ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!

100 ರೂಪಾಯಿಗಾಗಿ ದುರುಳರು ಸ್ನೇಹಿತನನ್ನೇ ಇರಿದು ಕೊಂದ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಲೀ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದೇ ಗಣೇಶ್ (27) ಜೀವಕ್ಕೆ ಕುತ್ತು ತಂದೊಡ್ಡಿದೆ. ಮದ್ಯಪಾನದ ಅಮಲಿನಲ್ಲಿದ್ದ ದುರುಳರು ಸ್ನೇಹಿತನನ್ನೇ ಇರಿದು ಕೊಲೆ ಮಾಡಿದ್ದಾರೆ. ಘಟನೆಯ ಪೂರ್ಣ ವಿವರ ಇಲ್ಲಿದೆ.

ಹಾಸನ: 100 ರೂಪಾಯಿಗಾಗಿ ಸ್ನೇಹಿತನನ್ನೇ ಇರಿದು ಕೊಂದ ದುರುಳರು!
ಗಣೇಶ್
Follow us
ಮಂಜುನಾಥ ಕೆಬಿ
| Updated By: Ganapathi Sharma

Updated on: Sep 14, 2024 | 5:32 PM

ಹಾಸನ, ಸೆಪ್ಟೆಂಬರ್ 14: ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಗಣೇಶ್ (27) ಎಂಬವರನ್ನು ಸ್ನೇಹಿತರೇ ಕೊಲೆ ಮಾಡಿದ್ದಾರೆ. ಕೇವಲ 100 ರೂಪಾಯಿ ಕೊಟ್ಟಿಲ್ಲವೆಂಬ ಕಾರಣಕ್ಕೆ ಮದ್ಯಪಾನದ ಅಮಲಿನಲ್ಲಿ ಸ್ನೇಹಿತರೇ ಆತನನ್ನು ಹತ್ಯೆ ಮಾಡಿರುವುದು ಗ್ರಾಮಸ್ಥರನ್ನು ದಂಗುಬಡಿಸಿದೆ.

ಗಣೇಶ್ ಗ್ರಾಮ ಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಾ ಮನೆಗೆ ಆಸರೆಯಾಗಿದ್ದ. ಹೇಳಿ ಕೇಳಿ ಬೆಳಿಗ್ಗೆಯೇ ಕೊಳಾಯಿಗೆ ನೀರು ಬಿಡುವ ಕೆಲಸ ಮುಗಿಯುತ್ತಿದ್ದರಿಂದ ಸಂಜೆಯಾಗುತ್ತಲೇ ಸ್ನೇಹಿತರ ಜೊತೆ ಸೇರುವ ಅಭ್ಯಾಸ ಇರಿಸಿಕೊಂಡಿದ್ದ. ಶುಕ್ರವಾರ ಕೂಡ ಸಂಜೆ ಬೇಗನೆ ಕೆಲಸ ಮುಗಿಸಿ ಗೆಳೆಯರ ಜೊತೆ ಒಟ್ಟಿಗೆ ಪಾರ್ಟಿ ಮಾಡಿದ್ದ. ಪಾರ್ಟಿಯೆಲ್ಲ ಮಗಿದ ಬಳಿಕ ಗಣೇಶ್​​ನ ಗೆಳೆಯ ರಘು ನೂರು ರೂಪಾಯಿ ಹಣ ಕೇಳಿದ್ದ ಎನ್ನಲಾಗಿದೆ. ಇದಕ್ಕೆ ಉತ್ತರಿಸಿದ್ದ ಗಣೇಶ್, ‘‘ಪದೇ ಪದೆ ಹಣ ಯಾಕೆ ಕೇಳುತ್ತೀಯಾ? ನನ್ ಹತ್ರ ದುಡ್ಡಿಲ್ಲ ಹೋಗು’’ ಎಂದು ಹೇಳಿದ್ದಕ್ಕೆ ಸಿಟ್ಟಾಗಿದ್ದ ರಘು ತನ್ನ ನಟೋರಿಯಸ್ ಗೆಳೆಯ ಮಧು ಎಂಬುವವನಿಗೆ ವಿಚಾರ ತಿಳಿಸಿದ್ದ. ಮೊದಲೇ ಕುಡಿದ ಅಮಲಿನಲ್ಲಿದ್ದ ಮಧು ಏಕಾಏಕಿ ಗಣೇಶ್ ಮೇಲೆ ಎಗರಿಬಿದ್ದಿದ್ದಾನೆ. ನನ್ನ ದೋಸ್ತನಿಗೆ ಹಣ ಕೊಡುವುದಿಲ್ಲ ಎನ್ನುತ್ತೀಯಾ ಎಂದು ಹಲ್ಲೆ ಮಾಡಲು ಮುಂದಾಗಿದ್ದಾನೆ. ಗಣೇಶ್ ತಪ್ಪಿಸಿಕೊಂಡು ಓಡಲು ಯತ್ನಿಸಿದರೂ ಬಿಡದೆ ಹಿಂಬಾಲಿಸಿ ಬಂದ ಪಾಪಿಗಳು ಇರಿದು ಕೊಂದು ಪರಾರಿಯಾಗಿದ್ದಾರೆ.

ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದಲ್ಲಿ ನಡೆದಿದ್ದೇನು?

ಗಣೇಶ್ ಹಾಗೂ ಆತನ ಸ್ನೇಹಿತರೆಲ್ಲ ಶುಕ್ರವಾರ ಸಂಜೆ ಚೀಕನಹಳ್ಲೀ ಗ್ರಾಮದ ಹೊಟೆಲ್ ಒಂದರಲ್ಲಿ ಜೊತೆಯಾಗಿಯೇ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮಾಡಿ ಮುಗಿಸಿ ರಾತ್ರಿಯಾಗುತ್ತಲೇ ಅಲ್ಲಿಂದ ಹೊರಟಿದ್ದಾರೆ. ಹೊರಗೆಬಂದಾಗ ರಘು ಗಶೇಶ್ ಬಳಿ 100 ರೂಪಾಯಿ ಕೇಳಿದ್ದಾನೆ. ಪದೇ ಪದೆ ಹಣ ಕೊಡುವುದಿಲ್ಲ ಎಂದಿದ್ದಕ್ಕೆ ಸಿಟ್ಟಾದ ರಘು ಜಗಳ ಶುರು ಮಾಡಿದ್ದಾನೆ. ರಘು ಜೊತೆಗೆ ಇದ್ದ ಮತ್ತೋರ್ವ ಗೆಳೆಯ ರೌಡಿ ಶೀಟರ್ ಮಧು, ಗಣೇಶ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಗಣೇಶ್ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ ಹಿಂಬಾಲಿಸಿ ಓಡಿದ ದುರುಳರು ಅಟ್ಟಾಡಿಸಿದ್ದಾರೆ.

ರಸ್ತೆ ಬದಿಯಲ್ಲೇ ನಡೆಯಿತು ಹತ್ಯೆ

ಗಣೇಶ್​​ನನ್ನು ಅಟ್ಟಾಡಿಸಿಕೊಂಡು ಹೋದ ರಘು ಮತ್ತು ಮಧು ರಸ್ತೆ ಬದಿಯಲ್ಲೇ ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇದೀಗ ಮನೆ ಮಗನನ್ನು ಕಳೆದುಕೊಂಡ ಹೆತ್ತವರ ರೋದನ ಮುಗಿಲು ಮುಟ್ಟಿದ್ದು ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ

ಬೇಲೂರು ತಾಲ್ಲೂಕಿನ ಕುಂಬಾರಹಳ್ಳಿ ಗಣೇಶ್ ಕಳೆದ ಒಂದು ವರ್ಷದಿಂದ ಚೀಕನಹಳ್ಳಿಯ ಗ್ರಾಮಪಂಚಾಯ್ತಿಯಲ್ಲಿ ನೀರುಗಂಟಿಯಾಗಿ ಕೆಲಸಕ್ಕೆ ಸೇರಿಕೊಂಡಿದ್ದ, ಬೆಳಿಗ್ಗೆ ಐದು ಗಂಟೆಗೆಲ್ಲಾ ಎದ್ದು ಬೇಗನೆ ಕೆಲಸ ಮುಗಿಸಿದರೆ ಬಹುತೇಕ ಸಮಯ ಹಾಯಾಗಿ ಇರುತ್ತಿದ್ದ. ಸ್ನೇಹಿತರ ಜೊತೆ ಬೆರೆಯುತ್ತಿದ್ದ. ಚೀಕನಹಳ್ಳಿಯ ಆಟೋ ನಿಲ್ದಾಣದ ಬಳಿ ಇರ್ತಿದ್ದ ರಘು ಜೊತೆಗೆ ಗಳೆತನ ಹೊಂದಿದ್ದ ಗಣೇಶ್ ಆಗಾಗ ಗೆಳೆಯರ ಜೊತೆ ಸೇರಿ ಪಾರ್ಟಿ ಮಾಡುತ್ತಿದ್ದ. ಶುಕ್ರವಾರ ಸಂಜೆ ಕೂಡ ಅದೇ ನಡೆದಿದೆ. ಆದರೆ, ನಂತರ ನಡೆದಿದ್ದೇ ದುರಂತ.

ಇದನ್ನೂ ಓದಿ: ಕಲಬುರಗಿ: ಗ್ರಾಮ ಪಂಚಾಯತಿ ಮಾಜಿ ಸದಸ್ಯನ ತಲೆಗೆ 3 ಗುಂಡು ಹೊಡೆದು ಬರ್ಬರ ಹತ್ಯೆ

ಅರೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಹಾಸನ ಎಸ್​ಪಿ ಮೊಹಮದ್ ಸುಜೀತಾ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ