ಹಾಸನ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 19, 2024 | 2:57 PM

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

ಹಾಸನ: ಬೈಕ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ: ಮದುವೆ ಮುಗಿಸಿ ವಾಪಸಾಗುತ್ತಿದ್ದ ದಂಪತಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಹಾಸನ, ಫೆಬ್ರವರಿ 19: ಕಾರು ಡಿಕ್ಕಿ (collided) ಹೊಡೆದ ಪರಿಣಾಮ ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ. ಚಂದ್ರೇಗೌಡ(52), ಹೇಮಲತಾ (45) ಮೃತ ದಂಪತಿ. ಉದಯಪುರ ಗ್ರಾಮದಲ್ಲಿ ಮದುವೆ ಮುಗಿಸಿ ಬೈಕ್‌ನಲ್ಲಿ ಚನ್ನರಾಯಪಟ್ಟಣಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ತಿರುವಿನಲ್ಲಿ ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಿನಿ ಬಸ್ ಪಲ್ಟಿ: ಹದಿನೈದು ಮಂದಿಗೆ ಗಾಯ

ಆನೇಕಲ್​: ಮಿನಿ ಬಸ್ ಪಲ್ಟಿಯಾಗಿದ್ದು, ಹದಿನೈದು ಮಂದಿಗೆ ಗಾಯಗಳಾಗಿರುವಂತಹ ಘಟನೆ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಕೃಷ್ಣಗಿರಿ ಚಿನ್ನಾರ್ ಬಳಿ ನಡೆದಿದೆ. ಶ್ರೀಮಂತ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಆಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ರಸ್ತೆಗೆ ಪೈಂಟ್ ಕೆಲಸ ಮಾಡಲಾಗುತ್ತಿತ್ತು. ಇದನ್ನು ಗಮನಿಸದೆ ಅತಿವೇಗವಾಗಿ ಬಂದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್​​​ಗೆ ಬಿದ್ದಿದೆ.

ಇದನ್ನೂ ಓದಿ: ಮೈಸೂರು: ಮೊದಲ ಹೆಂಡತಿ ಮಕ್ಕಳ ಜೊತೆ ಸೇರಿ ಎರಡನೇ ಪತ್ನಿಯ ಹತ್ಯೆ ಮಾಡಿದ ಪತಿ, ಆಸ್ತಿಗಾಗಿ ಕೃತ್ಯ

ಮಿನಿ ಬಸ್​ನಲ್ಲಿದ್ದ ಹನ್ನೆರಡು ಮಂದಿ ಸೇರಿದಂತೆ ಹೆದ್ದಾರಿ ಕೆಲಸ ಮಾಡುತ್ತಿದ್ದ ಮೂವರಿಗೆ ಗಾಯಗಳಾಗಿದ್ದು, ಅಪಘಾತದಲ್ಲಿ ಒಟ್ಟು ಹದಿನೈದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಕೂಡಲೇ ಕೃಷ್ಣಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಫಘಾತ: ಚಾಲಕ ಸಾವು

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಫಘಾತವಾಗಿದ್ದು ಕಾರುಗಳ ನಡುವೆ ಅಪಘಾತ ಏರ್ಪಟ್ಟು ಸ್ಥಳದಲ್ಲೇ ಕಾರಿನ ಚಾಲಕ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾದ ಗಾಯವಾಗಿರುವ ಘಟನೆ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ ಎಂ ಹೊಸೂರು ಗ್ರಾಮದ ಬಳಿ ನಡೆದಿತ್ತು.

ಇದನ್ನೂ ಓದಿ: Dharmasthala: ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳ್ಳರ ಕೈಚಳಕ, ಒಂದೇ ದಿನ 3 ಬೈಕ್ ಕಳವು

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಕಾರು ಡಿವೈಡರ್ ಹಾರಿ ಮೈಸೂರು ಕಡೆಗೆ ಹೋಗುತ್ತಿದ್ದ ಶಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿತ್ತು. ಇನ್ನು ಗಾಯಾಳುಗಳನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರು-ಬೈಕ್ ಮುಖಾಮುಖಿ ಡಿಕ್ಕಿ: ಗ್ರಾಮ ಪಂಚಾಯಿತಿ ಸದಸ್ಯ ಸಾವು

ಗದಗ: ಕಾರ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ದೇವಿಹಾಳ ಗ್ರಾಮದ ಬಳಿ ಘಟನೆ ನಡೆದಿದೆ. ದೇವಿಹಾಳ ಗ್ರಾಮ ಪಂಚಾಯತ ಸದಸ್ಯ ಯಲ್ಲಪ್ಪ (48) ಮೃತ ವ್ಯಕ್ತಿ.

ಬಸವೆಣ್ಣೆಪ್ಪ 50 ಗಂಭೀರ ಗಾಯ ಹುಬ್ಬಳ್ಳಿ ಕಿಮ್ಸ್​ಗೆ ದಾಖಲು ಮಾಡಲಾಗಿದೆ. ಅಪಘಾತದ ಬಳಿಕ ಕಾರು ಚಲಾಯಿಸುತ್ತಿದ್ದ ಮಹಿಳೆ ಪರಾರಿ ಆಗಿದ್ದಾರೆ. ಶಿರಹಟ್ಟಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.