ಹಾಸನದಲ್ಲಿ ಪಾರ್ಟಿ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ!

ವ್ಯಕ್ತಿಯೊಬ್ಬನನ್ನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಎಣ್ಣೆ ಪಾರ್ಟಿ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಅಂದಾಜು 40 ವರ್ಷ ಪ್ರಾಯದ ವ್ಯಕ್ತಿಯ ಶವ ಇದಾಗಿದ್ದು, ಪರಿಚಿತರೇ ಜೊತೆಯಲ್ಲಿ ಕರೆತಂದು ಎಣ್ಣೆ ಪಾರ್ಟಿ ಮಾಡಿ ಬಳಿಕ ಹತ್ಯೆಮಾಡಿರುವ ಶಂಕೆ ವ್ಯಕ್ತವಾಗಿದೆ.ಈ ಕುರಿತು ಕೇಸ್​ ದಾಖಲಿಸಿಕೊಂಡಿರುವ ಪೊಲೀಸರು, ಮೃತ ವ್ಯಕ್ತಿಯ ಗುರುತು ಪತ್ತೆಯ ಜೊತೆಗೆ ಹಂತಕರಿಗಾಗಿ ಬಲೆ ಬೀಸಿದ್ದಾರೆ.

ಹಾಸನದಲ್ಲಿ ಪಾರ್ಟಿ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ!
ಹಾಸನದಲ್ಲಿ ಅಪರಿಚಿತ ವ್ಯಕ್ತಿಯ ಕೊಲೆ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 02, 2024 | 4:58 PM

ಹಾಸನ, ಫೆ.02: ಹಾಸನ ಹೊರವಲಯದ ಬುಸ್ತೇನಹಳ್ಳಿ ಗ್ರಾಮದ ನಿರ್ಜನ ಪ್ರದೇಶವಾದ ಹಾಸನ-ಬೆಂಗಳೂರು (Hassan-Bengaluru) ರೈಲ್ವೆ ಟ್ರ್ಯಾಕ್ ಬಳಿ ಅಂದಾಜು 40 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೇಲ್ನೋಟಕ್ಕೆ ಮೃತ ವ್ಯಕ್ತಿ ಕೂಲಿ ಕಾರ್ಮಿಕ ಅಥವಾ ಕುರಿಗಾಹಿ ಎಂದು ಶಂಕಿಸಲಾಗಿದ್ದು, ಎರಡು ದಿನಗಳ ಹಿಂದೆ ಆತನನ್ನು ರಾತ್ರಿ ವೇಳೆಯಲ್ಲಿ ಜೊತೆಗೆ ಕರೆತಂದಿರುವ ಹಂತಕರು, ಮೃತದೇಹ ಪತ್ತೆಯಾಗಿರುವ ಸ್ಥಳದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಹುಶಃ ಮೃತ ವ್ಯಕ್ತಿಗೆ ಕಂಠಪೂರ್ತಿ ಕುಡಿಸಿ ಅಮಲಿನಲ್ಲಿದ್ದವನ ಮೇಲೆ ಬಾಟಲ್​ನಿಂದ ಹಲ್ಲೆ ಮಾಡಿ, ಬಳಿಕ ತಲೆಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ಎರಡು ದಿನಗಳ ಬಳಿಕ ಶವ ಪತ್ತೆ

ಎರಡು ದಿನಗಳ ಬಳಿಕ ಅಂದರೆ ಇಂದು ಸ್ಥಳೀಯರು ಜಮೀನಿನ ಬಳಿ ಬಂದಾಗ ಮೃತದೇಹ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಬಂದ ಹಾಸನ ಬಡಾವಣೆ ಠಾಣೆ ಪೊಲೀಸರು ಪರೀಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಿದ್ದಾರೆ. ಜೊತೆಗೆ ಬಂದವರು ಕುಡಿದ ಅಮಲಿನಲ್ಲಿ ಜಗಳ ಮಾಡಿಕೊಂಡು ಬಳಿಕ ಹತ್ಯೆ ನಡೆದಿರಬಹುದು ಅಥವಾ ಕೊಲೆಮಾಡಲೆಂದೇ ಕರೆತಂದು ಕಂಠಪೂರ್ತಿ ಕುಡಿಸಿ ಬಳಿಕ ಹತ್ಯೆ ಮಾಡಿರಬಹುದು. ಹೀಗೆ ಹಲವು ಅನುಮಾನಗಳ ಬೆನ್ನೇರಿ ಪೊಲೀಸರು ತನಿಖೆ ಕೈಗೊಂಡಿದ್ದು, ಮೊದಲು ಕೊಲೆಯಾದ ವ್ಯಕ್ತಿ ಯಾರು ಎನ್ನುವ ಗುರುತಿಗಾಗಿ ಪತ್ತೆಗಿಳಿದಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ಕಾಂಗ್ರೆಸ್​ ಕಚೇರಿ ಮುಂದೆ ಯುವಕನ ಬರ್ಬರ ಕೊಲೆ; ತಲೆ ಮೇಲೆ ಕಲ್ಲು ಎತ್ತಿಹಾಕಿ‌, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಹಂತಕರು

ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತೆ ಬಡಾವಣೆಯೊಂದು ಸಿದ್ದಗೊಂಡಿದ್ದು, ರಾತ್ರಿಯಾದರೆ ನಿರ್ಜನ ಪ್ರದೇಶವಾಗುವ ಈ ಸ್ಥಳದಲ್ಲಿ ಪುಂಡರ ಅಟ್ಟಹಾಸ ಇರುತ್ತದೆ. ಕತ್ತಲಾಗುತ್ತಲೆ ಹತ್ತಾರು ಜನರು ಮದ್ಯದ ಬಾಟಲ್​ನೊಂದಿಗೆ ಇಲ್ಲಿಗೆ ಬರುತ್ತಾರೆ. ಹೇಳಿ ಕೇಳಿ ರೈಲ್ವೆ ಹಳಿಗಳ ಪ್ರದೇಶ, ಯಾರೂ ಈ ಕಡೆ ಬರುವುದಿಲ್ಲ ಎಂದು ಕುಡುಕರು, ಗಾಂಜಾ ಹೊಡೆಯೋರು ಎಲ್ಲರೂ ಇತ್ತಕಡೆ ಬರುತ್ತಾರೆ. ಹಾಗಾಗಿಯೇ ಈ ಕೊಲೆ ನಡೆದಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಹೀಗೆ ಆದ್ರೆ, ಹೊಲ ಗದ್ದೆಗಳ ಬಳಿಗೆ ಸ್ಥಳೀಯರು ಬರೋದು ಹೇಗೆ ಎಂಬ ಪ್ರಶ್ನೆ ಸ್ಥಳೀಯರು ಮಾಡಿದ್ದಾರೆ.

ಸದ್ಯ ನಡೆದಿರುವ ಕೊಲೆ ಪ್ರಕರಣವನ್ನು ಪೊಲೀಸರು ಆದಷ್ಟು ಬೇಗನೆ ಪತ್ತೆ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಮೃತ ವ್ಯಕ್ತಿಯ ಬಲಗೈ ಮೇಲೆ ಲಕ್ಷ್ಮಿ ಎಂಬ ಹೆಸರಿನ ಹಚ್ಚೆ ಇದ್ದು, ಘಟನಾ ಸ್ಥಳದಲ್ಲಿ ಎಣ್ಣೆ ಸೇವಿಸಿದ ಪ್ಲಾಸ್ಟಿಕ್ ಗ್ಲಾಸ್ ಗಳು, ಒಡೆದು ಹೋದ ಬಿಯರ್ ಬಾಟಲ್ ಪತ್ತೆಯಾಗಿದ್ದು, ಸ್ಥಳದಲ್ಲಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಕೊಲೆ ನಡೆದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಒಟ್ಟಿನಲ್ಲಿ ಮೃತ ವ್ಯಕ್ತಿಯ ಜೊತೆಗೆ ಬಂದ ಪರಿಚಿತರೇ ಯಾರೋ ಕೊಲೆ ಮಾಡಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದರೂ ಕೂಡ ಸ್ಥಳೀಯನಲ್ಲದ ವ್ಯಕ್ತಿಯನ್ನ ಇಲ್ಲಿಗೆ ಕರೆತಂದು ಹತ್ಯೆಮಾಡಿದ್ದಾರಾ, ಅಥವಾ ಎಣ್ಣೆ ಪಾರ್ಟಿ ವೇಳೆ ನಡೆದ ಕಲಹದಲ್ಲಿ ನಡೆದ ಗಲಾಟೆಯಲ್ಲಿ ಕೊಲೆ ನಡೆದು ಹೋಯ್ತಾ? ಹೀಗೆ ಹಲವು ಅನುಮಾನಗಳು ಎದುರಾಗಿದ್ದು ಆರೋಪಿಗಳ ಬಂಧನದ ಬಳಿಕ ಸತ್ಯ ತಿಳಿಯಲಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕಿಕ್ಲ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ