ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು

ಭದೋಹಿಯ ಪುರಾತನ ಹನುಮಾನ್ ದೇವಾಲಯದಲ್ಲಿ 75 ವರ್ಷದ ಅರ್ಚಕನನ್ನು ಕೊಲೆ ಮಾಡಲಾಗಿದ್ದು, ದೇವಸ್ಥಾನದಲ್ಲೇ ಅವರ ಶವ ಪತ್ತೆಯಾಗಿದೆ. ಕಳ್ಳತನದ ಬಗ್ಗೆ ಹಲವು ಬಾರಿ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದ್ದು, ವಿವರವಾದ ತನಿಖೆ ನಡೆಯುತ್ತಿದೆ.

ಹನುಮಾನ್ ದೇವಾಲಯದಲ್ಲಿ ಅರ್ಚಕನ ಕೊಲೆ; ಕಳ್ಳತನದ ದೂರು ನೀಡಿದ್ದರೂ ತಲೆಕೆಡಿಸಿಕೊಳ್ಳದ ಪೊಲೀಸರು
ಕೊಲೆ
Follow us
|

Updated on: Oct 01, 2024 | 7:58 PM

ನವದೆಹಲಿ: 75 ವರ್ಷದ ಅರ್ಚಕ ಸೀತಾರಾಮ್ ಎಂಬುವವರ ಶವ ಸೋಮವಾರ ಭದೋಹಿಯ ಸುರಿಯಾವದಲ್ಲಿರುವ ಪುರಾತನ ಹನುಮಾನ್ ದೇವಾಲಯದ ಆವರಣದಲ್ಲಿ ಪತ್ತೆಯಾಗಿದೆ. ಕತ್ತು ಸೀಳಿ ದೇವಸ್ಥಾನದ ಆವರಣದಲ್ಲೇ ಅವರನ್ನು ಕೊಲೆ ಮಾಡಲಾಗಿದೆ. ದೇವಸ್ಥಾನದಲ್ಲಿ ಕಳ್ಳತನ ಹಾಗೂ ಹಲವು ಜನರು ಗುಂಪು ಸೇರುತ್ತಿರುವ ಬಗ್ಗೆ ಅರ್ಚಕ ಪೊಲೀಸರಿಗೆ ಹಲವು ಬಾರಿ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ದೇವಸ್ಥಾನದಲ್ಲಿದ್ದ ಹಲವು ಕಾಣಿಕೆ ಡಬ್ಬಗಳೂ ನಾಪತ್ತೆಯಾಗಿದ್ದವು.

ಅರ್ಚಕರ ದೂರಿನ ಮೇರೆಗೆ ಕ್ರಮ ಕೈಗೊಳ್ಳಲು ವಿಫಲರಾದ ಸೂರ್ಯಾವದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸೇರಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಇದೀಗ ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಪೊಲೀಸ್ ತನಿಖೆ ಆರಂಭಿಸಲಾಗಿದೆ. ದೇವಸ್ಥಾನದ ಬಳಿ ದರೋಡೆ ಮತ್ತು ಸಮಾಜ ವಿರೋಧಿ ಗುಂಪುಗಳ ಬಗ್ಗೆ ಪೊಲೀಸರಿಗೆ ಈ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ, ಅವುಗಳನ್ನು ತಡೆಯಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಅರ್ಚಕನನ್ನೇ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ, ಒಂದು ವರ್ಷದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು

ಈ ಪ್ರಕರಣವನ್ನು ನಿಭಾಯಿಸಲು 5 ತಂಡಗಳನ್ನು ರಚಿಸಲಾಗಿದೆ ಎಂದು ಭದೋಹಿಯ ಪೊಲೀಸ್ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್ ಹೇಳಿದ್ದಾರೆ. ಫೋರೆನ್ಸಿಕ್ ತಜ್ಞರು ಅಪರಾಧದ ಸ್ಥಳವನ್ನು ಪರಿಶೀಲಿಸಿದರು. ಅರ್ಚಕನನ್ನು ಕೊಲೆ ಮಾಡಿ ಬಿಸಾಡಲಾಗಿತ್ತು. ಅಪರಾಧ ಎಸಗಿದವರನ್ನು ಗುರುತಿಸಿ ಬಂಧಿಸಲು ತನಿಖೆ ನಡೆಯುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ