ಹಾಡಹಗಲೇ ಹರಿಯಿತು ನೆತ್ತರು.. ಮಾರಕಾಸ್ತ್ರಗಳಿಂದ ಕೊಚ್ಚಿ HAL ನೌಕರನ ಬರ್ಬರ ಹತ್ಯೆ
ಬೆಂಗಳೂರು: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೀರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. HALನಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಇಂದು ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದುಕೊಂಡಿದ್ದ. ಹೊರಗಡೆ ಹೊರಟಾಗ ಆತನ ಬೈಕ್ ಹಿಂಬಾಲಿಸಿ ಬಂದ ಹಂತಕರು ಚಾಕುವಿನಿಂದ ಇರಿದು ರಾಜೇಶ್ನನ್ನು ಕೊಲೆಗೈದಿದ್ದಾರೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ […]
ಬೆಂಗಳೂರು: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವೀರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
HALನಲ್ಲಿ ಕೆಲಸ ಮಾಡುತ್ತಿದ್ದ ರಾಜೇಶ್ ಇಂದು ಕೆಲಸಕ್ಕೆ ರಜೆಯಿದ್ದ ಹಿನ್ನೆಲೆಯಲ್ಲಿ ಮನೆಯಲ್ಲೇ ಉಳಿದುಕೊಂಡಿದ್ದ. ಹೊರಗಡೆ ಹೊರಟಾಗ ಆತನ ಬೈಕ್ ಹಿಂಬಾಲಿಸಿ ಬಂದ ಹಂತಕರು ಚಾಕುವಿನಿಂದ ಇರಿದು ರಾಜೇಶ್ನನ್ನು ಕೊಲೆಗೈದಿದ್ದಾರೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.