AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ

ನೀರಿಗೆ ಹಾರಿ ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ನಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಬಗ್ಗೆ ವಿಡಿಯೋ ಮಾಡಿ, ಉಪನ್ಯಾಸಕಿ ಸಾಲು ಸಾಲು ಆರೋಪಗಳನ್ನ ಮಾಡಿದ್ದಾರೆ. ತನಗೆ ಪತಿ ಮನೆಯಲ್ಲಿ ನೀಡಲಾಗಿದ್ದ ಮಾನಸಿಕ ಮತ್ತು ದೈಹಿಕ ಹಿಂಸೆಯ ಬಗ್ಗೆ ಇಂಚಿಂಚಾಗಿ ವಿವರಿಸಿದ್ದಾರೆ.

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ
ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ
ನವೀನ್ ಕುಮಾರ್ ಟಿ
| Edited By: |

Updated on:Oct 20, 2025 | 1:59 PM

Share

ದೇವನಹಳ್ಳಿ, ಅಕ್ಟೋಬರ್​ 20: ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ವಿಶ್ವೇಶ್ವರಯ್ಯ ಪಿಕಪ್ ಡ್ಯಾಮ್​ನಲ್ಲಿ ನಡೆದಿದೆ. ಪುಷ್ಪಾವತಿ (30) ಮೃತರಾಗಿದ್ದು, 11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು. ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಕೇಸ್​ ದಾಖಲಿಸಿದ್ದರು.

ಪುಷ್ಪಾವತಿ ಆರೋಪವೇನು?

ನಾನು ಮದುವೆಯಾಗಿ ಗಂಡನ ಮನೆಗೆ ಹೋದ ದಿನದಿಂದ ನನ್ನ ಗಂಡ ನನ್ನ ಜೊತೆ ಸರಿಯಾಗಿ ಸಂಸಾರ ಮಾಡದೆ, ನನ್ನಿಂದ ದೂರ ಉಳಿಯುತ್ತಿದ್ದರು. ಸಂಸಾರ ಮಾಡಬೇಕೆಂದು ಎಷ್ಟು ಪ್ರಯತ್ನ ಪಟ್ಟರು ಗಂಡ ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಈ ವಿಚಾರವನ್ನು ನಮ್ಮ ಅತ್ತೆ ಮಾವನಿಗೆ ತಿಳಿಸಿದರೆ ಎಲ್ಲಾ ಸರಿ ಹೋಗುತ್ತೆ ಸುಮ್ಮನಿರು ಎಂದು ಆರಂಭದಲ್ಲಿ ಹೇಳುತ್ತಿದ್ದರು. ಗಂಡನಿಗೆ ನಾವು ಮಗು ಮಾಡಿಕೊಳ್ಳೋಣ ಎಂದು ಕೇಳಿದರೆ, ಈಗ ಮಗು ಬೇಡ 1-2 ವರ್ಷ ಹೋಗಲಿ ನಂತರ ಮಗು ಮಾಡಿಕೊಳ್ಳೋಣ. ಈವಾಗ ಯಾಕೆ ಅರ್ಜೆಂಟ್ ಎಂದು ನನಗೆ ಬೈಯುತ್ತಿದ್ದರು. ನನಗೆ ಅನುಮಾನ ಬಂದು, ನಿನಗೇನಾದರೂ ತೊಂದರೆ ಇದ್ದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಳ್ಳೋಣ ಎಂದು ಗಂಡನಿಗೆ ತಿಳಿಸಿದ್ದೆ. ಆಗ ನನಗೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಅವರನ್ನು ಮುಟ್ಟಿದರೆ ಕಾಲಿನಿಂದ ನನ್ನ ಎದೆಗೆಲ್ಲ ಒದೆಯುತ್ತಿದ್ದರು. ಮಗು ಬೇಕು ಎಂದರೆ ನನ್ನ ಚಿಕ್ಕ ಮಗನ ಬಳಿ ಹೋಗು ಎಂದು ಅತ್ತೆ-ಮಾವ ಹೇಳುತ್ತಿದ್ದರು. ಮೈದುನನೂ ಅದೇ ರೀತಿ ಮಾತಾಡಿ ಮಾನಸಿಕ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ನನ್ನ ಹೆತ್ತವರಿಗೆ ತಿಳಿಸಿದ್ದು, ಅವರು ಬಂದು ಹೇಳಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

ಇದನ್ನೂ ಓದಿ: ವಿವಾಹೇತರ ಸಂಬಂಧ, ಗಂಡನ ಬಿಟ್ಟು ಬಾರದಿದ್ದಕ್ಕೆ ಗರ್ಭಿಣಿಯನ್ನು ಕೊಂದ ಪ್ರಿಯಕರ

15 ದಿನಗಳ ಹಿಂದೆ ಗಂಡನ ಮನೆಯವರು ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಈ ವೇಳೆ ನನ್ನನ್ನು ಎಳೆದಾಡಿದ ಪರಿಣಾಮ ಗಾಯವಾಗಿದ್ದು, ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿರುತ್ತಾರೆ. ನೀನು ಕಂಪ್ಲೇಂಟ್​ ಕೊಟ್ಟರೆ ಮತ್ತೆ ಮನೆಗೆ ಬರಲು ಸಾಧ್ಯವಿಲ್ಲ ಎಂದು ಮಾವ ಹೆದರಿಸಿದ್ದರು. ಮತ್ತೆ ಇದೇ ವಿಚಾರವಾಗಿ ಮನೆಯಲ್ಲಿ ಗಲಾಟೆ ಆಗಿದ್ದು, ಈ ವೇಳೆ ನಾನು ಪೊಲೀಸರಿಗೆ ದೂರು ಕೊಡೋದಾಗಿ ಹೇಳಿದ್ದೆ. ಆಗ ನನ್ನ ಕತ್ತು ಹಿಸುಕಿ ಮನೆಯಿಂದ ಆಚೆ ಹಾಕಿದ್ದಾರೆ. ಇದನ್ನು ಪ್ರಶ್ನಿಸಲು ನನ್ನ ತಮ್ಮ ಹೋದಾಗ ಆತನ ಮೇಲೆಯೂ ಹಲ್ಲೆ ಮಾಡಿದ್ದು, ಆತ ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದ ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:57 pm, Mon, 20 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ