ಬೆಂಗಳೂರು: ರಜೆ ತೆಗೆದುಕೊಂಡಿದ್ದಕ್ಕೆ ಕಿರುಕುಳ, KDDL ಕಂಪನಿ ಮ್ಯಾನೇಜರ್ ವಿರುದ್ಧ ಡೆತ್​ನೋಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ

ರಜೆ ತಗೊಂಡಿದ್ದಕ್ಕೆ ಕಿರುಕುಳ, ಕೆಲಸದಿಂದ ತಗೆಯುವ ಬೆದರಿಕೆ ಹಾಕುತ್ತಿದ್ದಾರೆ ಎಂದು KDDL ವಾಚ್ ತಯಾರಿಕ ಕಂಪನಿಯ ವಿರುದ್ಧ ಡೆತ್​ನೋಟ್ ಬರೆದಿಟ್ಟು ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಮೊಬೈಲ್ ವಾಯ್ಸ್ ರೆಕಾರ್ಡಿಂಗ್, ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು: ರಜೆ ತೆಗೆದುಕೊಂಡಿದ್ದಕ್ಕೆ ಕಿರುಕುಳ, KDDL ಕಂಪನಿ ಮ್ಯಾನೇಜರ್ ವಿರುದ್ಧ ಡೆತ್​ನೋಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ ಗೋವಿಂದ ಹಾಗೂ ಆರೋಪಿಗಳಾದ ಕಂಪನಿ ಮ್ಯಾನೇಜರ್ ಗುರುರಾಜ, ಸೂಪರ್ವೈಜರ್ ನಂಜಪ್ಪ
Follow us
| Updated By: Rakesh Nayak Manchi

Updated on:Dec 15, 2023 | 7:59 AM

ನೆಲಮಂಗಲ, ಡಿ.15: KDDL ವಾಚ್ ತಯಾರಿಕ ಕಂಪನಿಯ ಮ್ಯಾನೇಜರ್, ಸೂಪರ್ವೈಜರ್ ಕಿರುಕುಳದಿಂದ ಬೇಸತ್ತ ಕಾರ್ಮಿಕರೊಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಬೆಂಗಳೂರು (Bengaluru) ನಗರದ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ರಜೆ ತೆಗೆದುಕೊಂಡಿದ್ದಕ್ಕೆ ಕಿರುಕುಳ, ಕೆಲಸದಿಂದ ತಗೆಯುವ ಬೆದರಿಕೆ ಹಾಕಿದ್ದಾಗಿ ಮೊಬೈಲ್ ವಾಯ್ಸ್ ರೆಕಾರ್ಡಿಂಗ್, ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಳ್ಳಲಾಗಿದೆ.

ದಾಸರಹಳ್ಳಿಯಲ್ಲಿ ನೆಲೆಸಿರುವ ಅಂಧ್ರಪ್ರದೇಶದ ಗುಡಿಬಂಡೆ ನಿವಾಸಿ ಗೋವಿಂದ (24) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಕಳೆದ ಆರು ವರ್ಷಗಳಿಂದ ಪೀಣ್ಯಾ KDDL ವಾಚ್ ತಯಾರಿಕ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೋವಿಂದ ಅವರು ರಾತ್ರಿ RMP ಅಪಾರ್ಟ್ಮೆಂಟ್​ನಲ್ಲಿ ಮೇಂಟೆನೆಂಸ್ ಕೆಲಸ ಮಾಡಿಕೊಂಡು ತಂಗಿದ್ದರು.

ಆದರೆ, ರಜೆ ತೆಗೆದುಕೊಂಡಿದ್ದಕ್ಕೆ ಪೀಣ್ಯ ಬಳಿ ಇರುವ KDDL ಕಂಪನಿಯ ಮ್ಯಾನೇಜರ್ ಹಾಗೂ ಸೂಪರ್ವೈಜರ್ ಕಿರುಕುಳ ನೀಡುತ್ತಿದ್ದಾರೆ, ಕೆಲಸದಿಂದ ತೆಗೆದು ಹಾಕುವ ಬೆದರಿಕೆ ಹಾಕುತ್ತಿದ್ದಾರೆ ಎಂದು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ ಡೆತ್ ನೋಟ್ ಬರೆದಿಟ್ಟು ಗೋವಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಉಡುಪಿ: ದತ್ತು ಮಗಳು ನಾಪತ್ತೆ, ಮನನೊಂದ ರಂಗಭೂಮಿ ಕಲಾವಿದ ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆಗೆ ಶರಣು

ಎಂದಿನಂತೆ ಕಂಪನಿ ಕೆಲಸ ಮುಗಿಸಿ ರಾತ್ರಿ ವೇಳೆ ಅಪಾರ್ಟ್ಮೆಂಟ್ ಸ್ಟೇರ್ ಕೇಸ್ ಮೆಟ್ಟಿಲಿನ ಕಂಬಿಗೆ ತಾಯಿಯ ಸೀರೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬಾಗಲಗುಂಟೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಮ್ಯಾನೇಜರ್ ಗುರುರಾಜ, ಸೂಪರ್ವೈಜರ್ ನಂಜಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821, ಆರೋಗ್ಯ ವಾಣಿ: 104, ಸಹಾಯ್ ಸಹಾಯವಾಣಿ: 080-25497777

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 am, Fri, 15 December 23

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ