Gurugram Crime: ಕ್ರೀಡಾಕೂಟದ ವೇಳೆ 8ನೇ ತರಗತಿ ವಿದ್ಯಾರ್ಥಿನಿಯ ಅಪಹರಣ, ಸಾಮೂಹಿಕ ಅತ್ಯಾಚಾರ

ಶಾಲೆಯ ಕ್ರೀಡಾಕೂಟದ ವೇಳೆ 8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಮೂರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

Gurugram Crime: ಕ್ರೀಡಾಕೂಟದ ವೇಳೆ 8ನೇ ತರಗತಿ ವಿದ್ಯಾರ್ಥಿನಿಯ ಅಪಹರಣ, ಸಾಮೂಹಿಕ ಅತ್ಯಾಚಾರ
ಬಾಲಕಿ ಅಪಹರಣImage Credit source: India.com
Follow us
ನಯನಾ ರಾಜೀವ್
|

Updated on: Mar 13, 2023 | 9:31 AM

ಶಾಲೆಯ ಕ್ರೀಡಾಕೂಟದ ವೇಳೆ 8ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಮೂರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ಸೋಹ್ನಾ ಪ್ರದೇಶದ ಶಾಲೆಯಿಂದ 14 ವರ್ಷದ ಬಾಲಕಿಯನ್ನು ಅಪಹರಿಸಿ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯ ತಂದೆ ನೀಡಿದ ದೂರಿನ ಪ್ರಕಾರ, ಕಳೆದ ವರ್ಷ ಡಿಸೆಂಬರ್ 18 ರಂದು ಕ್ರೀಡಾ ಕಾರ್ಯಕ್ರಮದ ವೇಳೆ 8 ನೇ ತರಗತಿ ವಿದ್ಯಾರ್ಥಿನಿಯನ್ನು ಶಾಲೆಯಿಂದ ಮೂವರು ಯುವಕರು ಅಪಹರಿಸಿ ಗುಡ್ಡಗಾಡು ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಅಲ್ಲದೇ ಘಟನೆಯನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಮೂವರು ಆರೋಪಿಗಳು ಬಾಲಕಿಯ ಆಕ್ಷೇಪಾರ್ಹ ವಿಡಿಯೋ ಮಾಡಿ ವಾಟ್ಸಾಪ್ ಗ್ರೂಪ್‌ಗಳು ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ. ಆರೋಪಿಗಳನ್ನು ಗುರುತಿಸಲಾಗಿದೆ ಆದರೆ ಅವರು ತಲೆಮರೆಸಿಕೊಂಡಿರುವ ಕಾರಣ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯನ್ನು ಬಾಲಕಿ ಇಲ್ಲಿಯವರೆಗೆ ಯಾರಿಗೂ ಬಹಿರಂಗಪಡಿಸಿಲ್ಲ ಎಂದು ಸಂತ್ರಸ್ತೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ, ಆದರೆ ಶನಿವಾರದಂದು, ತನಗೆ ವಿಡಿಯೋದ ಬಗ್ಗೆ ತಿಳಿದಿದೆ ಎಂಬುದು ಆಕೆಗೆ ತಿಳಿದಾಗ ಘಟನೆಯನ್ನು ಬಹಿರಂಗಪಡಿಸಿದಳು ಎಂದು ತಂದೆ ಹೇಳಿದ್ದಾರೆ,  ತಕ್ಷಣ ಪೋಷಕರು ವಿಷಯವನ್ನು ಪೊಲೀಸರಿಗೆ ವಿಷಯ ತಿಳಿಸಲಾಯಿತು.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಇಬ್ಬರು ಆರೋಪಿಗಳು 11 ಮತ್ತು 12 ನೇ ತರಗತಿಯಲ್ಲಿ ಓದುತ್ತಿರುವ ಮತ್ತೊಂದು ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೂರನೆಯವರು ಕಾಲೇಜನ್ನು ತೊರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ಗುರುತಿಸಲಾಗಿದ್ದು, ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಉಪಾಸನಾ ಸಿಂಗ್ ತಿಳಿಸಿದ್ದಾರೆ.

ದೂರಿನ ಮೇರೆಗೆ ಪೊಲೀಸರು ಮೂವರು ಶಂಕಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 (ಅಪಹರಣ) ಮತ್ತು 376-ಡಿಎ (ಹದಿನಾರು ವರ್ಷದೊಳಗಿನ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ) ಮತ್ತು ಮಕ್ಕಳ ರಕ್ಷಣೆಯ ಸೆಕ್ಷನ್ 13/6 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಸೋಹ್ನಾ ಸದರ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ