ ತನ್ನ ಅಧ್ಯಯನದತ್ತ ಗಮನ ಹರಿಸುತ್ತಿದ್ದಾಳೆ. ಮಕ್ಕಳಿಗೆ ತಪ್ಪು-ಒಪ್ಪುಗಳ ಬಗ್ಗೆ ತಿಳಿವಳಿಕೆ ಹೇಳಬೇಕಾದವರೇ ಅಪರಾಧದಲ್ಲಿ ಭಾಗಿಯಾಗುತ್ತಿರುವುದು ಸಮಾಜದಲ್ಲಿ ಆತಂಕ ಸೃಷ್ಟಿಸಿದೆ.

ಮತ್ತಷ್ಟು ಓದಿ: ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಅತ್ಯಾಚಾರದ ನಂತರ, ಶಿಕ್ಷಕ ತನಗೆ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿ ಹೇಳಿದ್ದಾಳೆ. ಶಾಲಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಬಿಡುವುದಿಲ್ಲ ಎಂದು ಆತ ಬೆದರಿಕೆ ಹಾಕಿದ್ದಾನೆ. ಆದರೆ ಅವಳು ಪೊಲೀಸ್ ಅಧಿಕಾರಿಯಾಗಲು ಬಯಸುತ್ತಾಳೆ. ವಿಜ್ಞಾನ ಮತ್ತು ಗಣಿತ ಅವಳ ನೆಚ್ಚಿನ ವಿಷಯಗಳಾಗಿವೆ. ಪ್ರಸ್ತುತ ಅವಳು ಕಷ್ಟಪಟ್ಟು ಅಧ್ಯಯನ ಮಾಡುವ ಮೂಲಕ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ