Bomb Threat: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!

Kempegowda International Airport: ವಿಮಾನದಲ್ಲಿ ಬಾಂಬ್ ಕುರಿತ ಹೇಳಿಕೆ ನೀಡಿ ಆತಂಕ ಸೃಷ್ಟಿಸಿದ್ದು ಅಕ್ಷಮ್ಯ ಅಪರಾಧವಾಗಿದೆ ಮತ್ತು ಇದೀಗ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

Bomb Threat: ವಿಮಾನ ಹೊರಡುವುದಕ್ಕೂ ಕೆಲವೇ ಕ್ಷಣ ಮುನ್ನ ಬ್ಯಾಗ್​​ನಲ್ಲಿ ಬಾಂಬ್​ ಇದೆ ಎಂದ ವ್ಯಕ್ತಿ!
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ
Follow us
Ganapathi Sharma
|

Updated on: Jan 30, 2024 | 9:33 AM

ಬೆಂಗಳೂರು, ಜನವರಿ 30: ಬ್ಯಾಗ್​ನಲ್ಲಿ ಬಾಂಬ್ (Bomb Threat) ಇದೆ ಎಂದು ವಿಮಾನ ಹೊರಡುವುದಕ್ಕೂ ಮುನ್ನ ಕೆಲವೇ ಕ್ಷಣಗಳ ಮುನ್ನ ಹೇಳಿದ ವ್ಯಕ್ತಿಯೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ (Kempegowda International Airport) ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಭಾನುವಾರ ಸಂಜೆ ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಆರೋಪಿಯನ್ನು ಖಾಸಗಿ ಕಂಪನಿ ಉದ್ಯೋಗಿ ಸಜು ಕೆ ಕುಮಾರನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಗೆ ತೆರಳಲು ಏರ್ ಇಂಡಿಯಾ ವಿಮಾನದಲ್ಲಿ ಕುಳಿತಿದ್ದಾಗ ಸಜು ಕುಮಾರ್ ವಿಕೃತಿ ಮೆರೆದಿದ್ದರು. ಇದರಿಂದಾಗಿ ಭದ್ರತಾ ಸಿಬ್ಬಂದಿ ಬೇಸ್ತು ಬೀಳುವಂತಾಗಿತ್ತು.​​​​

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ಬೆಂಗಳೂರಿನಿಂದ ಕೊಚ್ಚಿಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿದ್ದ ಸಜು ಕುಮಾರ್ (48) ಇನ್ನೇನು ವಿಮಾನ ಟೇಕಾಫ್ ಆಗಬೇಕು ಎನ್ನುವಷ್ಟರಲ್ಲಿ ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದ.

ವಿಮಾನ ನಿಲ್ದಾಣ ಪೊಲೀಸರ ಪ್ರಕಾರ, ಈ ಘಟನೆಯು ಭಾನುವಾರ ಸಂಜೆ 5.25 ಕ್ಕೆ ಸಂಭವಿಸಿದೆ. ವಿಮಾನ ಸಂಖ್ಯೆ ‘I5 990’ ರ ನಿರ್ಗಮನಕ್ಕೆ ಕೇವಲ ಐದು ನಿಮಿಷಗಳ ಮೊದಲು ಆರೋಪಿಯು ಬ್ಯಾಗ್​ನಲ್ಲಿ ಬಾಂಬ್ ಇದೆ ಎಂದು ಹೇಳಿದ್ದಾನೆ. ಏರ್‌ಲೈನ್ ಸಿಬ್ಬಂದಿಗೆ ಬ್ಯಾಗ್ ಪರಿಶೀಲಿಸಲೂ ಅನುವು ಮಾಡಿಕೊಡಲಿಲ್ಲ. ಪರಿಣಾಮವಾಗಿ ತಕ್ಷಣವೇ ಆತನನ್ನು ವಿಮಾದಿಂದ ಇಳಿಸಲಾಯಿತು. ನಂತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ತಪಾಸಣೆಗೆ ಒಳಪಡಿಸಿದರು.

ಆರೋಪಿ ವಿರುದ್ಧ ಎಫ್​​ಐಆರ್

ಬಳಿಕ ಆರೋಪಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 505 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಹೇಳಿಕೆಗಳಿಗೆ ಸಂಬಂಧಿಸಿದ್ದಾಗಿದ್ದು, ಆರೋಪ ಸಾಬೀತಾದರೆ ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

ಇದು ಅಕ್ಷಮ್ಯ ಅಪರಾಧವಾಗಿದೆ ಮತ್ತು ಇದೀಗ ಆರೋಪಿಯನ್ನು ವಿಚಾರಣೆಗೆ ಒಳಪಡಿಸಲು ನ್ಯಾಯಾಲಯದಿಂದ ಅನುಮತಿ ಕೋರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಗುರಾಯಿಸಿ ನಿಂದಿಸಿದ ಯುವಕನಿಗೆ ಚಾಕು ಇರಿತ

ಆರೋಪಿ ಕುಮಾರನ್ ಕೇರಳದ ತ್ರಿಶೂರ್‌ಗೆ ಹೋಗಲು ಕೊಚ್ಚಿಗೆ ತೆರಳುವ ವಿಮಾನವೇರಿದ್ದ ಎಂದು ಮೂಲಗಳು ತಿಳಿಸಿವೆ.

ಅಸಲಿಗೆ ವಿಮಾನದಲ್ಲಿ ಆಗಿದ್ದೇನು?

ಆರೋಪಿಯ ಸಹೋದರಿಯ ತಂಗಿಯ ನವಜಾತ ಶಿಶು ಹೆರಿಗೆಯ ಸಮಯದಲ್ಲಿ ಸಾವನ್ನಪ್ಪಿತ್ತು. ಹೀಗಾಗಿ ತರಾತುರಿಯಲ್ಲಿ ಊರಿಗೆ ತೆರಳಲು ಆರೋಪಿ ವಿಮಾನ ಪ್ರಯಾಣ ಆಯ್ಕೆ ಮಾಡಿಕೊಂಡಿದ್ದ. ಭದ್ರತಾ ತಪಾಸಣೆ ಎಲ್ಲ ಮುಗಿದು ವಿಮಾನದಲ್ಲಿ ಕುಳಿತ ನಂತರವೂ ವಿಮಾನದೊಳಗಿನ ಹೆಚ್ಚುವರಿ ತಪಾಸಣೆಯಿಂದ ಆತ ಸಿಟ್ಟಾಗಿದ್ದ. ಹೀಗಾಗಿ ತಪಾಸಣೆ ನಡೆಸುತ್ತಿದ್ದ ಸಿಬ್ಬಂದಿ ಬಳಿ, ನಾನೇನು ಬಾಂಬ್ ಅಥವಾ ಚಾಕುವನ್ನು ಹೊತ್ತೊಯ್ಯುತ್ತಿದ್ದೇನೆ ಎಂದು ಶಂಕಿಸಿದ್ದೀರಾ ಎಂದು ಹೇಳಿದ್ದ ಎಂಬುದಾಗಿ ಮೂಲಗಳು ತಿಳಿಸಿವೆ. ನವಜಾತ ಶಿಶುವಿನ ಮರಣವನ್ನು ದೃಢಪಡಿಸಿದ ನಂತರ, ಕುಮಾರನ್ ಕ್ಷಮೆಯಾಚಿಸಿದರೆ ಕೇವಲ ದಂಡದೊಂದಿಗೆ ಆತನನ್ನು ಬಿಟ್ಟುಬಿಡುವ ಸಾಧ್ಯತೆಯೂ ಇದೆ ಎಂದು ಮಾಧ್ಯಮ ವರದಿಯೊಂದು ಉಲ್ಲೇಖಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್