ಹರಿಹರ: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ; ಗಾಯಾಳು ಗಂಭೀರ
ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಯುವಕನಿಗೆ ಚಾಕು ಇರಿದಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳು ಇರ್ಫಾನ್ಗೆ ಚಿಕಿತ್ಸೆ ನೀಡಲಾಗುತ್ತಿದೆ.
ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದ ಸಾಯಿ ಬೇಕರಿ ಬಳಿ ಕ್ಷುಲ್ಲಕ ಕಾರಣಕ್ಕೆ ಯುವಕರಿಬ್ಬರ ನಡುವೆ ಜಗಳವಾಗಿದ್ದು, ಅಭಿಷೇಕ್ ಎಂಬುವನಿಂದ ಮಹಮ್ಮದ್ ಇರ್ಫಾನ್(24) ಗೆ ಚಾಕು ಇರಿತ. ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳು ಇರ್ಫಾನ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದ ದಾವಣಗೆರೆ ಎಸ್.ಪಿ ಸಿ.ಬಿ.ರಿಷ್ಯಂತ್.
ಹರಿಹರ ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪೊಲೀಸ್ ಬಿಗಿ ಭದ್ರತೆ, ಸಾರ್ವಜನಿಕರಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಎಸ್.ಪಿ ಅವರು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಎಚ್ಚರಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಮುಂದುವರಿದ ಕಾಡು ಪ್ರಾಣಿ ಮಾನವ ಸಂಘರ್ಷ
ಮೈಸೂರು: ಹುಣಸೂರು ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಕಾಡಿನಿಂದ ನಾಡಿಗೆ ಬಂದ ಆನೆಗಳು. ರೈತರು ಬೆಳೆದ ಅಪಾರ ಪ್ರಮಾಣದ ಬಾಳೆ ಬೆಳೆ ನಾಶ ಮಾಡಿದ್ದಾವೆ. ಪದೇ ಪದೇ ಕಾಡಿನಿಂದ ನಾಡಿಗೆ ಬರುತ್ತಿರುವ ಆನೆಗಳಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದ್ದು, ರೈತರು ಹೃರಾಣಾಗಿದ್ದಾರೆ. ಇದರಿಂದ ನೊಂದ ರೈತರು ಕಾಡು ಪ್ರಾಣಿಗಳು ನಾಡಿಗೆ ಬಾರದಂತೆ ಶಾಶ್ವತ ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:22 am, Tue, 6 December 22