ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ಮಾತುಗಳೂ ಕೂಡ ಕೊಲೆಯ ಹಂತಕ್ಕೆ ಹೋಗಿಬಿಡುತ್ತವೆ. ಕೇವಲ ಕೆಲಸದ ಗುಣಮಟ್ಟ ಸರಿ ಇಲ್ಲ, ಸರಿಯಾಗಿ ಕೆಲಸ ಮಾಡಿಲ್ಲ ಎಂದಿದ್ದಕ್ಕೆ ಸಹೋದ್ಯೋಗಿಯನ್ನು ಕೊಲೆ ಮಾಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
ಆರೋಪಿ ಅಸ್ಸಾಂ ಮೂಲದ ಅರ್ಜುನ್ ಶವತಾಲ್ (22) ಎಂಬಾತನನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸೆಕ್ಟರ್ 53ರ ಗೆಸ್ಟ್ ಹೌಸ್ ನಲ್ಲಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಂದಿರುವ ಬಗ್ಗೆ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಶ್ವಾನದಳ ಮತ್ತು ವಿಧಿವಿಜ್ಞಾನ ತಜ್ಞರು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
ಮೃತರು ಬಿಹಾರ ಮೂಲದ ದಿಲೀಪ್ ಕುಮಾರ್ ಅತಿಥಿ ಗೃಹದಲ್ಲಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು.
ವಿಚಾರಣೆಯ ಸಮಯದಲ್ಲಿ, ಶವತಾಲ್ ಅವರು ಕುಮಾರ್ ವಿರುದ್ಧ ಕೋಪ ಹೊಂದಿದ್ದರು, ಏಕೆಂದರೆ ಅವರು ಕೆಲಸದ ಗುಣಮಟ್ಟದ ಬಗ್ಗೆ ಅವರನ್ನು ನಿರಂತರವಾಗಿ ನಿಂದಿಸುತ್ತಿದ್ದರು ಮತ್ತು ಅವರಿಗೆ ಬೆದರಿಕೆ ಹಾಕುತ್ತಿದ್ದ ಎಂದು ಹೇಳಿದ್ದಾರೆ.
ಸತತವಾಗಿ ಬೈಯುತ್ತಿದ್ದರಿಂದ ಕೋಪಗೊಂಡ ಆತ ಅಡುಗೆ ಮನೆಯಿಂದ ಚಾಕುವನ್ನು ತೆಗೆದುಕೊಂಡು ದಿಲೀಪ್ರನ್ನು ಇರಿದು ಕೊಂದಿದ್ದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ