ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ

ತಂಗಿಗೆ ಶ್ರೀರಕ್ಷೆಯಾಗಿರಬೇಕಿದ್ದ ಅಣ್ಣನೇ ಆಕೆಯ ಮೇಲೆ ಅತ್ಯಾಚಾರನಡೆಸಿ ಗರ್ಭಿಣಿ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಆಕೆಗೆ ಶಾಲೆಯಲ್ಲಿ ಹೊಟ್ಟೆನೋವು ಕಾಣಿಸಿಕೊಂಡಾಗ ಕೂಡಲೇ ಆಸ್ಪತ್ರೆಗೆ ದಾಖಲಿಸ

ಅಣ್ಣನಿಂದಲೇ ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ, ಆಕೆ ಈಗ ಗರ್ಭಿಣಿ
ಕ್ರೈಂ

Updated on: Oct 04, 2024 | 8:44 AM

ಅಪ್ರಾಪ್ತ ಬಾಲಕನೊಬ್ಬ ತನ್ನ ಸಹೋದರಿ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಈಗ ಗರ್ಭಿಣಿ ಎನ್ನುವ ಮಾಹಿತಿ ಲಭ್ಯವಾಗಿದೆ. ಆತ 16 ವರ್ಷದವನಾಗಿದ್ದು, ತಂಗಿಗಿನ್ನು 13 ವರ್ಷ ವಯಸ್ಸು, ಗುಜರಾತ್​ನ ಸೂರತ್​ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ಬಾಲಕಿ ಹೊಟ್ಟೆ ನೋವು ಎಂದು ಹೇಳಿದ ಬಳಿಕ ಆಕೆಯ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಾಗ ಘಟನೆ ಬೆಳಕಿಗೆ ಬಂದಿದೆ. ವೈದ್ಯರು ಆಕೆಗೆ ಮೂರು ತಿಂಗಳಾಗಿರುವುದನ್ನು ದೃಢಪಡಿಸಿದ್ದಾರೆ.

ವಿಚಾರಣೆ ವೇಳೆ ಬಾಲಕಿ ತನ್ನ ತಾಯಿಗೆ ತನ್ನ ಅಣ್ಣ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದುವಂತೆ ಕೇಳಿದ್ದಾಗಿ ತಿಳಿಸಿದ್ದಾಳೆ. ಬಾಲಕಿ ನಿರಾಕರಿಸಿದಾಗ ಆತ ಆಕೆಯ ಮೇಲೆ ಎರಡು ಬಾರಿ ಅತ್ಯಾಚಾರ ಎಸಗಿ, ಪೋಷಕರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಮತ್ತಷ್ಟು ಓದಿ: ಅಪಾರ್ಟ್​ಮೆಂಟ್​ಗೆ ದರೋಡೆಗೆಂದು ಬಂದವರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಘಟನೆ ಬಳಿಕ ಬಾಲಕಿಯ ತಾಯಿ ಸೆ.30ರಂದು ಬಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪೋಲೀಸರ ಪ್ರಕಾರ, ಪೋಷಕರು ಕೂಲಿ ಕೆಲಸ ಮಾಡುತ್ತಿದ್ದರು ಮತ್ತು ಕೆಲಸಕ್ಕಾಗಿ ಪ್ರತಿದಿನ ಬೆಳಗ್ಗೆ ಮನೆಯಿಂದ ಹೊರಡುತ್ತಿದ್ದರು ಮತ್ತು ಅವರ ಇಬ್ಬರೂ ಮಕ್ಕಳು ಮನೆಯಲ್ಲಿ ಇರುತ್ತಿದ್ದರು.

8 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿ, ಶಾಲೆಯಲ್ಲಿ ಹೊಟ್ಟೆ ನೋವೆಂದು ಒದ್ದಾಡಿದ್ದಳು, ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದರು. ಈ ವರ್ಷದ ಜುಲೈನಲ್ಲಿ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಮೊಬೈಲ್ ಫೋನ್‌ನಲ್ಲಿ ಅಶ್ಲೀಲತೆಯನ್ನು ವೀಕ್ಷಿಸಿದ ಒಂಬತ್ತು ವರ್ಷದ ಬಾಲಕಿಯನ್ನು ಆಕೆಯ 13 ವರ್ಷದ ಸಹೋದರ ಲೈಂಗಿಕ ಕಿರುಕುಳ ನೀಡಿ ಹತ್ಯೆಗೈದಿರುವ ಘಟನೆಯೂ ನಡೆದಿತ್ತು.

ಮಧ್ಯಪ್ರದೇಶ ಪೊಲೀಸರ ಪ್ರಕಾರ, ಘಟನೆಯ ನಂತರ, 17 ಮತ್ತು 18 ವರ್ಷ ವಯಸ್ಸಿನ ಹದಿಹರೆಯದ ತಾಯಿ ಮತ್ತು ಸಹೋದರಿಯರು ಘಟನೆ ಮುಚ್ಚಿಡಲು ಸಹಾಯ ಮಾಡಿದ್ದರು.

 

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us