ವ್ಯಕ್ತಿಯೊಬ್ಬ ಮನೆಯ ಹೊರಗೆ ಆಟವಾಡುತ್ತಿದ್ದ 3 ವರ್ಷದ ಕಂದಮ್ಮನನ್ನು ಎಳೆದೊಯ್ದು ಅತ್ಯಾಚಾರವೆಸಗಿರುವ ಹೃದಯ ವಿದ್ರಾವಕ ಘಟನೆ ಹರ್ಯಾಣದಲ್ಲಿ ನಡೆದಿದೆ. ನೂಹ್ ಜಿಲ್ಲೆಯಲ್ಲಿ ಮಗುವಿನ ಮೇಲೆ ಅತ್ಯಾಚಾರವೆಸಗಿ, ಕಾಲುಗಳನ್ನು ಮುರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಾಲಕಿ ಆಟವಾಡುತ್ತಿದ್ದಾಗ ಸುಮಾರು ಸಂಜೆ 4 ಗಂಟೆ ಸುಮಾರಿಗೆ ಆಕೆಯನ್ನು ಅಪಹರಿಸಿದ್ದಾರೆ. ಬಾಲಕಿ ಎಷ್ಟೊತ್ತಾದರೂ ಅಲ್ಲೆಲ್ಲೂ ಕಾಣಿಸದ ಕಾರಣ ಮನೆಯವರು ಹುಡುಕಾಡಿದ್ದಾರೆ. ರಾತ್ರಿ 11 ಗಂಟೆ ಸುಮಾರಿಗೆ ಆಕೆಯ ರಕ್ತಸಿಕ್ತ ದೇಹ ಪತ್ತೆಯಾಗಿದೆ.
ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಿದ ನಂತರ, ಪಿನಾಂಗ್ವಾ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮಗುವಿನ ಮೇಲೆ ಮೊದಲು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಅತ್ಯಾಚಾರವೆಸಗಿದ ಮೇಲೆ ಆರೋಪಿ ಆಕೆಯ ಕೈಕಾಲು ಮುರಿದು ಶವವನ್ನು ಎಸೆದಿದ್ದಾನೆ. ಪ್ರಾಥಮಿಕ ತನಿಖೆಯಿಂದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಮಧ್ಯಪ್ರದೇಶ: ಮಹಿಳೆ ಮೇಲೆ 6 ಜನರಿಂದ ಸಾಮೂಹಿಕ ಅತ್ಯಾಚಾರ, 2 ದಿನಗಳಲ್ಲಿ ನಾಲ್ಕನೇ ಘಟನೆ
ನಾಲ್ಕು ತಂಡಗಳನ್ನು ರಚಿಸಿ ಆರೋಪಿಯನ್ನು ಮರೋರ ಗ್ರಾಮದ ಬಳಿ ಬಂಧಿಸಲಾಗಿದೆ. ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪಿನಂಗ್ವಾ ಎಸ್‌ಎಚ್‌ಒ, ಇನ್‌ಸ್ಪೆಕ್ಟರ್ ಸುಭಾಷ್ ಚಂದ್ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣ
6 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ
ಕ್ತಿಯೊಬ್ಬ ತನ್ನ ಆರು ವರ್ಷದ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
ನವೆಂಬರ್ 22 ರಂದು ಪೊಲೀಸ್ ದೂರಿನಲ್ಲಿ ಆರೋಪಿಯ ಪತ್ನಿ ಬುಲಂದ್‌ಶಹರ್‌ನಲ್ಲಿರುವ ಸಂಬಂಧಿಕರ ಸ್ಥಳದಿಂದ ಮನೆಗೆ ಹಿಂದಿರುಗಿದಾಗ ರೂಮಿನಿಂದ ಮಗಳ ಅಳಲು ಕೇಳಿದೆ ಎಂದು ಹೇಳಿದ್ದಾರೆ. ಅದೇ ಪರಿಸ್ಥಿತಿ ಹಲವು ಬಾರಿ ಸಂಭವಿಸಿದೆ ಎಂದು ಮಗಳು ಹೇಳಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ