ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು

ಸಿನಿಮೀಯ ರೀತಿಯಲ್ಲಿ ಸ್ನೇಹಿತನನ್ನ ಅಪಹರಿಸಿ ಹಲ್ಲೆ ನಡೆಸಿ ಬಳಿಕ ಸ್ನೇಹಿತರ ಗ್ಯಾಂಗ್​ನಿಂದಲೇ ಹತ್ಯೆಗೈದಿರುವಂತಹ ಭಯಾನಕ ಘಟನೆಯೊಂದು ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ದುಷ್ಟರು ಕೊಲೆ ಮಾಡಿದಲ್ಲದೇ ಶವವನ್ನು ಸುಟ್ಟು ಪರಾರಿಯಾಗಿದ್ದರು. ಸದ್ಯ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಗಾಂಜಾ ಅಮಲು: ಸಿನಿಮೀಯ ರೀತಿಯಲ್ಲಿ ಅಪಹರಿಸಿ ಸ್ನೇಹಿತನನ್ನೇ ಕೊಂದು ಶವ ಸುಟ್ಟ ದುಷ್ಟರು
ಕೊಲೆಯಾದ ಯುವಕ
Image Credit source: tv9 kannada
Edited By:

Updated on: Mar 22, 2026 | 4:17 PM

ಹಾಸನ, ಮಾರ್ಚ್​​ 22: ಗಾಂಜಾ ಅಮಲಿನಲ್ಲಿ ಸ್ನೇಹಿತನನ್ನೇ ಸ್ನೇಹಿತರ ಗ್ಯಾಂಗ್​​ ಕೊಂದು (kill) ಶವ ಸುಟ್ಟು ಹಾಕಿರುವಂತಹ ಘಟನೆ ಹಾಸನ ತಾಲೂಕಿನ ನಿಟ್ಟೂರು ಬಳಿಯ ಹಂಗರಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾಡಯ್ಯನಕೊಪ್ಪಲು ನಿವಾಸಿ ವರುಣ್(22) ಕೊಲೆಯಾದ ಯುವಕ. ಹಣಕಾಸು ವಿಚಾರದಲ್ಲಿ ಕರೆದೊಯ್ದು ಹಲ್ಲೆ ಮಾಡಲಾಗಿದೆ. ಶಶಾಂಕ್, ಸತೀಶ್, ಕಿರಣ್, ಅಭಿ, ಜೀವನ್, ಚೇತನ್, ಪೃಥ್ವಿಕ್​​, ಗಜ ಅಲಿಯಾಸ್ ಪ್ರಜ್ವಲ್ ವಿರುದ್ಧ ಕೊಲೆ ಆರೋಪದಡಿ ಮೊಕದ್ದಮೆ ದಾಖಲಾಗಿದೆ.

ನಡೆದಿದ್ದೇನು?

ಮಾರ್ಚ್ 10ರಿಂದ ವರುಣ್ ಕಾಣೆಯಾಗಿದ್ದಾನೆ. ಹಣಕಾಸು ವಿಚಾರದಲ್ಲಿ ವರುಣ್, ಸ್ನೇಹಿತ ಲೋಹಿತ್​ನನ್ನು ಸ್ನೇಹಿತರ ಗ್ಯಾಂಗ್ ಅಪಹರಿಸಿದೆ. ಹಂಗರಹಳ್ಳಿಯ ತೋಟದ ಮನೆಯಲ್ಲಿ ಇಬ್ಬರನ್ನು ಕೂಡಿಹಾಕಿದೆ. ಹಲ್ಲೆಗೊಳಗಾಗಿದ್ದ ಲೋಹಿತ್ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದಿದ್ದ. ವರುಣ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಂದಿದ್ದಾರೆ. ನಂತರ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಜೇನುಕಲ್ಲು ಸಿದ್ದೇಶ್ವರಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ವರುಣ್ ಶವವನ್ನು ಸಂಪೂರ್ಣ ಸುಟ್ಟು ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನ ಬರ್ಬರ ಕೊಲೆ; ಹತ್ಯೆಯಾದವನ ಮೇಲಿವೆ 10ಕ್ಕೂ ಹೆಚ್ಚು ಕೇಸ್​ಗಳು!

ಇತ್ತ ಮಾರ್ಚ್ 15ರಂದು ಪುತ್ರ ನಾಪತ್ತೆ ಬಗ್ಗೆ ತಾಯಿ ಕಲಾವತಿ ದೂರು ನೀಡಿದ್ದು, ನಾಪತ್ತೆ ಕೇಸ್ ದಾಖಲಿಸಿಕೊಂಡು ಗಂಡಸಿ ಠಾಣೆ ಪೊಲೀಸರು ತನಿಖೆ ಆರಂಭಿಸಿದ್ದರು. ಪೊಲೀಸರ ತನಿಖೆ ವೇಳೆ ವರುಣ್ ಕೊಲೆಯಾಗಿರುವ ವಿಚಾರ ಇದೀಗ ಬಹಿರಂಗವಾಗಿದೆ.

ಇದನ್ನೂ ಓದಿ: ಸಮಾಜ ಕಲ್ಯಾಣ ಜಲಾಖೆ ಸಹಾಯಕ ನಿರ್ದೇಶಕ ಕಚೇರಿಯಲ್ಲೇ ನೇಣಿಗೆ ಶರಣು! ಸಾವಿಗೂ ಮುನ್ನ ಮಾಡಿದ ವೀಡಿಯೋದಲ್ಲೇನಿದೆ ಗೊತ್ತಾ?

ಸಿನಿಮೀಯ ರೀತಿಯಲ್ಲಿ ಅಪಹರಿಸಿ ಹಲ್ಲೆ ನಡೆಸಿ ಹತ್ಯೆಗೈದಿದ್ದ ಸ್ನೇಹಿತರ ವಿರುದ್ಧ ಮಾ.19ರಂದು ಹಾಸನ ತಾಲೂಕಿನ ದುದ್ದ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ವರುಣ್ ಅಪಹರಣ ಮತ್ತು ಹತ್ಯೆ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us