Crime News: ಗುಜರಾತ್​ನಲ್ಲಿ 2 ಬಸ್‌ಗಳು ಡಿಕ್ಕಿ; ಮೂವರು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

Road Accident: ಗುಜರಾತ್​ನಲ್ಲಿ ಎರಡು ಬಸ್​ಗಳ ನಡುವೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೈಕ್ ಸವಾರ, ಐಷಾರಾಮಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಇನ್ನೊಬ್ಬ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

Crime News: ಗುಜರಾತ್​ನಲ್ಲಿ 2 ಬಸ್‌ಗಳು ಡಿಕ್ಕಿ; ಮೂವರು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
ಗುಜರಾತ್​ನಲ್ಲಿ 2 ಬಸ್‌ಗಳು ಡಿಕ್ಕಿ

Updated on: Jun 01, 2024 | 6:20 PM

ಅಹಮದಾಬಾದ್: ಗುಜರಾತ್‌ನ (Gujarat) ಅರ್ವಾಲಿ ಜಿಲ್ಲೆಯಲ್ಲಿ ಇಂದು ರಾಜ್ಯ ಸಾರಿಗೆ ಬಸ್‌ ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದು ರಸ್ತೆ ಡಿವೈಡರ್​ ಅನ್ನು ಹಾರಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಕರಿಯಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ (Accident) ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಸಾರಿಗೆ ಬಸ್ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಜಿಗಿದು ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ಬಂದು ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪುರಿ (ಒಡಿಶಾ)ದ ಜಗನ್ನಾಥ ದೇವಸ್ಥಾನದಲ್ಲಿ ತೀರ್ಥಯಾತ್ರೆ ಮುಗಿಸಿ ವಡೋದರಾದ ಸಾವ್ಲಿಗೆ ಹಿಂದಿರುಗುತ್ತಿದ್ದ ಪ್ರಯಾಣಿಕರನ್ನು ಐಷಾರಾಮಿ ಬಸ್ ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Akhnoor Accident: ಜಮ್ಮು-ಪೂಂಚ್ ಹೆದ್ದಾರಿಯಲ್ಲಿ ಭೀಕರ ಅಪಘಾತ; 21 ಜನ ಸಾವು, 60 ಮಂದಿಗೆ ಗಾಯ

ಸಕರಿಯಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎರಡೂ ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಸುಮಾರು 15ರಿಂದ 20 ಮಂದಿಯನ್ನು ಚಿಕಿತ್ಸೆಗಾಗಿ ನೆರೆಯ ಸಬರ್ಕಾಂತ ಜಿಲ್ಲೆಯ ಹಿಮತ್‌ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೆ ಮೊಡಸಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಪುಣೆ ಪೋಷೆ ಕಾರು ಅಪಘಾತ ಪ್ರಕರಣ; ಉನ್ನತ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿಲ್ಲ: ಅಜಿತ್ ಪವಾರ್

ರಾಜ್ಯ ಸಾರಿಗೆ ಬಸ್ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಜಿಗಿದು ಹೆದ್ದಾರಿಯ ರಾಂಗ್ ಸೈಡ್‌ನಲ್ಲಿ ಐಷಾರಾಮಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ