ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರು; ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

| Updated By: ವಿವೇಕ ಬಿರಾದಾರ

Updated on: Jul 11, 2022 | 8:00 PM

ಹಿಂದು ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ.

ಹಿಂದೂ ಯುವತಿಯರನ್ನು ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರು; ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಹಲ್ಲೆಗೊಳಗಾದ ಯುವಕ
Follow us on

ಶಿವಮೊಗ್ಗ: ಹಿಂದು (Hindu) ಯುವತಿಯರನ್ನು (Girl) ಚುಡಾಯಿಸುತ್ತಿದ್ದ ಅನ್ಯ ಕೋಮಿನ ಯುವಕರನ್ನು ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನ (Boy) ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ (Shivamogga) ಬಾಲರಾಜ್ ಅರಸು ರಸ್ತೆಯ ಮಥುರಾ ಪ್ಯಾರಡೈಸ್ ಹೋಟೆಲ್ ಬಳಿ ನಡೆದಿದೆ. ಹರ್ಷ (18) ಹಲ್ಲೆಗೊಳಗಾದ ಯುವಕ. ಹರ್ಷನಿಗೆ 8 ಜನರು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಹರ್ಷನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆಗೊಳಗಾದ ಹರ್ಷ, ಹಿಂದು‌ ಜಾಗರಣ ವೇದಿಕೆ ಕಾರ್ಯಕರ್ತನಾಗಿದ್ದು, ಐಟಿಐ ವ್ಯಾಸಂಗ ಮಾಡುತ್ತಿದ್ದಾನೆ. ಜಯನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:00 pm, Mon, 11 July 22