AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ವ್ಯಕ್ತಿಯೊಬ್ಬ ಕುಟುಂಬ ಸದಸ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಈ ದಾಳಿಯಲ್ಲಿ ಪತ್ನಿ ಹಾಗೂ ಮಗು ಪ್ರಾಣ ಕಳೆದುಕೊಂಡಿದ್ದಾರೆ. ಪೋಷಕರು ಗಾಯಗೊಂಡಿದ್ದಾರೆ. ಕೊನೆಗೆ ವ್ಯಕ್ತಿ ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಈ ಘಟನೆಯು ಸೂರತ್‌ನಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ದುರಂತ ಪ್ರಕರಣದ ಸಂಪೂರ್ಣ ಚಿತ್ರವನ್ನು ಅರ್ಥಮಾಡಿಕೊಳ್ಳಲು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ

ಗುಜರಾತ್: ಹೆಂಡತಿ, ಮಗುವನ್ನು ಕೊಂದು, ಪೋಷಕರ ಮೇಲೆ ಹಲ್ಲೆ ನಡೆಸಿ, ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಸ್ಮಿತ್Image Credit source: Free Press Journal
ನಯನಾ ರಾಜೀವ್
|

Updated on: Dec 27, 2024 | 3:25 PM

Share

ವ್ಯಕ್ತಿಯೊಬ್ಬ ಹೆಂಡತಿ, ಮಗುವನ್ನು ಕೊಂದು ಪೋಷಕರ ಮೇಲೆ ಹಲ್ಲೆ ನಡೆಸಿ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಸೂರತ್‌ನ ಸರ್ತಾನಾ ಪ್ರದೇಶದಲ್ಲಿ ನಡೆದ ಭೀಕರ ಸಾಮೂಹಿಕ ಹತ್ಯೆ ಘಟನೆ ನಗರವನ್ನು ಬೆಚ್ಚಿ ಬೀಳಿಸಿದೆ.

ಸ್ಮಿತ್ ಜಿಯಾನಿ ಎಂಬ ವ್ಯಕ್ತಿ ತನ್ನ ಕುಟುಂಬಕ್ಕೆ ಚಾಕುವಿನಿಂದ ಹಲ್ಲೆ ನಡೆಸಿ, ಪತ್ನಿ ಮತ್ತು ಮಗುವನ್ನು ಕೊಂದು, ಪೋಷಕರನ್ನು ಗಂಭೀರವಾಗಿ ಗಾಯಗೊಳಿಸಿದ್ದಾನೆ. ನಂತರ ಸ್ಮಿತ್ ತನ್ನ ಕುತ್ತಿಗೆಯನ್ನು ಸೀಳಿಕೊಂಡು ತನ್ನ ಜೀವನವನ್ನು ಅಂತ್ಯಗೊಳಿಸಲು ಪ್ರಯತ್ನಿಸಿದ್ದಾನೆ.

ಸ್ಮಿತ್ ಮತ್ತು ಅವರ ಪೋಷಕರು ತಮ್ಮ ಗಾಯಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರೆ, ಅವರ ಪತ್ನಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಘಟನೆಯ ಕುರಿತು ಸಾರ್ಥನಾ ಪೊಲೀಸರು ತನಿಖೆ ಆರಂಭಿಸಿದ್ದು, ಈ ದುರಂತ ಕೃತ್ಯಕ್ಕೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಅಮ್ರೇಲಿಯ ಸಾವರಕುಂಡ್ಲಾದಿಂದ ಬಂದಿರುವ ಕುಟುಂಬದಲ್ಲಿ ಆಂತರಿಕ ಕಲಹವಿತ್ತು ಎನ್ನಲಾಗಿದೆ.ಕೌಟುಂಬಿಕ ಒತ್ತಡಗಳು ಸ್ಮಿತ್ ಅವರನ್ನು ಈ ಕೃತ್ಯಕ್ಕೆ ಪ್ರೇರೇಪಿಸಿರಬಹುದು ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಮತ್ತಷ್ಟು ಓದಿ: ಕೋಲಾರದಲ್ಲಿ ಹೃದಯವಿದ್ರಾವಕ ಘಟನೆ: ತನ್ನಿಬ್ಬರು ಕಂದಮ್ಮಗಳನ್ನ ಕೊಂದು ತಾಯಿಯೂ ಆತ್ಮಹತ್ಯೆ

ಈ ಘಟನೆಯು ಸೂರತ್‌ನಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ದುರಂತ ಪ್ರಕರಣದ ಸಂಪೂರ್ಣ ಚಿತ್ರವನ್ನು ಅರ್ಥಮಾಡಿಕೊಳ್ಳಲು ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದ್ದಾರೆ. ಪೋಷಕರು ಗುಣಮುಖವಾದ ಬಳಿಕ ನಿಜವಾದ ಕಾರಣ ಹೊರಬೀಳಬಹುದು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!