Sign In

By signing in or creating an account, you agree with Associated Broadcasting Company's Terms & Conditions and Privacy Policy.

Hassan: ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಾಂಶುಪಾಲ ಸೇರಿ ಐವರ ವಿರುದ್ಧ ಪೋಕ್ಸೋ ಅಡಿ ದೂರು ದಾಖಲು

ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ಶಾಲಾ ಪ್ರಾಂಶುಪಾಲ, ಇಬ್ಬರು ಶಿಕ್ಷಕ, ಸೆಕ್ಯೂರಿಟಿಗಾರ್ಡ್‌ ಸೇರಿ ಐವರನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Hassan: ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಾಂಶುಪಾಲ ಸೇರಿ ಐವರ ವಿರುದ್ಧ ಪೋಕ್ಸೋ ಅಡಿ ದೂರು ದಾಖಲು
ಪ್ರಾತಿನಿಧಿಕ ಚಿತ್ರImage Credit source: news18.com
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 09, 2023 | 9:57 PM

ಹಾಸನ: ವಸತಿ ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (sexually assaulting) ಆರೋಪ ಹಿನ್ನೆಲೆ ಶಾಲಾ ಪ್ರಾಂಶುಪಾಲ, ಇಬ್ಬರು ಶಿಕ್ಷಕ, ಸೆಕ್ಯೂರಿಟಿಗಾರ್ಡ್‌ ಸೇರಿ ಐವರನ್ನು ಪೊಲೀಸರು ಬಂಧಿಸಿರುವಂತಹ ಘಟನೆ ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಹಲವು ತಿಂಗಳಿಂದ ಸಮಾಜ ಇಲಾಖೆ ವ್ಯಾಪ್ತಿಯ ಹೆಣ್ಣುಮಕ್ಕಳ ವಸತಿ ಶಾಲೆಯ 8 ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ. ಕಳೆದ 2 ದಿನಗಳ ಹಿಂದೆ ಶಾಲೆಯ ಪ್ರಾಂಶುಪಾಲರ ಬದಲಾವಣೆಗೆ ಒತ್ತಾಯಿಸಿ ವಿದ್ಯಾರ್ಥಿನಿಯರು ಹೋರಾಟ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಹಾಸನ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳು ಭೇಟಿ ನೀಡಿದ್ದು, ಬಾಲಕಿಯರನ್ನು ವಿಚಾರಿಸಿದಾಗ ಮಕ್ಕಳ ಮೇಲಿನ ಕ್ರೌರ್ಯ ಬಯಲಾಗಿದೆ. ಜಾತಿ ದೌರ್ಜನ್ಯ ಮತ್ತು ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

ಫ್ಯಾನ್​ಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ದಾವಣಗೆರೆ: ಫ್ಯಾನ್​ಗೆ ನೇಣು ಬಿಗಿದುಕೊಂಡು ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹರಿಹರ ನಗರದ ಹಾಸ್ಟೆಲ್​ನಲ್ಲಿ ನಡೆದಿದೆ. ವರ್ಷಿತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ಮೂಲತ ದಾವಣಗೆರೆ ತಾಲೂಕಿನ ಮಾಯಕೊಂಡ ಬಳಿಯ ಬಸ್ಸಾಪುರ ಗ್ರಾಮದವರಾದ ವರ್ಷಿತಾ ಹರಿಹರ ನಗರದ ಕಾಲೇಜುವೊಂದರಲ್ಲಿ ಓದುತ್ತಿದ್ದಳು. ಇನ್ನು ವರ್ಷಿತಾ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ಮಗಳ ಸಾವಿಗೆ ಹಾಸ್ಟೆಲ್​​​ ವಾರ್ಡನ್​​, ಸಿಬ್ಬಂದಿಯೇ ಕಾರಣ ಎಂದು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

ಇದನ್ನೂ ಓದಿ: ಬೇಗೂರು ಪೊಲೀಸರಿಂದ ಕುಖ್ಯಾತ ಹನಿಟ್ರ್ಯಾಪ್​ ಗ್ಯಾಂಗ್​​ ಅರೆಸ್ಟ್​​: ಇಬ್ಬರು ಮಹಿಳೆಯರು ಸೇರಿ ನಾಲ್ವರ ಬಂಧನ

ಇನ್ನು ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಆಕೆಯ ಪೋಷಕರು ಒತ್ತಾಯಿಸುತ್ತಿದ್ದಾರೆ. ನನ್ನ ಮಗಳು ಅತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷಿ ವಿಧಿಸಿ ನ್ಯಾಯ ಕೊಡಿಸುವಂತೆ ಮೃತಳ ಪೋಷಕರು ತಮ್ಮ ಅಳಲು ತೊಡಿಕೊಂಡಿದ್ದಾರೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ.

ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ

ಉತ್ತರ ಕನ್ನಡ: ಜಿಲ್ಲೆಯ ಭಟ್ಕಳ ತಾಲೂಕಿನ ಬಿಳಲಖಂಡ ಸಮೀಪದ ಗುಳ್ಮೆ ಗ್ರಾಮದ ಬಳಿ ತೋಟದ ಬಾವಿಗೆ ಬಿದ್ದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿನ್ನೆ(ಮಾ.7) ರಾತ್ರಿ ಮನೆ ಪಕ್ಕದಲ್ಲಿರುವ ತೋಟದ ಬಾವಿಗೆ ಬಿದ್ದು ಪ್ರತಿಭಾ ಮಂಗಳಾ ಗೊಂಡ (19) ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಮೃತ ಯುವತಿ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ಪ್ರಥಮ ವರ್ಷದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದಳು. ವಾರದ ಹಿಂದೆ ಮನೆಗೆ ಬಂದಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಘಟನೆ ಕುರಿತು ‘ಯುವತಿಗೆ ತನ್ನದೆ ಕ್ಲಾಸಿನ ಯುವಕನೊಬ್ಬನ ಪರಿಚಯವಿತ್ತು, ನನ್ನ ಮಗಳ ಸಾವಿಗೆ ಆ ಯುವಕನೇ ಕಾರಣ ಎಂದು ಯುವತಿ ತಂದೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ: ಸ್ನೇಹ, ಸಲುಗೆಯಿಂದ ಇರಲು ನಿರಾಕರಿಸಿದಕ್ಕೆ ಇಂದಿರಾನಗರದಲ್ಲಿ ಮಹಿಳೆಯನ್ನು ಕೊಲೆ ಮಾಡಿದ ಕ್ಯಾಬ್ ಡ್ರೈವರ್ ಅರೆಸ್ಟ್

ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಸ್ನೇಹಿತರಿಂದಲೇ ಅತ್ಯಾಚಾರ​​

ಹುಬ್ಬಳ್ಳಿ: ಮೊಬೈಲ್ ಫೋನ್ ಕೊಡಿಸುವ ಆಮಿಷವೊಡ್ಡಿ ಅಪ್ರಾಪ್ತ ಬಾಲಕಿ ಮೇಲೆ ನಾಲ್ವರು ಪರಿಚಿತ ಸ್ನೇಹಿತರಿಂದಲೇ ಗ್ಯಾಂಗ್​​ರೇಪ್ ನಡೆದಿರುವಂತಹ ಘಟನೆ ಹುಬ್ಬಳಿಯ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಡೆದಿದೆ. ದೇವರಾಜ್, ಪಕ್ಕಿರೇಶ್ ಮತ್ತು ಇಬ್ಬರು ಅಪರಿಚಿತರಿಂದ ಕೃತ್ಯವೆಸಗಲಾಗಿದೆ. ಮೊಬೈಲ್ ಫೋನ್ ಕೊಡಿಸುವ ನೆಪದಲ್ಲಿ ಸ್ನೇಹಿತರು ಬಾಕಿಯನ್ನು ಹುಬ್ಬಳಿಗೆ ಕರೆತಂದಿದ್ದಾರೆ. ಜೀವ ಬೆದರಿಕೆ ಹಾಕಿ ಬಲವಂತವಾಗಿ ಯುವಕರು ಅತ್ಯಾಚಾರವೆಸಗಿದ್ದಾರೆ. ಈ ಕುರಿತು ಹುಬ್ಬಳ್ಳಿ ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಯುವಕರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:51 pm, Thu, 9 March 23

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ