AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ

ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ.

ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ: ಮೂವರ ಬಂಧನ
ಬಂಧಿತ ಆರೋಪಿಗಳು.
TV9 Web
| Edited By: |

Updated on: May 22, 2022 | 4:02 PM

Share

ಬೆಂಗಳೂರು: ಮನೆ ಬಾಡಿಗೆ ಕೇಳುವ ನೆಪದಲ್ಲಿ ಬಂದು ಚಿನ್ನಾಭರಣ ದರೋಡೆ ಪ್ರಕರಣ ಹಿನ್ನೆಲೆ ಬೆಂಗಳೂರಿನ ನಂದಿನಿ ಲೇಔಟ್‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ನಂದನ್, ಜಿಯಾವುಲ್ಲಾ ಖಾನ್, ಶರತ್ ಬಂಧಿತ ಆರೋಪಿಗಳು. ಬಾಡಿಗೆ ಮನೆ ನೋಡುವ ನೆಪದಲ್ಲಿ ಬಂದಿದ್ದ ದರೋಡೆಕೋರರು, ಬಾಡಿಗೆ ಮನೆ ಗಲೀಜಾಗಿದೆ ನೋಡಿ ಎಂದಿದ್ದರು. ಈ ವೇಳೆ ಮನೆಯೊಳಗೆ ಮಾಲಕಿ ಹೋದಾಗ ಕೈಕಾಲು ಕಟ್ಟಿದ್ರು. ಕೈಕಾಲು ಕಟ್ಟಿ 48 ಗ್ರಾಂ ಮಾಂಗಲ್ಯ ಸರ, ಓಲೆ ಕಿತ್ತು ಪರಾರಿಯಾಗಿದ್ದರು. ಸದ್ಯ ಆರೋಪಿಗಳನ್ನು ಬಂಧಿಸಿದ್ದು, 1.5 ಲಕ್ಷ ಮೌಲ್ಯದ ಚಿನ್ನಾಭರಣ, 2 ಬೈಕ್, ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈಜು ಬಾರದೆ ಕರೆಯಲ್ಲಿ ಮುಳುಗಿ ವ್ಯಕ್ತಿ ಸಾವು

ಕೊಪ್ಪಳ: ಕೆರೆಯಲ್ಲಿ ಈಜಲು ಹೋಗಿ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ತಾಲೂಕಿನ ರಘುನಾಥನಹಳ್ಳಿ ಬಳಿ ನಡೆದಿದೆ. ಪಕ್ಕೀರಪ್ಪ ನಿಟ್ಟಾಲಿ (30) ಮೃತ ವ್ಯಕ್ತಿ. ರಘುನಾಥನ ಹಳ್ಳಿಯ ಕೆರೆಯಲ್ಲಿ ಸ್ನಾನಕ್ಜೆ ಹೋಗಿದ್ದ ಪಕ್ಕೀರಪ್ಪ, ಈಜು ಬಾರದೆ ಕೆರೆಯಲ್ಲಿ‌ ಮುಳುಗಿ ದುರ್ಮರಣ ಹೊಂದಿದ್ದಾನೆ. ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಧುನಿಕ ಶಕುಂತಲಾ ಕಥನ: ದಮನಕ್ಕೊಳಗಾದ ಹೆಣ್ಣುಮಕ್ಕಳಿಗೆ ನನ್ನ ಜೀವನ ಸ್ಫೂರ್ತಿಯಾಗಲಿ

ಎರಡು ಬೈಕ್​ಗಳ ನಡುವೆ ಅಪಘಾತ: ಓರ್ವ ವ್ಯಕ್ತಿ ಸಾವು

ಚಿಕ್ಕಬಳ್ಳಾಪುರ: ಎರಡು ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ರೈತ ಮುನಿವೆಂಕಟರಾಯಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ದೇವಸ್ಥಾನ ಹೊಸಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ. ಹೆದ್ದಾರಿಯಲ್ಲಿ ಯೂ ಟರ್ನ್ ತೆಗೆದುಕೊಳ್ಳುವಾಗ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಕಾಲುವೆಗೆ ಬಿದ್ದು ಬಾಲಕ ಸಾವು:

ಕಾರವಾರ: ಮನೆಯ ಹಿಂಬದಿಯ ಕಾಲುವೆಗೆ ಬಿದ್ದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದಿದೆ. ವಿಜೇತ ಗಣಪತಿ ನಾಯಕ್ (4) ಸಾವನ್ನಪ್ಪಿದ ಬಾಲಕ. ನಿನ್ನೆ ತಮ್ಮ ಮನೆ ಹಿಂಬದಿಯ ಹಿತ್ತಲದಲ್ಲಿ ಆಟವಾಡುತ್ತಿದ್ದಾಗ ಕಾಲುವೆಗೆ ಬಾಲಕ ಬಿದ್ದಿದ್ದಾನೆ. ಕಾಲುವೆಗೆ ಬಿದ್ದು ತೀವ್ರ ನೀರು ಕುಡಿದು ಅಸ್ತವ್ಯಸ್ತತವಾಗಿದ್ದ ಬಾಲಕ, ಶಿರಾಲಿ ಪ್ರಾಥಮಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!