ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪಾಪಿಗಳು ಅರೆಸ್ಟ್
ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ.
ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹನುಮಂತನಗರ ಪೊಲೀಸರಿಂದ ಐವರು ಆರೋಪಿಗಳ ಬಂಧನವಾಗಿದೆ.
ಅಭಿ, ವೆಂಕಿ, ಲೇಖನ್, ಚೇತನ್ ಮತ್ತು ರಕ್ಷತ್ ಬಂಧಿತ ಆರೋಪಿಗಳು. ಇನ್ಸ್ಟಾಗ್ರಾಂನಲ್ಲಿ ಬಾಲಕಿಯನ್ನು ಪರಿಚಯ ಮಾಡಿಕೊಂಡ ಆರೋಪಿಗಳು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದೆ.
ಜನವರಿ 17ರಂದು ಈ ಕಿರಾತಕರು ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದರು. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ಬಾಬು ಎಂಬುವವನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
Published On - 10:14 pm, Thu, 21 January 21