AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಾಲುಗಳ ಮುರಿದು ಕೊಂದ ದುಷ್ಟ

ವ್ಯಕ್ತಿಯೊಬ್ಬ ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಹರ್ಯಾಣದಲ್ಲಿ ನಡೆದಿದೆ. ನೂಹ್ ಜಿಲ್ಲೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕಾಲುಗಳನ್ನು ಮುರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

3 ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೆ ಕಾಲುಗಳ ಮುರಿದು ಕೊಂದ ದುಷ್ಟ
ಮಗುImage Credit source: unsplash
ನಯನಾ ರಾಜೀವ್
|

Updated on: Dec 02, 2024 | 1:56 PM

Share

ವ್ಯಕ್ತಿಯೊಬ್ಬ ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಹರ್ಯಾಣದಲ್ಲಿ ನಡೆದಿದೆ. ನೂಹ್ ಜಿಲ್ಲೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕಾಲುಗಳನ್ನು ಮುರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಾಲಕಿ ಆಟವಾಡುತ್ತಿದ್ದಾಗ ಸುಮಾರು ಸಂಜೆ 4 ಗಂಟೆ ಸುಮಾರಿಗೆ ಆಕೆಯನ್ನು ಅಪಹರಿಸಿದ್ದಾರೆ. ಬಾಲಕಿ ಎಷ್ಟೊತ್ತಾದರೂ ಅಲ್ಲೆಲ್ಲೂ ಕಾಣಿಸದ ಕಾರಣ ಮನೆಯವರು ಹುಡುಕಾಡಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಆಕೆಯ ರಕ್ತಸಿಕ್ತ ದೇಹ ಪತ್ತೆಯಾಗಿದೆ. ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಿದ ನಂತರ, ಪಿನಾಂಗ್ವಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಮಗುವಿನ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅತ್ಯಾಚಾರವೆಸಗಿದ ಮೇಲೆ ಆರೋಪಿ ಆಕೆಯ ಕೈಕಾಲು ಮುರಿದು ಶವವನ್ನು ಎಸೆದಿದ್ದಾನೆ. ಪ್ರಾಥಮಿಕ ತನಿಖೆಯಿಂದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಧ್ಯಪ್ರದೇಶ: ಮಹಿಳೆ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ, 2 ದಿನಗಳಲ್ಲಿ ನಾಲ್ಕನೇ ಘಟನೆ

ನಾಲ್ಕು ತಂಡಗಳನ್ನು ರಚಿಸಿ ಆರೋಪಿಯನ್ನು ಮರೋರ ಗ್ರಾಮದ ಬಳಿ ಬಂಧಿಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪಿನಂಗ್ವಾ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಸುಭಾಷ್ ಚಂದ್ ತಿಳಿಸಿದ್ದಾರೆ.

ಮತ್ತೊಂದು ಪ್ರಕರಣ 6 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ ಕ್ತಿಯೊಬ್ಬ ತನ್ನ ಆರು ವರ್ಷದ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ನವೆಂಬರ್ 22 ರಂದು ಪೊಲೀಸ್ ದೂರಿನಲ್ಲಿ ಆರೋಪಿಯ ಪತ್ನಿ ಬುಲಂದ್‌ಶಹರ್‌ನಲ್ಲಿರುವ ಸಂಬಂಧಿಕರ ಸ್ಥಳದಿಂದ ಮನೆಗೆ ಹಿಂದಿರುಗಿದಾಗ ರೂಮಿನಿಂದ ಮಗಳ ಅಳಲು ಕೇಳಿದೆ ಎಂದು ಹೇಳಿದ್ದಾರೆ. ಅದೇ ಪರಿಸ್ಥಿತಿ ಹಲವು ಬಾರಿ ಸಂಭವಿಸಿದೆ ಎಂದು ಮಗಳು ಹೇಳಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ