ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್​ಗೆ ಜೈಲುಶಿಕ್ಷೆ: ತಂದೆ, ಮಕ್ಕಳು 2 ವರ್ಷ ಜೈಲುಪಾಲು

50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.

ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್​ಗೆ ಜೈಲುಶಿಕ್ಷೆ: ತಂದೆ, ಮಕ್ಕಳು 2 ವರ್ಷ ಜೈಲುಪಾಲು
ಬಿಜೆಪಿ ಶಾಸಕ ನೆಹರು ಓಲೆಕಾರ್‌Image Credit source: varthabharati.in
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 13, 2023 | 8:12 PM

ಬೆಂಗಳೂರು: 50 ಲಕ್ಷ ರೂ. ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪದಡಿ ಹಾವೇರಿ ಬಿಜೆಪಿ ಶಾಸಕ ನೆಹರು ಓಲೆಕಾರ್‌ (Nehru olekar) ಮತ್ತು ಪುತ್ರರಾದ ಮಂಜುನಾಥ್‌, ದೇವರಾಜ್‌ ಓಲೆಕಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ 2 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ. ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲ ಕಾಮಗಾರಿಯಲ್ಲಿ ಶಾಸಕ ಓಲೆಕಾರ್‌ ವಿರುದ್ಧ ಸ್ವಜನ ಪಕ್ಷಪಾತ ಆರೋಪಿಸಿದೆ.  ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆ ಜನಪ್ರತಿನಿಧಿಗಳ ನ್ಯಾಯಾಲಯದಿಂದಲೇ‌ ಜಾಮೀನು ಮಂಜೂರು ಮಾಡಲಾಗುತ್ತದೆ.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಶಿಕ್ಷೆ

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಶಿಕ್ಷೆ ವಿಧಿಸಲಾಗಿದೆ. ಒಟ್ಟು 8 ಕೇಸ್​ಗಳಲ್ಲಿ 1.38 ಕೋಟಿ ಹಣ ಪಾವತಿಸಬೇಕು. ಇಲ್ಲವಾದರೆ ತಲಾ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ. ಪ್ರೀತ್​ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ: ಚೆಕ್ ಬೌನ್ಸ್ ಪ್ರಕರಣದಲ್ಲಿ ವಿಶೇಷ ಕೋರ್ಟ್​ನಿಂದ ಶಿಕ್ಷೆ

ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ

ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಕಾಮಗಾರಿಯಲ್ಲಿ ಅಕ್ರಮ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಮಾಜಿ ಶಾಸಕ ಎಸ್​. ಮುನಿರಾಜ್​ ನಿನ್ನೆ ಆರೋಪಿಸಿದ್ದರು. ಸದ್ಯ ಈ ವಿಚಾರವಾಗಿ ತಮ್ಮ ವಿರುದ್ಧದ ಆರೋಪಕ್ಕೆ ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್‌ ಶಾಸಕ R.ಮಂಜುನಾಥ್‌ (R Manjunath) ಸ್ಪಷ್ಟನೆ ನೀಡಿದ್ದಾರೆ. ಇಂದು (ಫೆ. 12) ಸುದ್ದಿಗೊಷ್ಠಿಯಲ್ಲಿ ಮಾತನಾಡಿ, ದಾಸರಹಳ್ಳಿ ಕ್ಷೇತ್ರದಲ್ಲಿ ಅಷ್ಟು ದೊಡ್ಡ ಮೊತ್ತದ ಕಾಮಗಾರಿಗಳೇ ನಡೆದಿಲ್ಲ. ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಕ್ಷೇತ್ರದ ಕಾಮಗಾರಿ ಸಂಬಂಧ ಬಾಕಿ ಹಣವನ್ನೇ ಸರ್ಕಾರ ರಿಲೀಸ್ ಮಾಡ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: HDK ಸಿಎಂ ಆಗಿದ್ದಾಗ ದಾಸರಹಳ್ಳಿಗೆ 30 ಕೋಟಿ ರೂ. ಅನುದಾನ, ಶಾಸಕರು ಪರ್ಸೆಂಟೇಜ್​ ತೆಗೆದುಕೊಂಡು ಬಿಲ್‌ ಮಾಡಿರುವ ಆರೋಪ

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:08 pm, Mon, 13 February 23