ಹಾವೇರಿ: ಆಸ್ತಿ ಜಗಳಕ್ಕೆ ಬಲಿಯಾದ ತಾಯಿ-ಮಗ; ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು

ಆಸ್ತಿ ವಿವಾದದ ಹಿನ್ನೆಲೆ ತಾಯಿ ಮತ್ತು ಮಗನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರಿ ಗ್ರಾಮದಲ್ಲಿ ನಡೆದಿದೆ. ಕೋರ್ಟ್ ಮೂಲಕ ಮನೆ ವಶಕ್ಕೆ ಪಡೆದಿದ್ದರಿಂದ ರೊಚ್ಚಿಗೆದ್ದು ಹತ್ಯೆಗೈಯಲಾಗಿದೆ. ಈ ಕುರಿತಾಗಿ ಆಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಆಸ್ತಿ ಜಗಳಕ್ಕೆ ಬಲಿಯಾದ ತಾಯಿ-ಮಗ; ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆಗೈದ ದುಷ್ಕರ್ಮಿಗಳು
ಪ್ರಾತಿನಿಧಿಕ ಚಿತ್ರ
Image Credit source: Getty images

Updated on: Sep 25, 2026 | 5:34 PM

ಹಾವೇರಿ, ಸೆಪ್ಟೆಂಬರ್​​ 25: ಜಿಲ್ಲೆಯ ಹಾನಗಲ್ ತಾಲೂಕಿನ ಕುಸನೂರು ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ತಾಯಿ ಮತ್ತು ಮಗನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪ್ರೇಮಕ್ಕ ಬಡಿಗೇರ (55) ಹಾಗೂ ಪುತ್ರ ಅವಿನಾಶ್ ಬಡಿಗೇರ (38) ಕೊಲೆಯಾದ ದುರ್ದೈವಿಗಳು. ತಿರಕಯ್ಯ ಹೊಸಮಠ ಹಾಗೂ ಬಸವರಾಜ ಹೊಸಮಠ ಎಂಬುವವರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಕೆಲವು ವರ್ಷಗಳ ಹಿಂದೆ ಮನೆ ಮತ್ತು ಜಾಗವನ್ನು ಖರೀದಿ ಮಾಡಲಾಗಿತ್ತು. ಆದರೆ ಆಸ್ತಿಯನ್ನು ಖರೀದಿಸಿದ ನಂತರವೂ ಅವರ ಹೆಸರಿಗೆ ವರ್ಗಾವಣೆ ಮಾಡಿರಲಿಲ್ಲ. ಈ ಸಂಬಂಧ ಕಾನೂನು ಹೋರಾಟ ನಡೆಸಿದ್ದ ಪ್ರೇಮಕ್ಕ ಬಡಿಗೇರ ನ್ಯಾಯಾಲಯದ ಮೂಲಕ ಜಾಗ ಹಾಗೂ ಮನೆಯನ್ನು ಮರಳಿ ತಮ್ಮ ವಶಕ್ಕೆ ಪಡೆದುಕೊಂಡಿದ್ದರು.

ಮಾರಕಾಸ್ತ್ರಗಳಿಂದ ತಾಯಿ, ಮಗನ ಹತ್ಯೆ

ನ್ಯಾಯಾಲಯದ ಮೂಲಕ ಮನೆ ಮತ್ತು ಜಾಗವನ್ನು ವಶಕ್ಕೆ ಪಡೆದಿದ್ದರಿಂದ ರೊಚ್ಚಿಗೆದ್ದ ಆರೋಪಿಗಳು, ತಾಯಿ ಹಾಗೂ ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಆಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾರು ಮತ್ತು ಬೈಕ್​ ಮಧ್ಯೆ ಅಪಘಾತ: ಪ್ರಾಣಾಪಾಯದಿಂದ ​ಸವಾರ ಪಾರು

ಮತ್ತೊಂದು ಪ್ರಕಣದಲ್ಲಿ ಆನೇಕಲ್ ವ್ಯಾಪ್ತಿಯ ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಹೆದ್ದಾರಿ ಮತ್ತು ರೈಲ್ವೆ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಜಿಬಿಎ ನಿಮಯದಿಂದ ಪತ್ತೆಯಾಯ್ತು ಕೊಲೆ ಪ್ರಕರಣ: ಸೈಟ್ ಕ್ಲೀನ್ ಮಾಡಲು ಹೋದಾಗ ಕೊಳೆತ ಶವ ಪತ್ತೆ!

ಕಾಮಗಾರಿ ವೇಳೆ ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಇರಿಸಲಾಗಿದ್ದ ಡಿವೈಡರ್ ಸಿಮೆಂಟ್ ಬ್ಲಾಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಅದೇ ವೇಳೆ ಕಾರಿನ ಹಿಂಬದಿ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ರಸ್ತೆಗೆ ಉರುಳಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ಬರುತ್ತಿದ್ದ ವಾಹನಗಳು ಸಡನ್ ಬ್ರೇಕ್ ಹಾಕಿದ್ದರಿಂದ ದೊಡ್ಡ ದುರಂತ ತಪ್ಪಿದೆ. ಭೀಕರ ಅಪಘಾತದ ದೃಶ್ಯ ಕಾರಿನ ಡ್ಯಾಶ್‌ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವರದಿ: ಅಣ್ಣಪ್ಪ ಬಾರ್ಕಿ

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us