ಭಟ್ಕಳದಲ್ಲಿ ಮುಂದುವರಿದ ಹಿಂದೂ ಮುಸ್ಲಿಂ ಸಂಘರ್ಷ: ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ

ಉತ್ತರ ಕನ್ನಡ ಜಿಲ್ಲೆಯ ಕೋಮು ಸ್ಲೂಕ್ಷ್ಮ ಭಟ್ಕಳದಲ್ಲಿ ಹಿಂದೂ ಮುಸ್ಲಿಂ ಸಂಘರ್ಷ ಮುಂದುವರಿದಿದೆ. ಭಟ್ಕಳದ ದೇವಿ ನಗರ ಎಂಬ ಹೆಸರಿನ ನಾಮಫಲಕ ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡದ ಹಿನ್ನಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ಇದರಿಂದ ಕುಪಿತಾರ ಹಿಂದೂ ಕಾರ್ಯಕರ್ತರು, ಅನಧಿಕೃತ ಮಸೀದಿ ತೆರವಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದಕ್ಕೆ ದುಬೈನಿಂದ ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಭಟ್ಕಳದಲ್ಲಿ ಮುಂದುವರಿದ ಹಿಂದೂ ಮುಸ್ಲಿಂ ಸಂಘರ್ಷ: ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ
ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರಿಗೆ ದುಬೈನಿಂದ ಬೆದರಿಕೆ ಹಾಕಿದ ಜಾಲಿ ಗ್ರಾಮದ ಮುಕ್ತಾರ್ ಮಹ್ಮದ್ ಕೊಟ್ಟಿಕೋಡಿ (ಎಡಚಿತ್ರ) ಮತ್ತು ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು (ಬಲಚಿತ್ರ)
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: Rakesh Nayak Manchi

Updated on: Jan 18, 2024 | 6:51 AM

ಕಾರವಾರ, ಜ.18: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೋಮು ಸ್ಲೂಕ್ಷ್ಮ ಭಟ್ಕಳದಲ್ಲಿ (Bhatkal) ಹಿಂದೂ ಮುಸ್ಲಿಂ ಸಂಘರ್ಷ ಮುಂದುವರಿದಿದೆ. ಭಟ್ಕಳದ ದೇವಿ ನಗರ ಎಂಬ ಹೆಸರಿನ ನಾಮಫಲಕ ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡದ ಹಿನ್ನಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ಇದರಿಂದ ಕುಪಿತಾರ ಹಿಂದೂ ಕಾರ್ಯಕರ್ತರು, ಅನಧಿಕೃತ ಮಸೀದಿ ತೆರವಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ನಡೆಸಿದ್ದಕ್ಕೆ ದುಬೈನಿಂದ (Dubai) ಹಿಂದೂ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ.

ಭಟ್ಕಳ ತಾಲೂಕಿನ ಜಾಲಿ ಪಟ್ಟಣದಲ್ಲಿ ಹಿಂದೂ ದೇವರ ಹೆಸರಿನಲ್ಲಿ ಇರುವ ದೇವಿ ನಗರ ಎಂಬ ಹೆಸರಿನ ನಾಮಫಲಕವನ್ನು ತೆರವು ಗೊಳಿಸಲು ಮದರಸಾದ ಗುರುಗಳಿಂದ ಒತ್ತಡ ಹಾಕಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ನಾಮಫಲಕ ತೆರವುಗೊಳಿಸಲಾಗಿದೆ. ನಾಮಫಲಕ ತೆರವಿಗೆ ವಿರೋಧಿಸಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗಲಿದೆ: ಸಂಸದ ಅನಂತಕುಮಾರ್ ಹೆಗಡೆ

ಅಲ್ಲದೆ, ಜಾಲಿ ಪಟ್ಟಣದಲ್ಲಿರುವ ಅನಧಿಕೃತ ಮಸೀದಿ ತೆರವುಗೊಳಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ಹರೀಶ, ದೇಯಾ ಹಾಗೂ ಮಹೇಶ ಎಂಬವರಿಗೆ ದುಬೈನಿಂದ ವಿಡಿಯೋ ಮೂಲಕ ಬೆದರಿಕೆ ಹಾಕಲಾಗಿದೆ. ಭಟ್ಕಳದ ಜಾಲಿಯಲ್ಲಿ ಗುರುಗಳನ್ನು ಮುಟ್ಟಿದರೇ ಮನೆಗೆ ನುಗ್ಗಿ ಹೊಡೆಯುತ್ತೇನೆ ಎಂದು ಅವಾಚ್ಯ ಶಬ್ಧದಿಂದ ನಿಂದಿಸಿ ದಮ್ಕಿ ಹಾಕಲಾಗಿದೆ.

ಭಟ್ಕಳದ ಜಾಲಿ ಗ್ರಾಮದ ಮುಕ್ತಾರ್ ಮಹ್ಮದ್ ಕೊಟ್ಟಿಕೋಡಿ ಎಂಬಾತ ದಮ್ಕಿ ಹಾಕಿದ್ದಾಗಿ ಆರೋಪಿಸಿ ಹಿಂದೂ ಕಾರ್ಯಕರ್ತರು ಭಟ್ಕಳ ನಗರ ಠಾಣೆಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು, ಸೆಕ್ಷನ್ 504, 506, 507 ರ ಅಡಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ