Hassan: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು

| Updated By: Ganapathi Sharma

Updated on: Mar 01, 2023 | 11:17 PM

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ.  

Hassan: ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಡಿಕ್ಕಿ: ಬೈಕ್​ ಸವಾರ ಸ್ಥಳದಲ್ಲೇ ಸಾವು
ಆರಗ ಜ್ಞಾನೇಂದ್ರ
Image Credit source: kannadaprabha
Follow us on

ಹಾಸನ: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಬೆಂಗಾವಲು ವಾಹನ ಡಿಕ್ಕಿಯಾಗಿ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ನಡೆದಿದೆ. ಚಿಕ್ಕಗಂಡಸಿ ಗ್ರಾಮದ ನಿವಾಸಿ ರಮೇಶ್‌ (45) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಸಚಿವರು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಈ ವೇಳೆ ಬಂಕ್‌ನಿಂದ ಬೈಕ್ ಸವಾರ ಬೆಂಗಾವಲು ವಾಹನಕ್ಕೆ ದಿಢೀರ್ ಅಡ್ಡ ಬಂದಿದ್ದಾರೆ ಎನ್ನಲಾಗಿದೆ. ಅವರಿಗೆ ಕೆಎ 13 ಜಿ 1467 ಸಂಖ್ಯೆಯ ಪೊಲೀಸ್ ವಾಹನ ಡಿಕ್ಕಿಯಾಗಿದೆ. ಬೈಕ್ ಸವಾರ ರಮೇಶ್ ಹೆಲ್ಮೆಟ್‌ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ರಮೇಶ್ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

ವಾಹನ ನಿಲ್ಲಿಸದೇ ತೆರಳಿದ ಗೃಹ ಸಚಿವರು; ಆರೋಪ

ಅಪಘಾತವಾದರೂ ವಾಹನ ನಿಲ್ಲಿಸದೆ ಗೃಹಸಚಿವರು ತೆರಳಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಸವಾರ ಪ್ರಾಣ ಕಳೆದುಕೊಂಡರೂ ಗೃಹಸಚಿವರು ಮಾನವೀಯತೆ ಮರೆತು ತೆರಳಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತ ಹೆಚ್ಚಿನ ವಿವರ ತಿಳಿದುಬರಬೇಕಿದೆ.

ಮತ್ತಷ್ಟು  ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 11:04 pm, Wed, 1 March 23